ಕುಂದಾಪ್ರ ಡಾಟ್ ಕಾಂ ಸುದ್ದಿ.
ಬೈಂದೂರು: ಉಡುಪಿ ಜಿಲ್ಲಾ ಗೃಹರಕ್ಷಕ ದಳ ಬೈಂದೂರು ಘಟಕದ ವತಿಯಿಂದ ಬುಧವಾರ ಬೈಂದೂರು ಪೇಟೆ ಭಾಗದಲ್ಲಿ ಕೋವಿಡ್-19 ಹರಡುವಿಕೆ ತಡೆಗಟ್ಟಲು ಜನ ಜಾಗೃತಿ ಅಭಿಯಾನ ಹಮ್ಮಿಕೊಳ್ಳಲಾಗಿತ್ತು.
ಉಡುಪಿ ಜಿಲ್ಲಾ ಗೃಹರಕ್ಷಕ ದಳದ ಕಮಾಂಡೆಂಟ್ ಪ್ರಶಾಂತ್ ಶೆಟ್ಟಿ ಹಾಗೂ ಬೈಂದೂರು ತಹಸಿಲ್ದಾರ್ ಬಸಪ್ಪ ಪಿ. ಪೂಜಾರ್ ಅವರು ಜಾಥಾವನ್ನು ಉದ್ಘಾಟಿಸಿದರು. ಬೈಂದೂರು ಪ್ರಾಥಮಿಕ ಆರೋಗ್ಯ ಕೇಂದ್ರದ ಆಪ್ತ ಸಹಾಯಕ ನಾಗರಾಜ್ ಕೋವಿಡ್ ಜಾಗೃತಿ ಮಾಹಿತಿ ನೀಡಿದರು.
ಈ ಸಂದರ್ಭ ಬೈಂದೂರು ಪೊಲೀಸ್ ವೃತ್ತ ನಿರೀಕ್ಷಕ ಸುರೇಶ್ ನಾಯ್ಕ್, ಗೃಹರಕ್ಷಕ ದಳದ ಡೆಪ್ಯೂಟಿ ಕಮಾಂಡೆಂಟ್ ರಮೇಶ್, ಕುಂದಾಪುರ ಗೃಹರಕ್ಷಕ ದಳದ ಘಟಕಾಧಿಕಾರಿ ಭಾಸ್ಕರ್, ಬ್ರಹ್ಮಾವರ ಗೃಹರಕ್ಷಕ ದಳದ ಘಟಕಾಧಿಕಾರಿ ಸ್ಟೀವನ್ ಪ್ರಕಾಶ್ ಲೂಯಿಸ್, ಬೈಂದೂರು ಗೃಹರಕ್ಷಕ ದಳದ ಸಂಸ್ಥಾಪಕ ಘಟಕಾಧಿಕಾರಿ ಎನ್. ಹನುಮಂತ್, ಅಧೀಕ್ಷಕ ರತ್ನಾಕರ ಎಂ., ಸಮಾಜ ಸೇವಕ ಸುಬ್ರಹ್ಮಣ್ಯ ಬಿಜೂರು ಈ ಸಂದರ್ಭ ಉಪಸ್ಥಿತರಿದ್ದರು. ಬೈಂದೂರು ಗೃಹರಕ್ಷಕ ದಳದ ಘಟಕಾಧಿಕಾರಿ ರಾಘವೇಂದ್ರ ಎನ್. ಕಾರ್ಯಕ್ರಮ ನಿರೂಪಿಸಿ, ವಂದಿಸಿದರು.