ಕುಂದಾಪ್ರ ಡಾಟ್ ಕಾಂ ಸುದ್ದಿ.
ಬೈಂದೂರು: ಬೈಂದೂರು ಪಟ್ಟಣ ಪಂಚಾಯತ್ ವ್ಯಾಪ್ತಿಯ ಉದ್ದಿಮೆದಾರರಿಗೆ 2023-24 ನೇ ಸಾಲಿನಲ್ಲಿ ವ್ಯಾಪಾರ ಆನ್‌ಲೈನ್ ತಂತ್ರಾಂಶದ ಮೂಲಕ ಸೃಜಿಸಿದ ಡಿಜಿಟಲ್ ಸಹಿಯುಳ್ಳ ಉದ್ದಿಮೆ ಪರವಾನಿಗೆ ನೀಡಲಾಗುತ್ತಿದ್ದು, ಪ್ರಸಕ್ತ ಸಾಲಿನಲ್ಲಿ ಆನ್‌ಲೈನ್ ತಂತ್ರಾಂಶದ ಮೂಲಕ ಸೃಜಿಸಿದ ಡಿಜಿಟಲ್ ಸಹಿಯುಳ್ಳ ಉದ್ದಿಮೆ ಪರವಾನಿಗೆ ಪಡೆಯಲು ಬಾಕಿ ಹಾಗೂ ನವೀಕರಿಸದೇ ಇರುವವರು ಈ ಕೂಡಲೇ ದಂಡ ಪಾವತಿಯೊಂದಿಗೆ ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ.
ಏಪ್ರಿಲ್ 1ರ ನಂತರ 2023-24ನೇ ಸಾಲಿನ ಪರವಾನಿಗೆ ನವೀಕರಣಕ್ಕೆ ಅವಕಾಶ ಕಲ್ಪಿಸಲಾಗುವುದು. ಪರವಾನಿಗೆ ಪಡೆದು ಉದ್ದಿಮೆ ನಡೆಸದೇ ಇರುವವರು ಲಿಖಿತ ಮಾಹಿತಿ ನೀಡಿ, ಉದ್ದಿಮೆ ಪರವಾನಿಗೆ ರದ್ದುಪಡಿಸದಿದ್ದಲ್ಲಿ ಉದ್ದಿಮೆ ಶುಲ್ಕ ಹಾಗೂ ದಂಡ ವಿಧಿಸಲಾಗುವುದು.
ಹೆಚ್ಚಿನ ಮಾಹಿತಿಗಾಗಿ ಪಟ್ಟಣ ಪಂಚಾಯತ್ ಕಚೇರಿಯನ್ನು ಸಂಪರ್ಕಿಸಬಹುದಾಗಿದೆ ಎಂದು ಪ್ರಕಟಣೆ ತಿಳಿಸಿದೆ.