ಬೈಂದೂರು ಸರ್ಕಲ್ ಇನ್ಸ್‌ಪೆಕ್ಟರ್ ಆಗಿ ಸಂತೋಷ್ ಕಾಯ್ಕಿಣಿ ಅಧಿಕಾರ ಸ್ವೀಕಾರ

Call us

Call us

ಕುಂದಾಪ್ರ ಡಾಟ್ ಕಾಂ ಸುದ್ದಿ.
ಬೈಂದೂರು: ಬೈಂದೂರಿನ ನೂತನ ಪೊಲೀಸ್ ಸರ್ಕಲ್ ಇನ್ಸ್‌ಪೆಕ್ಟರ್ ಆಗಿ ಸಂತೋಷ್ ಕಾಯ್ಕಿಣಿ ಸೋಮವಾರ ಅಧಿಕಾರ ಸ್ವೀಕರಿಸಿದ್ದಾರೆ.

Click Here

Call us

Call us

ಈ ಹಿಂದೆ ಮೂರು ವರ್ಷ ಬೈಂದೂರು ಸಬ್ ಇನ್ಸಪೆಕ್ಟರ್ ಆಗಿದ್ದ ಸಂತೋಷ್ ಕಾಯ್ಕಿಣಿ ಅವರು ಹಲವು ಪ್ರಕರಣಗಳನ್ನು ಯಶಸ್ವಿಯಾಗಿ ನಿಭಾಯಿಸಿದ್ದರು. ಬಳಿಕ ಕೋಟ, ಹೊನ್ನಾವರದ ಪೊಲೀಸ್ ಠಾಣೆ, ನಕ್ಸಲ್ ನಿಗ್ರಹ ದಳದ ಶೃಂಗೇರಿ ಕ್ಯಾಂಪ್‌ನಲ್ಲಿ ಸಬ್ ಇನ್ಸಪೆಕ್ಟರ್ ಸೇವೆ ಸಲ್ಲಿಸಿ ಕಳೆದ ಒಂದೂವರೆ ವರ್ಷದ ಹಿಂದೆ ಅಲ್ಲಿಯೇ ಇನ್ಸ್‌ಪೆಕ್ಟರ್ ಆಗಿ ಭಡ್ತಿ ಹೊಂದಿದ್ದರು. ಇತ್ತಿಚಿಗೆ ಸರಕಾರ ಬೈಂದೂರಿಗೆ ವರ್ಗಾವಣೆಯ ಮಾಡಿ ಆದೇಶ ಹೊರಡಿಸಿದ್ದು, ಅದರಂತೆ ಇಂದು ಅಧಿಕಾರ ಸ್ವೀಕರಿಸಿದ್ದಾರೆ.

Click here

Click Here

Call us

Visit Now

  • ಬೈಂದೂರು ಭಾಗದಲ್ಲಿ ಜನರು ಕಾನೂನಿಗೆ ಬೆಲೆ ಕೊಡುತ್ತಾರೆ ಮತ್ತು ಸೌಹಾರ್ದಯುತವಾಗಿ ಬದುಕುತ್ತಿದ್ದಾರೆ. ಈ ಹಿಂದೆಯೂ ಸೇವೆ ಸಲ್ಲಿಸಿರುವುದರಿಂದ ಇಲ್ಲಿನ ಚಿತ್ರಣ ತಿಳಿದಿದೆ. ಬೈಂದೂರು ವೃತ್ತನಿರೀಕ್ಷಕರ ಕಛೇರಿ ವ್ಯಾಪ್ತಿಯಲ್ಲಿ ಕಾನೂನು ಸುವ್ಯವಸ್ಥೆ ಕಾಪಾಡುವಲ್ಲಿ ಹಾಗೂ ಪೊಲೀಸ್ ವ್ಯವಸ್ಥೆಯನ್ನು ಜನಸ್ನೇಹಿಯಾಗಿಸುವಲ್ಲಿ ಪ್ರಾಮಾಣಿಕ ಪ್ರಯತ್ನ ಮಾಡಲಾಗುವುದು – ಸಂತೋಷ್ ಕಾಯ್ಕಿಣಿ, ವೃತ್ತ ನಿರೀಕ್ಷಕರು, ಬೈಂದೂರು 

 

Leave a Reply

Your email address will not be published. Required fields are marked *

thirteen + fifteen =