ಕುಂದಾಪ್ರ ಡಾಟ್ ಕಾಂ ಸುದ್ದಿ.
ಬೈಂದೂರು: ಬ್ಲಾಕ್ ಕಾಂಗ್ರೆಸ್ ಸಮಿತಿ ಬೈಂದೂರು ಇದರ ನೂತನ ಅಧ್ಯಕ್ಷರ ಪದಗ್ರಹಣ ಸಮಾರಂಭ ಹಾಗೂ ಕಾರ್ಯಕರ್ತರ ಸಮಾವೇಶ ಇಲ್ಲಿನ ಜೆ.ಎನ್. ಆರ್. ಕಲಾಮಂದಿರದಲ್ಲಿ ಜರುಗಿತು.
ರಾಜ್ಯಸಭಾ ಸದಸ್ಯ ಆಸ್ಕರ್ ಫೆರ್ನಾಂಡಿಸ್ ಸಮಾರಂಭಕ್ಕೆ ಚಾಲನೆ ನೀಡಿದರು, ಬೈಂದೂರು ಬ್ಲಾಕ್ ಕಾಂಗ್ರೆಸ್ ಪೂರ್ವಧ್ಯಕ್ಷ ರಮೇಶ ಗಾಣಿಗ ಕೊಲ್ಲೂರು ನಿಯೋಜಿತ ಅಧ್ಯಕ್ಷ ಮದನ್ ಕುಮಾರ್ ಅವರಿಗೆ ಅಧಿಕಾರ ಹಸ್ತಾಂತರಿಸಿದರು. ಕೆಪಿಸಿಸಿ ಕಾರ್ಯಾಧ್ಯಕ್ಷ ದಿನೇಶ್ ಗುಂಡುರಾವ್ ಅಧ್ಯಕ್ಷತೆ ವಹಿಸಿದ್ದರು. ವಿಧಾನ ಪರಿಷತ್ ಸದಸ್ಯ ಪ್ರತಾಪಚಂದ್ರ ಶೆಟ್ಟಿ, ಬೈಂದೂರು ಶಾಸಕ ಕೆ. ಗೋಪಾಲ ಪೂಜಾರಿ. ಜಿಪಂ ಸದಸ್ಯರಾದ ಗೌರಿ ದೇವಾಡಿಗ, ಜ್ಯೋತಿ, ಕೆಪಿಸಿಸಿ ಸದಸ್ಯರಾದ ಪ್ರತಾಪಚಂದ್ರ ಶೆಟ್ಟಿ, ರಘುರಾಮ ಶೆಟ್ಟಿ, ಕಾಂಗ್ರೆಸ್ ಮುಖಂಡರಾದ ಎಂ.ಎ. ಗಫೂರ್, ಮಂಜುನಾಥ ಭಂಡಾರಿ, ವಂಡ್ಸೆ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಸಂಪಿಗೇಡಿ ಸಂಜೀವ ಶೆಟ್ಟಿ, ಕುಂದಾಪುರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಶಿವರಾಮ ಶೆಟ್ಟಿ, ತಾಪಂ ಮಾಜಿ ಅಧ್ಯಕ್ಷೆ ಜ್ಯೋತಿ ಪುತ್ರನ್, ಸುಬ್ರಹ್ಮಣ್ಯ ಶೆಟ್ಟಿ, ಇಚ್ಚಿತಾರ್ಥ ಶೆಟ್ಟಿ ಸೇರಿದಂತೆ ಹಲವರು ಉಪಸ್ಥಿತರಿದ್ದರು.
ಉಡುಪಿ ಜಿಲ್ಲಾ ಕಾಂಗ್ರೆಸ್ ಉಪಾಧ್ಯಕ್ಷ ರಾಜು ಪೂಜಾರಿ ಸ್ವಾಗತಿಸಿ, ಪ್ರಾಸ್ತಾವಿಕ ಮಾತುಗಳನ್ನಾಡಿದರು. ಬ್ಲಾಕ್ ಕಾಂಗ್ರೆಸ್ ಕಾರ್ಯದರ್ಶಿ ನಾಗರಾಜ ಗಾಣಿಗ ವಂದಿಸಿದರು. ಬೈಂದೂರಿನ ವಿವಿಧ ಭಾಗಗಳಿಂದ ಐನೂರಕ್ಕೂ ಮಿಕ್ಕಿ ಕಾಂಗ್ರೆಸ್ ಪಕ್ಷದ ಕಾರ್ಯಕರ್ತರು ಬೈಕ್ ಮೂಲಕ ಆಗಮಿಸಿದ್ದರು. ಐದು ಸಾವಿರಕ್ಕೂ ಅಧಿಕ ಕಾರ್ಯಕರ್ತರು ಸಭೆಯಲ್ಲಿದ್ದರು.
One thought on “ಬೈಂದೂರಿನಲ್ಲಿ ಕಾಂಗ್ರೆಸ್ ಬ್ಲಾಕ್ ಅಧ್ಯಕ್ಷರ ಪದಗ್ರಹಣ ಹಾಗೂ ಕಾರ್ಯಕರ್ತರ ಸಮಾವೇಶ”