ಕುಂದಾಪ್ರ ಡಾಟ್ ಕಾಂ ಸುದ್ದಿ.
ಕುಂದಾಪುರ: ಹೋಮ್ ಕ್ವಾರಂಟೈನ್ ನಿಯಮ ಉಲ್ಲಂಘಿಸಿ, ತಿರುಗಾಡುತ್ತಿದ್ದ ವ್ಯಕ್ತಿಯ ವಿರುದ್ಧ ಕುಂದಾಪುರ ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಈತ 163 ಬಾರಿ ಹೊರಗೆ ಬಂದಿರುವ ಬಗ್ಗೆ ಮೊಬೈಲ್ ಜಿಪಿಎಸ್ ಟ್ರ್ಯಾಕರ್ನಿಂದ ತಿಳಿದು ಬಂದಿದೆ.
ಮುಂಬಯಿನಿಂದ ಕೋಟೇಶ್ವರಕ್ಕೆ ಬಂದಿದ್ದ ಸಹಬ್ ಸಿಂಗ್ ಹೋಮ್ ಕ್ವಾರಂಟೈನ್ ನಿಯಮ ಉಲ್ಲಂಘಿಸಿದ ಆರೋಪಿ. ಈತ ಕುಂದಾಪುರದಲ್ಲಿ ಗ್ಲಾಸ್ ಮತ್ತು ಫ್ಲೈವುಡ್ ವ್ಯವಹಾರ ನಡೆಸುತ್ತಿದ್ದರು ಎನ್ನಲಾಗಿದೆ. ಜೂ.29 ರಂದು ಕೋಟೇಶ್ವರದ ಬೈಪಾಸ್ ಬಳಿಯ ಬಾಡಿಗೆ ಮನೆಗೆ ಬಂದಿದ್ದು, ಆತನಿಗೆ ಜು.13 ರವರೆಗೆ ಹೋಂ ಕ್ವಾರಂಟೈನ್ ನೀಡಲಾಗಿತ್ತು. ಆದರೆ ಆತ ಈ ಅವಧಿಯಲ್ಲಿ ನಿಯಮ ಉಲ್ಲಂಘಿಸಿ, ಉಡುಪಿಯ ಹೋಟೆಲ್ಗಳಿಗೆ ತಿರುಗಾಡುತ್ತಿರುವ ಬಗ್ಗೆ 163 ಬಾರಿ ಹೊರಗೆ ಬಂದ ಬಗ್ಗೆ ಮೊಬೈಲ್ ಜಿಪಿಎಸ್ ಟ್ರ್ಯಾಕರ್ನಿಂದ ತಿಳಿದು ಬಂದಿದೆ.
ಈ ಬಗ್ಗೆ ಫ್ಲೈಯಿಂಗ್ ಸ್ಕ್ವಾಡ್ ಅಧಿಕಾರಿಯಾಗಿ ಕಾರ್ಯನಿರ್ವಹಿಸುತ್ತಿರುವ ಎನ್.ಜಿ. ಭಟ್ ಅವರು ಕುಂದಾಪುರ ಠಾಣೆಗೆ ದೂರು ನೀಡಿದ್ದು, ಅವರ ದೂರಿನಂತೆ ಸಹಬ್ ಸಿಂಗ್ ವಿರುದ್ಧ ಐಪಿಸಿ ಸೆಕ್ಷನ್ 269, 270 ರಡಿ ಪ್ರಕರಣ ದಾಖಲಾಗಿದೆ.
ಇದನ್ನೂ ಓದಿ:
► ಕೋವಿಡ್ ಸೋಂಕಿಗೆ 70 ವರ್ಷದ ಬೈಂದೂರಿನ ವೃದ್ಧ ಸಾವು – https://kundapraa.com/?p=39461 .
► ಕುಂದಾಪುರ: ಎಎಸ್ಪಿ ಕಛೇರಿ ಸಿಬ್ಬಂದಿ ಸೇರಿದಂತೆ ಮೂವರು ಪೊಲೀಸರಿಗೆ ಕೋವಿಡ್ ಪಾಸಿಟಿವ್ – https://kundapraa.com/?p=39463 .
► ಉಡುಪಿ ಜಿಲ್ಲೆಯ ಕೋವಿಡ್ ಅಪ್ಡೇಟ್: ಸೋಮವಾರ 53 ಪಾಸಿಟಿವ್ ದೃಢ – https://kundapraa.com/?p=39470 .