ಕುಂದಾಪ್ರ ಡಾಟ್ ಕಾಂ ಸುದ್ದಿ.
ಕುಂದಾಪುರ: ಮುಂಬೈನಿಂದ ಮಂಗಳೂರಿನತ್ತ ಸಾಗುತ್ತಿದ್ದ ಆನಂದ್ ಹೆಸರಿನ ಖಾಸಗಿ ಬಸ್ ಕುಂಭಾಸಿ ಸಮೀಪದ ಕೊರವಡಿ ಕ್ರಾಸ್ ಬಳಿ ಚಾಲಕನ ನಿಯಂತ್ರಣ ತಪ್ಪಿ ಡಿವೈಡರ್ ಏರಿ ನಿಂತ ಘಟನೆ ಶನಿವಾರ ನಡೆದಿದೆ.
ಮಳೆಯಿಂದಾಗಿ ಕುಂಭಾಸಿ ಕೊರಡಿ ಕ್ರಾಸ್ ಬಳಿ ಸುಮಾರು 2 ಅಡಿ ಆಳದ ಹೊಂಡ ನಿರ್ಮಾಣವಾಗಿದ್ದು ಮಳೆ ನಿಂತಿದ್ದರಿಂದ ಮಂಗಳೂರು ಕಡೆಗೆ ತೆರಳುತ್ತಿದ್ದ ಬಸ್ ಅದೇ ಹೊಂಡಕ್ಕೆ ಇಳಿದಿದ್ದರಿಂದ ಚಾಲಕನ ನಿಯಂತ್ರಣ ಕಳೆದುಕೊಂಡು ಸುಮಾರ 300 ಮೀಟರ್ ದೂರದ ತನಕ ಡಿವೈಡರ್ ಮೇಲೆ ಬಸ್ ಚಲಿಸಿದೆ.
ಬಸ್ ಕನ್ನುಕೆರೆ ಮಸೀದಿ ಎದುರು ಡಿವೈಡರ್ ಏರಿ ನಿಂತಿದೆ. ಬಸ್ಸಿನಲ್ಲಿ 40ಕ್ಕೂ ಅಧಿಕ ಮಂದಿ ಪ್ರಯಾಣಿಸುತ್ತಿದ್ದು ಚಾಲಕನ ಸಮಯಪ್ರಜ್ಞೆಯಿಂದ ಪಲ್ಟಿಯಾಗುವುದು ತಪ್ಪಿದೆ. ಯಾವುದೇ ಅಪಾಯ ಸಂಭವಿಸಿಲ್ಲ.