ಕೋವಿಡ್ ಪ್ರಕರಣ ನಿಭಾಯಿಸುವಲ್ಲಿ ಬೈಂದೂರು ತಾಲೂಕಿನಲ್ಲಿ ನಿರ್ಲಕ್ಷ್ಯ ಧೊರಣೆ: ಬ್ಲಾಕ್ ಕಾಂಗ್ರೆಸ್ ನಿಯೋಗ ಖಂಡನೆ

Call us

Call us

ಕುಂದಾಪ್ರ ಡಾಟ್ ಕಾಂ ಸುದ್ದಿ.
ಬೈಂದೂರು: ತಾಲೂಕಿನಲ್ಲಿ ಕೋವಿಡ್-19 ಪ್ರಕರಣಗಳನ್ನು ನಿಭಾಯಿಸುವಲ್ಲಿ ಅಧಿಕಾರಿಗಳು ನಿರ್ಲಕ್ಷ್ಯ ತೋರುತ್ತಿದ್ದು, ಇಲಾಖೆಗಳ ಸಮನ್ವಯತೆ ಕೊರತೆ ಎದ್ದು ಕಾಣುತ್ತಿದೆ. ಇದರಿಂದಾಗಿ ಜನಸಾಮಾನ್ಯರು ತೊಂದರೆ ಅನುಭವಿಸುತ್ತಿರುವುದಲ್ಲದೇ, ಆತಂಕದ ನಡುವೆ ಬದುಕುವಂತಾಗಿದೆ ಎಂದು ಬೈಂದೂರು ಬ್ಲಾಕ್ ಕಾಂಗ್ರೆಸ್ ನಿಯೋಗ ಆರೋಪಿಸಿದೆ.

Call us

Call us

Visit Now

ಗುರುವಾರ ಬೈಂದೂರು ತಹಶೀಲ್ದಾರ್ ಬಸಪ್ಪ ಪಿ. ಪೂಜಾರ್ ಅವರನ್ನು ಭೇಟಿ ಮಾಡಿ ತಾಲೂಕು ವ್ಯಾಪ್ತಿಯಲ್ಲಿ ಕೋವಿಡ್ ಪ್ರಕರಣಗಳನ್ನು ನಿರ್ವಹಿಸುವಲ್ಲಿ ಆಗುತ್ತಿರುವ ಗೊಂದಲಗಳ ಬಗ್ಗೆ ಮನವರಿಕೆ ಮಾಡಿತು.

Click here

Call us

Call us

ಈ ಸಂದರ್ಭ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಸದಸ್ಯ ಎಸ್. ಪ್ರಕಾಶ್ಚಂದ್ರ ಶೆಟ್ಟಿ ಮಾತನಾಡಿ ಕೋವಿಡ್ ಪ್ರಕರಣಗಳನ್ನು ನಿಭಾಯಿಸುವ ರೀತಿಯೇ ಗೊಂದಲಮಯವಾಗಿದೆ. ಕೋವಿಡ್ ವರದಿಯಲ್ಲಿ ನೆಗೆಟಿವ್ ಬಂದವರ ಮಾಹಿತಿಯನ್ನು ಅವರಿಗೆ ತಿಳಿಸುತ್ತಿಲ್ಲ. ಪಾಟಿಸಿವ್ ಬಂದಿರುವ ಬಗ್ಗೆ ತಿಳಿಸಿದ ಮೇಲೆ ಕೂಡ ಅವರನ್ನು ಆಸ್ಪತ್ರೆಗೆ ಕರೆದೊಯ್ಯಲು ೨-೩ ದಿನ ತೆಗೆದುಕೊಳ್ಳುತ್ತಿದ್ದಾರೆ. ಗ್ರಾಮೀಣ ಭಾಗದಲ್ಲಿ ಪಾಸಿಟಿವ್ ಬಂದವರ ಮನೆಗೆ ತೆರಳಿ ಕರೆದೊಯ್ಯುವ ಬದಲಿಗೆ ಹೈವೆಗೆ ಬಂದು ನಿಂತುಕೊಳ್ಳುವಂತೆ ಹೇಳಲಾಗುತ್ತಿದೆ. ಆರೋಗ್ಯ ಇಲಾಖೆಯ ಈ ನಿರ್ಧಾರ ಕ್ರೂರವಾದದ್ದು ಎಂದ ಅವರು, ಪಾಸಿಟಿವ್ ಬಂದವರ ಮನೆಯ ಸುತ್ತಲಿನ ಪ್ರದೇಶವನ್ನು ಸೀಲ್‌ಡೌನ್ ಮಾಡಬೇಕು ಎಂಬ ನಿಯಮವಿದ್ದರೂ ವಿಳಂಬ ನೀತಿ ಅನುಸರಿಸುತ್ತಿದ್ದು, ಇಡೀ ಪರಿಸರ ಆತಂಕಕ್ಕೆ ಒಳಗಾಗುವಂತೆ ಮಾಡಲಾಗುತ್ತಿದೆ ಎಂದು ಆರೋಪಿಸಿದರು.

ಮುಂಬೈ ಹಾಗೂ ಹೊರರಾಜ್ಯಗಳಿಂದ ಬರುವವರಿಗೆ ಸರಿಯಾದ ರೀತಿಯಲ್ಲಿ ಮೂಲಭೂತ ಸೌಕರ್ಯ ಒದಗಿಸಬೇಕು. ಅಗತ್ಯಬಿದ್ದರೆ ಸಂಘ ಸಂಸ್ಥೆಗಳ ಮೂಲಕ ನೆರವು ನೀಡಲು ನಾವು ಸಿದ್ದರಿದ್ದೇವೆ ಎಂದಿದ್ದಾರೆ. ಕುಂದಾಪ್ರ ಡಾಟ್ ಕಾಂ ಸುದ್ದಿ.

ಜಿಲ್ಲಾ ಪಂಚಾಯತ್ ಮಾಜಿ ಅಧ್ಯಕ್ಷ ಎಸ್. ರಾಜು ಪೂಜಾರಿ ಮಾತನಾಡಿ ಲಾಕ್‌ಡೌನ್ ಆರಂಭದ ಸಂದರ್ಭ ಎಲ್ಲಾ ಇಲಾಖೆಗಳ ನಡುವೆ ಸಮನ್ವಯತೆ ಇತ್ತು. ಆದರೆ ಬರಬರುತ್ತಾ ಸಮನ್ವಯತೆ ಕೊರತೆ ಎದ್ದು ಕಾಣುತ್ತಿದ್ದೆ. ಪಾಸಿಟಿವ್ ಬರುವವರನ್ನು ಲಘುವಾಗಿ ಪರಿಗಣಿಸಿ ಇಡಿ ಪರಿಸರ ಜನರನ್ನು ಆತಂಕಕ್ಕೆ ಒಳಗಾಗುವಂತೆ ಮಾಡಲಾಗುತ್ತಿದೆ. ಕೆಲವೆಡೆ ಗರ್ಭೀಣಿಯರ ಕೋವಿಡ್ ಟೆಸ್ಟ್ ವರದಿ ಈವರೆಗೆ ದೊರೆಯದೇ ಇರುವುದರಿಂದ ಅವರು ಮೆಡಿಕಲ್ ಚೆಕಪ್‌ಗಾಗಿ ಆಸ್ಪತ್ರೆಗೆ ತೆರಳಲು ತೊಂದರೆಯಾಗುತ್ತಿದೆ. ಗಂಭೀರ ಆರೋಗ್ಯ ಸಮಸ್ಯೆ ಉಳ್ಳವರಿಗೂ ಕೋವಿಡ್ ಟೆಸ್ಟ್ ವರದಿ ಬರುವುದು ಬಾಕಿ ಇರುವುದರಿಂದ ಅವರ ಚಿಕಿತ್ಸೆಗೂ ತೊಂದರೆಯಾಗಿದೆ. ವರದಿ ವಿಳಂಬ ಕಾರಣದಿಂದ ಬೇರೆ ಆರೋಗ್ಯ ಸಮಸ್ಯೆ ಉಲ್ಭಣಿಸಿದರೆ ಇದಕ್ಕೆ ಹೊಣೆ ಯಾರು ಎಂದವರು ಪ್ರಶ್ನಿಸಿದರು.

ಈ ಬಗ್ಗೆ ಬೈಂದೂರು ತಹಶೀಲ್ದಾರ್ ಪ್ರತಿಕ್ರಿಯಿಸಿ ಕ್ವಾರಂಟೈನಿನಲ್ಲಿ ಇರುವ ಕೆಲವರು ಮೊಬೈಲ್ ಸಂಖ್ಯೆ ತಪ್ಪಾಗಿ ನೀಡಿರುವುದರಿಂದ ಅವರಿಗೆ ನೆಗಿಟಿವ್ ಇರುವುದು ತಿಳಿಸಲಾಗುತ್ತಿಲ್ಲ. ಮುಂಬೈನಿಂದ ಬರುವವರಿಗೆ ಗ್ರಾಮ ಮಟ್ಟದಲ್ಲಿಯೇ ಏಳು ಕ್ವಾರಂಟೈನ್ ಮಾಡಿ ಅಲ್ಲಿಯೇ ಊಟ-ತಿಂಡಿ ವ್ಯವಸ್ಥೆ ಮಾಡುವ ನಿರ್ಣಯ ತೆಗೆದುಕೊಳ್ಳಲಾಗಿದೆ. ಆರೋಗ್ಯ ಇಲಾಖೆ ಪಾಸಿಟಿವ್ ಇರುವ ವ್ಯಕ್ತಿಗಳನ್ನು ಗುರುತಿಸಿ ಮಾಹಿತಿ ನೀಡಿದರೆ ಮಾತ್ರ ಕಂದಾಯ ಇಲಾಖೆ ಹಾಗೂ ಪೊಲೀಸ್ ಇಲಾಖೆಯ ಸಿಬ್ಬಂದಿಗಳು ಅಲ್ಲಿಗೆ ತೆರಳಿ ಸೀಲ್‌ಡೌನ್ ಮಾಡುತ್ತಾರೆ. ಕೆಲವೆಡೆ ವಿಳಂಬವಾಗಿದೆ ಈ ಬಗ್ಗೆ ಸೂಕ್ತ ಕ್ರಮ ಕೈಗೊಳ್ಳುವುದಾಗಿ ಭರವಸೆ ನೀಡಿದರು. ಕುಂದಾಪ್ರ ಡಾಟ್ ಕಾಂ ಸುದ್ದಿ.

ಒಂದು ವಾರದೊಳಗೆ ಗೊಂದಲಗಳಿಗೆ ತೆರೆ ಎಳೆಯದಿದ್ದರೆ ಬ್ಲಾಕ್ ಕಾಂಗ್ರೆಸ್‌ನಿಂದ ಪ್ರತಿಭಟನೆ ಹಮ್ಮಿಕೊಳ್ಳುವುದಾಗಿ ನಿಯೋಗ ತಿಳಿಸಿದೆ.

ಈ ಸಂದರ್ಭ ಬೈಂದೂರು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಮದನಕುಮಾರ್ ಉಪ್ಪುಂದ, ಜಿಲ್ಲಾ ಪಂಚಾಯತ್ ಸದಸ್ಯೆ ಗೌರಿ ದೇವಾಡಿಗ, ತಾಲೂಕು ಪಂಚಾಯತ್ ಸದಸ್ಯ ಜಗದೀಶ ದೇವಾಡಿಗ, ಬ್ಲಾಕ್ ಕಾಂಗ್ರೆಸ್ ಪದಾಧಿಕಾರಿಗಳಾದ ಮೋಹನ ಪೂಜಾರಿ ಉಪ್ಪುಂದ, ನಾಗರಾಜ ಗಾಣಿಗ ಬಂಕೇಶ್ವರ, ಬೈಂದೂರು ಯುವ ಕಾಂಗ್ರೆಸ್ ಅಧ್ಯಕ್ಷ ಶೇಖರ ಪೂಜಾರಿ ಉಪ್ಪುಂದ ಇದ್ದರು.

ಇದನ್ನೂ ಓದಿ:
► ಕ್ವಾರಂಟೈನ್ ಸಮಯದಲ್ಲಿ ತಪ್ಪು ವಿಳಾಸ ನೀಡಿದಲ್ಲಿ ಕ್ರಮ: ಜಿಲ್ಲಾಧಿಕಾರಿ ಜಿ. ಜಗದೀಶ್ – https://kundapraa.com/?p=38242 .
► ಉಡುಪಿ ಜಿಲ್ಲೆ: ಬುಧವಾರ 62 ಕೊರೋನಾ ಪಾಸಿಟಿವ್ – https://kundapraa.com/?p=38228 .
► ಉಡುಪಿ ಜಿಲ್ಲೆಯಲ್ಲಿ ಶೀಘ್ರ ಸರ್ಕಾರಿ ಕೋವಿಡ್ ಪರೀಕ್ಷಾ ಲ್ಯಾಬ್: ಡಾ. ಸುಧಾಕರ್ – https://kundapraa.com/?p=38214 .

 

Leave a Reply

Your email address will not be published. Required fields are marked *

7 − 7 =