ಪಾಡ್ದನ ಕವಿ ಗಿಡಿಗೆರೆ ರಾಮಕ್ಕ ಮೊಗ್ಗೇರ್ತಿ ಅವರಿಗೆ ಬಿಂದುಶ್ರೀ ಪ್ರಶಸ್ತಿ ಪ್ರದಾನ

Call us

ಕುಂದಾಪ್ರ ಡಾಟ್ ಕಾಂ ಸುದ್ದಿ.
ಬೈಂದೂರು: ಕಲೆ, ಸಾಹಿತ್ಯ ಹಾಗೂ ಸಾಂಸ್ಕೃತಿಕ ಕ್ಷೇತ್ರಕ್ಕೆ ಪ್ರೋತ್ಸಾಹಿಸುವುದು ಮತ್ತು ಅದರಲ್ಲಿ ಸಕ್ರೀಯವಾಗಿ ಭಾಗವಹಿಸುವುದರಿಂದ ಮಾನವನ ಬೌದ್ಧಿಕ ಸ್ವಾಸ್ಥ್ಯ ಹೆಚ್ಚುತ್ತದೆ ಎಂದು ನಿವೃತ್ತ ಬ್ಯಾಂಕ್ ಅಧಿಕಾರಿ ವಸಂತ ಹೆಗ್ಡೆ ಹೇಳಿದರು.

Call us

ಮಂಗಳವಾರ ಇಲ್ಲಿನ ಸುರಭಿ ರಿ. ಬೈಂದೂರು ಆಶ್ರಯದಲ್ಲಿ ಆಯೋಜಿಸಲಾದ ಮೂರು ದಿನಗಳ ಸುರಭಿ ಜೈಸಿರಿ ಸಮಾರೋಪ ಹಾಗೂ ಬಿಂದಶ್ರೀ ಪ್ರಶಸ್ತಿ ಪ್ರಧಾನ ಸಮಾರಂಭದಲ್ಲಿ ಅವರು ಮಾತನಾಡಿದರು.

ತುಳುನಾಡಿನ ಪಾಡ್ದನ ಕವಿ ಹಾಗೂ ಗಾಯಕಿ ಗಿಡಿಗೆರೆ ರಾಮಕ್ಕ ಮೊಗ್ಗೇರ್ತಿ ಅವರಿಗೆ ಬಿಂದುಶ್ರೀ ಪ್ರಶಸ್ತಿ ಪ್ರದಾನಿಸಲಾಯಿತು. ಭರತನಾಟ್ಯ ಗುರು ವಿದ್ವಾನ್ ಚಂದ್ರಶೇಖರ ನಾವಡ ಅವರಿಗೆ ಗುರುವಂದನೆ ಸಲ್ಲಿಸಲಾಯಿತು. ಭ್ರಮರ ಉಡುಪ ಅವರನ್ನು ಗೌರವಿಸಲಾಯಿತು.

Call us

ಭಾರತೀಯ ಜೀವವಿಮಾ ನಿಗಮದ ಅಭಿವೃದ್ಧಿ ಅಧಿಕಾರಿ ಆರ್. ಸೋಮನಾಥನ್ ಅಧ್ಯಕ್ಷತೆ ವಹಿಸಿದ್ದರು. ಗಿಡಿಗೆರೆ ರಾಮಕ್ಕ ಅವರ ಪುತ್ರ ಲಕ್ಷ್ಮಣ ಉಪಸ್ಥಿತರಿದ್ದರು.

ಸುರಭಿಯ ಉಪಾಧ್ಯಕ್ಷ ಅಬ್ದುಲ್ ರವೂಫ್ ಪ್ರಶಸ್ತಿ ಪುರಸ್ಕೃತರ ಪರಿಚಯ ಮಾಡಿದರು. ಸುರಭಿ ಸಂಸ್ಥೆಯ ವ್ಯವಸ್ಥಾಪಕರಾದ ಕೃಷ್ಣಮೂರ್ತಿ ಉಡುಪ ಸ್ವಾಗತಿಸಿದರು. ಕಾರ್ಯದರ್ಶಿ ಭಾಸ್ಕರ ಬಾಡ ವಂದಿಸಿದರು. ನಿರ್ದೇಶಕರಾದ ಸುಧಾಕರ ಪಿ. ಬೈಂದೂರು ಕಾರ್ಯಕ್ರಮ ನಿರೂಪಿಸಿದರು.

ಬಳಿಕ ಸುರಭಿ ಭರತನಾಟ್ಯ ವಿದ್ಯಾರ್ಥಿಗಳಿಂದ ನರ್ತನ ನಮನಾ ಹಾಗೂ ಭಾಮಾ ರುಕ್ಮಿಣಿ ನೃತ್ಯ ರೂಪಕ ಜರುಗಿತು.

Leave a Reply

Your email address will not be published. Required fields are marked *

3 + eighteen =