ಬೈಂದೂರು: ಅಂಬೇಡ್ಕರ್ ಭವನದ ನೂತನ ಕಟ್ಟಡ ಉದ್ಘಾಟನೆ

Click Here

Call us

Call us

ಕುಂದಾಪ್ರ ಡಾಟ್ ಕಾಂ ಸುದ್ದಿ.
ಬೈಂದೂರು: ಅಂಬೇಡ್ಕರ್ ಅವರ ತತ್ವಾದರ್ಶಗಳು ಎಲ್ಲಾ ಸಮುದಾಯಕ್ಕೂ ಮಾದರಿಯಾಗಿದ್ದು, ಅದರ ಪಾಲನೆಯೊಂದಿಗೆ ಸಮ ಸಮಾಜದ ನಿರ್ಮಾಣಕ್ಕೆ ಪಣತೊಡಬೇಕಿದೆ ಎಂದು ರಾಜ್ಯ ಸಮಾಜ ಕಲ್ಯಾಣ ಹಾಗೂ ಹಿಂದೂಳಿದ ವರ್ಗಗಳ ಕಲ್ಯಾಣ ಸಚಿವ ಹೆಚ್. ಆಂಜನೇಯ ಹೇಳಿದರು.

Call us

Call us

Click Here

Visit Now

ಅವರು ಬೈಂದೂರಿನಲ್ಲಿ ನಿರ್ಮಾಣಗೊಂಡ ಸಮಾಜ ಕಲ್ಯಾಣ ಇಲಾಖೆಯ ನೂತನ ಅಂಬೇಡ್ಕರ್ ಭವನದ ಕಟ್ಟಡವನ್ನು ಲೋಕಾರ್ಪಣೆಗೊಳಿಸಿ ಮಾತನಾಡಿ ಸಮುದಾಯ ಭವನಗಳ ನಿರ್ಮಾಣಕ್ಕೆ ಸರಕಾರ ಅನುದಾನ ನೀಡುತ್ತಿದ್ದು, ಅದನ್ನು ಸದುಪಯೋಗ ಪಡಿಸಿಕೊಳ್ಳಬೇಕಿದೆ. ಬೈಂದೂರು ಅಂಬೇಡ್ಕರ್ ಭವನದಲ್ಲಿ ಮತ್ತಷ್ಟು ಸೌಲಭ್ಯಗಳನ್ನು ಒದಗಿಸಿ ಎಲ್ಲಾ ಸಮಾಜದವರಿಗೂ ಉಪಯೋಗವಾಗುವಂತೆ ಮಾಡಲು ಹೆಚ್ಚಿನ ೫೦ಲಕ್ಷ ರೂ. ಮಂಜೂರು ಮಾಡುವುದಾಗಿ ಅವರು ತಿಳಿಸಿದರು.

Click here

Click Here

Call us

Call us

ಬೈಂದೂರು ಶಾಸಕ ಕೆ. ಗೋಪಾಲ ಪೂಜಾರಿ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಜಿಲ್ಲಾ ಪಂಚಾಯತ್ ಸದಸ್ಯೆ ಗೌರಿ ದೇವಾಡಿಗ, ಜಿಲ್ಲಾ ಕೆಡಿಪಿ ಸದಸ್ಯ ಎಸ್. ರಾಜು ಪೂಜಾರಿ, ತಾಲೂಕು ಪಂಚಾಯತ್ ಸದಸ್ಯ ರಾಜು ದೇವಾಡಿಗ, ಯಡ್ತರೆ ಗ್ರಾಮ ಪಂಚಾಯತ್ ಉಪಾಧ್ಯಕ್ಷೆ ಕಲಾವತಿ, ಬೈಂದೂರು ವಿಶೇಷ ತಹಶೀಲ್ದಾರ್ ಕಿರಣ್ ಜಿ. ಗೌರಯ್ಯ, ನಿರ್ಮಿತಿ ಕೇಂದ್ರದ ಯೋಜನಾ ನಿರ್ದೇಶಕ ಅರುಣ ಕುಮಾರ್, ಸಮಾಜ ಕಲ್ಯಾಣ ಇಲಾಖೆಯ ಉಪನಿರ್ದೇಶಕ ರಮೇಶ್ ಎಸ್.ಎನ್., ಮೊದಲಾದವರು ಉಪಸ್ಥಿತರಿದ್ದರು. ಬೈಂದೂರು ಅಂಬೇಡ್ಕರ್ ಯುವಕ ಮಂಡಲದ ಅಧ್ಯಕ್ಷ ಲಕ್ಷ್ಮಣ ಕೊರಗ ಸ್ವಾಗತಿಸಿದರು. ಅನುಸೂಯ ಪ್ರಾರ್ಥಿಸಿದರು. ದಯಾನಂದ ಪಿ ಕಾರ್ಯಕ್ರಮ ನಿರೂಪಿಸಿದರು.

Leave a Reply

Your email address will not be published. Required fields are marked *

eleven + eleven =