ಬೈಂದೂರು ಬಿಜೆಪಿ ಯುವಮೊರ್ಚಾ ಪ್ರಥಮ ಕಾರ್ಯಕಾರಿಣಿ ಸಭೆ

Call us

ಕುಂದಾಪ್ರ ಡಾಟ್ ಕಾಂ ಸುದ್ದಿ.
ಬೈಂದೂರು: ವಿಧಾನಸಭಾ ಚುನಾವಣೆ ಸಮೀಪಿಸುತ್ತಿದ್ದು ಪಕ್ಷ ಸಂಘಟನೆಯಲ್ಲಿ ಬಿಜೆಪಿ ಯುವಮೊರ್ಚಾದ ಪ್ರತಿ ಸದಸ್ಯನೂ ಸಕ್ರೀಯವಾಗಿ ತೊಡಗಿಸಿಕೊಳ್ಳುವಂತೆ ಮಾಡಬೇಕಿದೆ. ಯುವಶಕ್ತಿಯ ಬೆಂಬಲದಿಂದ ರಾಜ್ಯದಲ್ಲಿ ಮತ್ತೆ ಬಿಜೆಪಿ ಸರಕಾರ ಅಧಿಕಾರಲ್ಲಿ ಬರಲು ಪ್ರತಿಯೊಬ್ಬರೂ ಈಗಿನಿಂದಲೇ ಕಾರ್ಯೊನ್ಮಖರಾಗಬೇಕಿದೆ ಎಂದು ಬೈಂದೂರು ಕ್ಷೇತ್ರ ಬಿಜೆಪಿ ಅಧ್ಯಕ್ಷ ಸದಾನಂದ ಉಪ್ಪಿನಕುದ್ರು ಹೇಳಿದರು.

Call us

ಅವರು ಶನಿವಾರ ಹೆಮ್ಮಾಡಿಯ ಜಯಶ್ರಿ ಸಭಾಂಗಣದಲ್ಲಿ ಜರುಗಿದ ಬೈಂದೂರು ಬಿಜೆಪಿ ಯುವಮೊರ್ಚಾದ ಪ್ರಥಮ ಕಾರ್ಯಕಾರಿಣಿ ಸಭೆಯಲ್ಲಿ ಮಾತನಾಡಿದರು.

Call us

ಕಾರ್ಯಕ್ರಮದಲ್ಲಿ ರಾಜ್ಯ ಬಿಜೆಪಿ ಕಾರ್ಯಕಾರಿಣಿ ಸದಸ್ಯ ಬಿ.ಎಂ. ಸುಕುಮಾರ ಶೆಟ್ಟಿ ಮಾತನಾಡಿ, ಪ್ರಧಾನಿ ನರೇಂದ್ರ ಮೋದಿ ಹಾಗೂ ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್. ಯಡಿಯೂರಪ್ಪ ಅವರ ಯಶಸ್ಸನ್ನು ಕೋರಿ ಜನವರಿ 1ರಂದು ಕೊಲ್ಲೂರು ಶ್ರೀ ಮೂಕಾಂಬಿಕಾ ಸನ್ನಿಧಿಯಲ್ಲಿ ನವ ಚಂಡಿಯಾಗ ನಡೆಯಲಿದ್ದು, ಜಡ್ಕಲ್ ವೃತ್ತಿಂದ ಕೊಲ್ಲೂರಿನ ತನಕ ಪಾದಯಾತ್ರೆ ಹಮ್ಮಿಕೊಳ್ಳಲಾಗಿದೆ. ಕಾರ್ಯಕ್ರಮಕ್ಕೆ ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸುವಂತೆ ಕೋರಿದರು. ಕುಂದಾಪ್ರ ಡಾಟ್ ಕಾಂ ಸುದ್ದಿ.

ಬಿಜೆಪಿ ಯುವಮೋರ್ಚಾ ಅಧ್ಯಕ್ಷ ಶರತ್ ಶೆಟ್ಟಿ ಉಪ್ಪುಂದ ಅಧ್ಯಕ್ಷತೆ ವಹಿಸಿದ್ದರು. ಜಿಲ್ಲಾ ಬಿಜೆಪಿ ಯುವಮೋರ್ಚಾ ಬೈಂದೂರು ಉಸ್ತುವಾರಿ ಗೌತಮ್ ಹೆಗ್ಡೆ ಕುಂದಾಪುರ, ಬೈಂದೂರು ಬಿಜೆಪಿ ಯುವಮೋರ್ಚಾ ಪ್ರಬಾರಿ ಬಿ.ಎಸ್. ಸುರೇಶ್ ಶೆಟ್ಟಿ, ಕಾರ್ಯದರ್ಶಿ ಹರೀಶ್ ತೋಳಾರ್ ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *

3 + five =