ರಾಜ್ಯದಲ್ಲಿ ಬಿಜೆಪಿಗೆ 22 ಸೀಟು ಗ್ಯಾರೆಂಟಿ: ಬಿ.ಎಸ್ ಯಡಿಯೂರಪ್ಪ ವಿಶ್ವಾಸ

ಕುಂದಾಪ್ರ ಡಾಟ್ ಕಾಂ ಸುದ್ದಿ.
ಬೈಂದೂರು: ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ದೇಶದಲ್ಲಿ 300 ಲೋಕಸಭಾ ಕ್ಷೇತ್ರಗಳನ್ನು, ಕರ್ನಾಟಕದಲ್ಲಿ ಕನಿಷ್ಠ 22 ಲೋಕಸಭಾ ಕ್ಷೇತ್ರಗಳನ್ನು ಗೆದ್ದು ನರೇಂದ್ರ ಮೋದಿಯವರು ಮತ್ತೆ ಪ್ರಧಾನಿಯಾಗುತ್ತಾರೆ ಎಂದು ರಾಜ್ಯ ಬಿಜೆಪಿ ಅಧ್ಯಕ್ಷ ಬಿ. ಎಸ್. ಯಡಿಯೂರಪ್ಪ ವಿಶ್ವಾಸ ವ್ಯಕ್ತಪಡಿಸಿದರು.

ಬೈಂದೂರಿನ ಹೋಟೆಲ್ ಅಂಬಿಕಾ ಇಂಟರ್‌ನ್ಯಾಷನಲ್‌ನಲ್ಲಿ ಆಯೋಜಿಸಲಾಗಿದ್ದ ಪತ್ರಿಕಾಗೋಷ್ಠಿಯನ್ನು ಉದ್ದೇಶಿಸಿ ಅವರು ಮಾತನಾಡಿ ನರೇಂದ್ರ ಮೋದಿಯವರು ಕೇಂದ್ರದಲ್ಲಿ ಅಧಿಕಾರಕ್ಕೆ ಬರುವ ಮುಂಚೆ ಭ್ರಷ್ಟಾಚಾರ ಮುಕ್ತ ಸರಕಾರ, ಶ್ರೀಸಾಮಾನ್ಯರಿಗೆ ತಲುಪುವಂತಹ ಅಭಿವೃದ್ಧಿ ಕಾರ್ಯ, ದೇಶದ ಗಡಿಗಳ ರಕ್ಷಣೆ, ವಿದೇಶದಲ್ಲಿ ಭಾರತದ ಗೌರವ ಹೆಚ್ಚುವ ರೀತಿಯಲ್ಲಿ ಮುನ್ನಡೆಯುದಾಗಿ ಹೇಳಿದ್ದರು. ಅದರಂತೆಯೇ ನಡೆದಿದ್ದಾರೆ. ಜನರ ವಿಶ್ವಾಸವನ್ನು ಉಳಿಸಿಕೊಂಡಿದ್ದಾರೆ ಎಂದರು.

ಕುಮಾರಸ್ವಾಮಿ ನೇತೃತ್ವದ ಭ್ರಷ್ಟಾಚಾರ ಸರಕಾರದಿಂದ ಜನರು ಬೇಸತ್ತಿದ್ದಾರೆ. ಸಚಿವ ರೇವಣ್ಣ ಕಾಮಗಾರಿಯೇ ನಡೆಸದೇ ಸರಕಾರದ ಹೊಡೆಯುವ ಕೆಲಸ ಮಾಡಿದ್ದಾರೆ. ಜನರು ಇದನ್ನೆಲ್ಲಾ ಗಮನಿಸುತ್ತಿದ್ದಾರೆ ಎಂದರು. ರಾಜ್ಯದಲ್ಲಿ ಮೋದಿ ಅಲೆ ಇದ್ದು, ಮೈತ್ರಿ ಅಭ್ಯರ್ಥಿಗಳಿಗೆ ಕಂಟಕ ಎದುರಾಗಿದೆ. ನಿಶ್ಚಿತವಾಗಿ ಈ ಭಾರಿ ಬಹುಮತದಿಂದ ಬಿಜೆಪಿ ಅಭ್ಯರ್ಥಿಗಳನ್ನು ಗೆಲ್ಲಿಸುತ್ತಾರೆ.

ಪತ್ರಿಕಾಗೋಷ್ಠಿಯಲ್ಲಿ ವಿಧಾನ ಪರಿಷತ್ ವಿಪಕ್ಷ ನಾಯಕ ಕೋಟ ಶ್ರೀನಿವಾಸ ಪೂಜಾರಿ, ಶಾಸಕ ಬಿ. ಎಂ. ಸುಕುಮಾರ ಶೆಟ್ಟಿ, ಉಸ್ತುವಾರಿ ಉದಯಕುಮಾರ್, ಮುಖಂಡರಾದ ಯಶಪಾಲ್ ಸುವರ್ಣ, ಕಿರಣಕುಮಾರ್, ರವಿ ಅಮೀನ್, ಸದಾನಂದ ಉಪ್ಪಿನಕುದ್ರು, ಜಯಾನಂದ ಹೋಬಳಿದಾರ್ ಮೊದಲಾದವರು ಇದ್ದರು.

 

 

Leave a Reply

Your email address will not be published. Required fields are marked *

four × 3 =