ಕುಂದಾಪ್ರ ಡಾಟ್ ಕಾಂ ಸುದ್ದಿ.
ಕುಂದಾಪುರ: ಹಿರಿಯ ಬಿಜೆಪಿ ಮುಖಂಡೆ, ಕೋಟೇಶ್ವರ ಗ್ರಾಮ ಪಂಚಾಯತ್ ಮಾಜಿ ಅಧ್ಯಕ್ಷೆ ಜಾನಕಿ ಬಿಲ್ಲವ ಗುರುವಾರ ಕುಂದಾಪುರ ಬ್ಲಾಕ್ ಕಾಂಗ್ರೆಸ್ ಕಚೇರಿಯಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾಗಿದ್ದಾರೆ. ಅವರೊಂದಿಗೆ ಸ್ಥಳೀಯ 20ಕ್ಕೂ ಅಧಿಕ ಮಂದಿ ಕಾಂಗ್ರೆಸ್ ಸೇರ್ಪಡೆಗೊಂಡಿದ್ದಾರೆ.
ಕೋಟೇಶ್ವರ ಭಾಗದಲ್ಲಿ ಪಕ್ಷದ ಹಿರಿಯ ಕಾರ್ಯಕರ್ತೆಯಾಗಿದ್ದ ಜಾನಕಿ ಬಿಲ್ಲವ ತಾಲೂಕು ಪಂಚಾಯತ್ ಸದಸ್ಯೆಯಾಗಿ 2 ಬಾರಿ, ಗ್ರಾ.ಪಂ ಸದಸ್ಯೆಯಾಗಿ 2 ಬಾರಿ, ಮಹಿಳಾ ಮೋರ್ಚಾ ಅಧ್ಯಕ್ಷೆಯಾಗಿಯೂ ಪಕ್ಷಕ್ಕಾಗಿ ಕೆಲಸ ಮಾಡಿದ್ದರು. ಈ ಹಿಂದಿನ ಅವಧಿಯಲ್ಲಿ ಕೋಟೇಶ್ವರ ಗ್ರಾಮ ಪಂಚಾಯತ್ ಅಧ್ಯಕ್ಷೆಯಾಗಿದ್ದ ಜಾನಕಿ ಬಿಲ್ಲವರನ್ನು ಸ್ವಪಕ್ಷದವರೇ ಅವಿಶ್ವಾಸ ಗೊತ್ತುವಳಿ ಮಂಡಿಸಿ ಅವರನ್ನು ಗಾದಿಯಿಂದ ಇಳಿಸಿದ್ದರು. ಆ ಬಳಿಕ ಜಾನಕಿ ಬಿಲ್ಲವ ಪಕ್ಷದ ಚಟಿವಟಿಕೆಯಿಂದ ದೂರ ಉಳಿದಿದ್ದರು.
ಪಕ್ಷ ಸೇರ್ಪಡೆ ವೇಳೆ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಹರಿಪ್ರಸಾದ ಶೆಟ್ಟಿ ಕಾನ್ಮಕ್ಕಿ ಮಾಜಿ ಅಧ್ಯಕ್ಷ ಮಲ್ಯಾಡಿ ಶಿವರಾಮ ಶೆಟ್ಟಿ, ಮುಖಂಡರಾದ ಅಶೋಕ್ ಪೂಜಾರಿ ಬೀಜಾಡಿ, ವಿಕಾಸ್ ಹೆಗ್ಡೆ, ಶಂಕರ್ ಪೂಜಾರಿ, ಸುನೀಲ್ ಪೂಜಾರಿ ಕೋಡಿ, ವಿನೋದ್ ಕ್ರಾಸ್ತಾ ಮೊದಲಾದವರು ಈ ಸಂದರ್ಭ ಉಪಸ್ಥಿತರಿದ್ದರು.
ನಾನು ಬಿಜೆಪಿಯಿಂದ ಕಡೆಗಣನೆ ಆಗಿದ್ದೆ. ನಿನ್ನೆ ಸಂಜೆಯವರೆಗೂ ನಾನು ಕಾಂಗ್ರೆಸ್ ಪಕ್ಷ ಸೇರುವ ನಿರ್ಧಾರ ಮಾಡಿರಲಿಲ್ಲ. ಆದರೆ ನನ್ನ ನಂಬಿದವರಿಗೆ ಸಾಮಾಜಿಕ ನ್ಯಾಯ ಕೊಡಬೇಕು. ಅದಕ್ಕಾಗಿ ಒಂದು ಪಕ್ಷ ಬೇಕು ಎನ್ನುವ ಹಿನ್ನೆಲೆ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾಗಿರುವೆ. – ಜಾನಕಿ ಬಿಲ್ಲವ
ಇದನ್ನೂ ಓದಿ:
► ಮರವಂತೆ ಬಿಜೆಪಿ ಧುರೀಣ ಗಣೇಶ ಪೂಜಾರಿ ಮತ್ತು ಬೆಂಬಲಿಗರು ಕಾಂಗ್ರೆಸ್ ಸೇರ್ಪಡೆ – https://kundapraa.com/?p=42988 .