ಅರಣ್ಯ ಅಭಿವೃದ್ಧಿ ನಿಗಮದ ಅಧ್ಯಕ್ಷರಾಗಿ ಶಾಸಕ ಕೆ. ಗೋಪಾಲ ಪೂಜಾರಿ ನೇಮಕ

Call us

Call us

Call us

Call us

ಕುಂದಾಪ್ರ ಡಾಟ್ ಕಾಂ ಸುದ್ದಿ.
ಬೈಂದೂರು: ರಾಜ್ಯದ ನಿಗಮ-ಮಂಡಳಿಗಳಿಗೆ ಅಧ್ಯಕರನ್ನು ನೇಮಕ ಮಾಡಿ ತಕ್ಷಣದಿಂದ ಜಾರಿಗೆ ಬರುವಂತೆ ರಾಜ್ಯ ಸರ್ಕಾರ ಆದೇಶ ಹೊರಡಿಸಿದ್ದು, ಬೈಂದೂರು ಶಾಸಕ ಕೆ. ಗೋಪಾಲ ಪೂಜಾರಿ ಅವರು ಕರ್ನಾಟಕ ಅರಣ್ಯ ಅಭಿವೃದ್ಧಿ ನಿಗಮ ನಿಯಮಿತ ಅಧ್ಯಕ್ಷರಾಗಿ ನೇಮಕಗೊಂಡಿದ್ದಾರೆ. ನಾಲ್ಕನೇ ಭಾರಿಗೆ ಬೈಂದೂರು ಕ್ಷೇತ್ರದ ಶಾಸಕರಾಗಿ ಆಯ್ಕೆಗೊಂಡಿದ್ದ ಗೋಪಾಲ ಪೂಜಾರಿ ಅವರಿಗೆ ಹಿರಿತನದ ಆಧಾರದಲ್ಲಿ ಕಾಂಗ್ರೆಸ್ ಸರಕಾರದಲ್ಲಿ ಸಚಿವರಾಗುವ ಅವಕಾಶವಿದ್ದರೂ ಕಾರಣಾಂತರದಿಂದ ಅದು ಕೈತಪ್ಪಿ ಹೋಗಿತ್ತು. ಈಗ ನಿಗಮ ಮಂಡಳಿ ಅಧ್ಯಕ್ಷರನ್ನಾಗಿ ನೇಮಿಸಿರುವುದು ಸಹಜವಾಗಿ ಅವರ ಅಭಿಮಾನಿಗಳಲ್ಲಿ ಸಂತಸವನ್ನುಂಟುಮಾಡಿದೆ.

Call us

Click Here

Click here

Click Here

Call us

Visit Now

Click here

ನಿಗಮ ಮಂಡಳಿಯ ಪಟ್ಟಿಯಲ್ಲಿ 21 ಶಾಸಕರು ಸ್ಥಾನ ಪಡೆದಿದ್ದು, 70 ಕಾರ್ಯಕರ್ತರು ಮತ್ತು ಮುಖಂಡರಿಗೆ ಅಧ್ಯಕ್ಷ ಸ್ಥಾನ ಲಭಿಸಿದೆ. ಅಧಿಕಾರ ವಹಿಸಿಕೊಂಡ ದಿನದಿಂದ ಜಾರಿಗೆ ಬರುವಂತೆ ಅಧ್ಯಕ್ಷರಿಗೆ ಸಂಪುಟ ದರ್ಜೆ ಸಚಿವರ ಸ್ಥಾನಮಾನ ನೀಡಲಾಗಿದೆ.

ಅಧ್ಯಕ್ಷ ಸ್ಥಾನ ಪಡೆದಿರುವ ಶಾಸಕರ ಪಟ್ಟಿ
* ಕೆ.ಗೋಪಾಲ ಪೂಜಾರಿ, ಕರ್ನಾಟಕ ಅರಣ್ಯ ಅಭಿವೃದ್ಧಿ ನಿಗಮ ನಿಯಮಿತ
* ಕೆ.ವಸಂತ ಬಂಗೇರ, ಕರ್ನಾಟಕ ರಾಜ್ಯ ಸಣ್ಣ ಕೈಗಾರಿಕೆಗಳ ಅಭಿವೃದ್ಧಿ ನಿಗಮ
* ಮಾಲಿಕಯ್ಯ ವೆಂಕಯ್ಯ ಗುತ್ತೇದಾರ, ಕರ್ನಾಟಕ ಗೃಹ ಮಂಡಳಿ
* ಆರ್.ವಿ.ದೇವರಾಜ್, ಕರ್ನಾಟಕ ಕೊಳಗೇರಿ ಅಭಿವೃದ್ಧಿ ಮಂಡಳಿ
* ಕೆ.ವೆಂಕಟೇಶ್, ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರ
* ರಾಜಶೇಖರ ಬಿ.ಪಾಟೀಲ, ಕೆ.ಆರ್.ಐ.ಡಿ.ಎಲ್
* ಎನ್.ನಾಗರಾಜ್, ಕರ್ನಾಟಕ ಆಹಾರ ಮತ್ತು ನಾಗರಿಕ ಸರಬರಾಜು ನಿಗಮ ನಿಯಮಿತ
* ಫಿರೋಜ್ ಶೇಠ್, ಕರ್ನಾಟಕ ರಾಜ್ಯ ಪ್ರವಾಸೋದ್ಯಮ ಅಭಿವೃದ್ಧಿ ನಿಗಮ ನಿಯಮಿತ
* ಪುಟ್ಟರಂಗಶೆಟ್ಟಿ ಸಿ., ಕರ್ನಾಟಕ ರಸ್ತೆ ಅಭಿವೃದ್ಧಿ ನಿಗಮ ನಿಯಮಿತ
* ರಹೀಂ ಖಾನ್, ಕರ್ನಾಟಕ ರಾಜ್ಯ ಉಗ್ರಾಣ ನಿಗಮ
* ಬಿ.ಆರ್.ಯಾವಗಲ್ಲ, ಹಟ್ಟಿ ಚಿನ್ನದ ಗಣಿ ಕಂಪನಿ ನಿಯಮಿತ
* ಎಂ.ಕೆ.ಸೋಮಶೇಖರ್, ಕರ್ನಾಟಕ ರೇಷ್ಮೆ ಉದ್ಯಮಗಳ ನಿಗಮ ನಿಯಮಿತ
* ಜಿ.ಎಸ್.ಪಾಟೀಲ್, ಕರ್ನಾಟಕ ನವೀಕರಿಸಬಹುದಾದ ಇಂಧನ ಅಭಿವೃದ್ಧಿ ನಿಯಮಿತ
* ಶಿವಾನಂದ ಎಸ್.ಪಾಟೀಲ, ಕರ್ನಾಟಕ ನಗರ ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿ
* ಹಂಪನಗೌಡ ಬಾದರ್ಲಿ, ಮೈಸೂರು ಸೇಲ್ಸ್ ಇಂಟರ್‌ನ್ಯಾಷನಲ್ ಲಿಮಿಟೆಡ್
* ಹೆಚ್.ಆರ್.ಅಲಗೂರ, ಕರ್ನಾಟಕ ಸಾಬೂನು ಮತ್ತು ಮಾರ್ಜಕ ನಿಯಮಿತ
* ಡಿ.ಸುಧಾಕರ್, ಕರ್ನಾಟಕ ರಾಜ್ಯ ವಿದ್ಯುನ್ಮಾನ ಅಭಿವೃದ್ಧಿ ನಿಗಮ ನಿಯಮಿತ
* ಬಾಬೂರಾವ್ ಚಿಂಚನಸೂರ್, ಕರ್ನಾಟಕ ಗಡಿ ಪ್ರದೇಶಾಭಿವೃದ್ಧಿ ಪ್ರಾಧಿಕಾರ
* ಶಾರದಾ ಮೋಹನ್ ಶೆಟ್ಟಿ, ಕರಾವಳಿ ಅಭಿವೃದ್ಧಿ ಪ್ರಾಧಿಕಾರ
* ಎನ್.ವೈ.ಗೋಪಾಲ ಕೃಷ್ಣ, ಸಮಿತಿ ಶಿಫಾರಸುಗಳ ಅನುಷ್ಠಾನ ಸಮಿತಿ
* ಜಿ.ಹಂಪಯ್ಯ ನಾಯಕ್ ಬಲ್ಲಟಗಿ, ಅಚ್ಚುಕಟ್ಟು ಅಭಿವೃದ್ಧಿ ಪ್ರಾಧಿಕಾರ, ತುಂಗಭದ್ರ ಯೋಜನೆ
* ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾಗಿ ಪ್ರೊ.ಸಿದ್ದರಾಮಯ್ಯ ಅವರನ್ನು ನೇಮಕ ಮಾಡಲಾಗಿದೆ.

Leave a Reply

Your email address will not be published. Required fields are marked *

thirteen + sixteen =