ಉದ್ಯಮಿ ಗೋವಿಂದ ಬಾಬು ಪೂಜಾರಿ ಅವರಿಗೆ ‘ಭಾರತ ಗೌರವ’ ಪ್ರಶಸ್ತಿ ಪ್ರದಾನ

Call us

Call us

ಕುಂದಾಪ್ರ ಡಾಟ್ ಕಾಂ ಸುದ್ದಿ.
ಬೆಂಗಳೂರು:
ಇಲ್ಲಿನ ಜನ್ಮಭೂಮಿ ಫೌಂಡೇಶನ್ ರಿ. ಇವರ ವತಿಯಿಂದ ಕೊರೋನಾ ವಾರಿಯರ್ಸ್ ಹಾಗೂ ನಾಡಿನ ಸಾಧಕರಿಗೆ ಸನ್ಮಾನ ಕಾರ್ಯಕ್ರಮದಲ್ಲಿ ಚೆಫ್ಟಾಕ್ ಫುಡ್ & ಹಾಸ್ಪಿಟಾಲಿಟಿ ಪ್ರೈ ಲಿ. ಇದರ ವ್ಯವಸ್ಥಾಪಕ ನಿರ್ದೇಶಕರಾದ ಗೋವಿಂದ ಬಾಬು ಪೂಜಾರಿ ಅವರಿಗೆ ‘ಭಾರತ ಗೌರವ’ ಪ್ರಶಸ್ತಿ ನೀಡಿ ಗೌರವಿಸಲಾಯಿತು.

Call us

Call us

ಪರಿಶ್ರಮದಿಂದಲೇ ಬದುಕು ಕಟ್ಟಿಕೊಂಡ ಉದ್ಯಮಿ ಗೋವಿಂದ ಬಾಬು ಪೂಜಾರಿ ಶೆಫ್ಟಾಕ್ ಪುಡ್ & ಹಾಸ್ಪಿಟಾಲಿಟಿ ಸಂಸ್ಥೆಯಿಂದ ಸಾವಿರಾರು ಜನರಿಗೆ ಉದ್ಯೋಗ ನೀಡಿದ್ದಾರೆ. ಕರೋನಾ ಸಂದರ್ಭದಲ್ಲಿ ಸಾವಿರಾರು ಬಡ ಕುಟುಂಬಗಳಿಗೆಪುಡ್ ಕಿಟ್ ವಿತರಿಸಿದ್ದಾರೆ. ಹೂಟ್ಟೂರಿನಲ್ಲಿ ವರಲಕ್ಷ್ಮೀ ಚಾರಿಟೇಬಲ್ ಟ್ರಸ್ಟ್ ಮೂಲಕ ಸೂರಿಲ್ಲದವರಿಗೆ ಮನೆ ನಿರ್ಮಿಸಿಕೊಟ್ಟು ಬಡಕುಟುಂಬಗಳಿಗೆ ನೆರಳಾಗಿದ್ದಾರೆ. ಲಾಕ್‌ಡೌನ್ ಸಂದರ್ಭದಲ್ಲಿ ಕುಡಿಯುವ ನೀರಿನ ದಾಹ ತೀರಿಸಿದ್ದು ಸೇರಿದಂತೆ ಹತ್ತಾರು ಸಮಾಜಮುಖಿ ಕಾರ್ಯದಲ್ಲಿ ತೊಡಗಿಸಿಕೊಂಡಿದ್ದಾರೆ.

Call us

Call us

ಪ್ರಶಸ್ತಿ ಸಮಾರಂಭದಲ್ಲಿ ನಾಡಿನ ಖ್ಯಾತ ಸಾಹಿತಿ ಡಾ. ಕುಂ ವೀರಭದ್ರಪ್ಪ, ಸಾರ್ವಜನಿಕ ಗ್ರಂಥಾಲಯ ಇಲಾಖೆಯ ನಿರ್ದೇಶಕ ಸತೀಶ್ ಕುಮಾರ್, ಎಸ್ ಹೊಸಮನಿ, ಬೆಂಗಳೂರು ಎಸಿಪಿ, ಸಿಸಿಬಿ ಹೆಚ್. ಎಸ್ ಪರಮೇಶ್ವರ್, ಬಿಗ್ ಬಾಸ್ ಖ್ಯಾತಿಯ ಹಾಗೂ ಕನ್ನಡ ಚಲನಚಿತ್ರದ ಯುವ ನಟ ಭುವನ್ ಪೊನ್ನಪ್ಪ, ಚಿತ್ರನಟಿ, ರೂಪದರ್ಶಿ ಪೂಜಾ ರಮೇಶ್, ಬೆಂಗಳೂರು ಕರ್ನಾಟಕ ಪ್ರೆಸ್ ಕ್ಲಬ್ ಕೌನ್ಸಿಲ್ ಇದರ ರಾಜ್ಯಾಧ್ಯಕ್ಷ ಡಾ. ಶಿವಕುಮಾರ ನಾಗರ ನವಿಲೆ, ವಕೀಲರು, ವಿಶ್ವಕರ್ಮ ಸಮುದಾಯದ ಅಭಿವೃದ್ಧಿ ನಿಗಮ ರಾಜ್ಯಾಧ್ಯಕ್ಷರಾದ ಬಾಬು ಪತ್ತಾರ್, ಜನ್ಮಭೂಮಿ ಫೌಂಡೇಶನ್ ರಿ. ಬೆಂಗಳೂರು ಇದರ ಅಧ್ಯಕ್ಷ ರಘು ಗಂಗೂರು, ಜನ್ಮಭೂಮಿ ಫೌಂಡೇಶನ್ ರಿ. ಬೆಂಗಳೂರು ಸಂಘಟಕ ಮಾರುತಿ ಬಡಿಗೇರ ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *

thirteen − 8 =