ಕುಂದಾಪ್ರ ಡಾಟ್ ಕಾಂ ಸುದ್ದಿ.
ಕುಂದಾಪುರ: ತಾಲೂಕಿನ ಗಂಗೊಳ್ಳಿ ದಾಕುಹಿತ್ಲುವಿನ 30 ಬಿಜೆಪಿ ಕಾರ್ಯಕರ್ತರು ಮಾಜಿ ಶಾಸಕ ಗೋಪಾಲ ಪೂಜಾರಿ ಅವರ ಕಟ್ಬೆಲ್ತೂರು ನಿವಾಸದಲ್ಲಿ ಗುರುವಾರ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಗೊಂಡರು.
ತ್ರಾಸಿ ಜಿಲ್ಲಾ ಪಂಚಾಯತ್ ಉಸ್ತುವಾರಿ ಶರತ್ ಕುಮಾರ್ ಶೆಟ್ಟಿ ಸಾರಥ್ಯದಲ್ಲಿ ಯುವಕರು ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಗೊಂಡರು.
ಈ ಸಂದರ್ಭ ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ಮಂಜುಳ ದೇವಾಡಿಗ, ಗ್ರಾಮೀಣ ಕಾಂಗ್ರೆಸ್ ಗಂಗೊಳ್ಳಿಯ ಸುರೇಂದ್ರ ಖಾರ್ವಿ, ಯುತ್ ಕಾಂಗ್ರೆಸ್ ಅದ್ಯಕ್ಷ ಪ್ರದೀಪ್ ಗಂಗೊಳ್ಳಿ, ವಂಡ್ಸೆ ಬ್ಲಾಕ್ನ ಉಪಾಧ್ಯಕ್ಷ ಜಾಹೀರ್ ಗಂಗೊಳ್ಳಿ ಉಪಸ್ಥಿತಿರಿದ್ದರು.
ಇತ್ತಿಚಿಗಷ್ಟೇ ಗಂಗೊಳ್ಳಿಯ 70 ಬಿಜೆಪಿ ಕಾರ್ಯಕರ್ತರು ಕಾಂಗ್ರೆಸ್ ಪಕ್ಷ ಸೇರ್ಪಡೆಗೊಂಡಿದ್ದರು.
ಇದನ್ನೂ ಓದಿ:
► ಕಟ್‌ಬೆಲ್ತೂರು: 70ಕ್ಕೂ ಅಧಿಕ ಯುವಕರು ಕಾಂಗ್ರೆಸ್ ಸೇರ್ಪಡೆ – https://kundapraa.com/?p=46874 .
►ಕಾಂಗ್ರೆಸ್ ಸೇರ್ಪಡೆ ಎಂಬುದು ಮಾಜಿ ಶಾಸಕರ ನಾಟಕ: ಬಿಜೆಪಿ ತ್ರಾಸಿ ಮಹಾಶಕ್ತಿ ಕೇಂದ್ರದ ಅಧ್ಯಕ್ಷ ರವಿ ಶೆಟ್ಟಿಗಾರ್ ಆರೋಪ – https://kundapraa.com/?p=47076 .