ಕುಂದಾಪ್ರ ಡಾಟ್ ಕಾಂ ಸುದ್ದಿ.
ಕುಂದಾಪುರ: ಸಿಎಂ ಸ್ನೇಹಿತ ಬೀಜಾಡಿ ರಾಘವೇಂದ್ರ ರಾವ್ ಹಾಸನ ಅವರು ಲೋಕಕಲ್ಯಾಣಾರ್ಥ ಕೈಗೊಂಡ 1008 ಕಾಯಿ ಗಣಹೋಮದಲ್ಲಿ ಪಾಲ್ಗೊಳ್ಳಲು ಸಿಎಂ ಬಿ.ಎಸ್. ಯಡಿಯೂರಪ್ಪ ಕುಟುಂಬಿಕರ ಜೊತೆ ದೇವಸ್ಥಾನಕ್ಕೆ ಆಗಮಿಸಿದರು.
ಮುಖ್ಯಮಂತ್ರಿಯಾಗಿ ಆನೆಗುಡ್ಡೆಗೆ ಮೊದಲ ಭೇಟಿಯಾಗಿದ್ದು, ಇದೂವರೆಗೆ ಮೂರನೇ ಬಾರಿ ಅವರು ಕ್ಷೇತ್ರಕ್ಕೆ ಬರುತ್ತಿದ್ದಾರೆ. ವೇ.ಮೂ.ಸೀತಾರಾಮ ಐತಾಳ್, ವೇ.ಮೂ.ಸುಬ್ರಹ್ಮಣ್ಯ ಉಪಾಧ್ಯಾಯ, ಪ್ರಾಣೇಶ್ ತಂತ್ರಿ, ಅಸೋಡು ಶ್ರೀಧರ ಉಪಾಧ್ಯಾಯ, ರಾಘವೇಂದ್ರ ಉಪಾಧ್ಯಾಯ, ಶ್ರೀನಿವಾಸ ಉಪಾಧ್ಯಾಯ ನೇತೃತ್ವದಲ್ಲಿ 28 ಜನ ವೈದರು 1008 ಕಾಯಿ ಗಣಹೋಮ ನೆರೆವೇರಿಸಿದರು. ದೇವಸ್ಥಾನಕ್ಕೆ ಆಗಮಿಸಿದ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರ ದೇವಸ್ಥಾನದ ಹಿಂದಿನ ಮೊಕ್ತೇಸರ ಸೂರ್ಯನಾರಾಯಣ ಉಪಾಧ್ಯಾಯ ಮತ್ತು ಈಗಿನ ಮೊಕ್ತೇಸರ ಶ್ರೀರಮಣ ಉಪಾಧ್ಯಾಯ ಬರಮಾಡಿಕೊಂಡು ಮುಖ್ಯಮಂತ್ರಿ ಯಡಿಯೂರಪ್ಪ ಅವರ ದೇವಸ್ಥಾನ ವತಿಯಿಂದ ಗೌರವಿಸಿದರು. ದೇವರ ದರ್ಶನ ಪಡೆದು ವಿಶೇಷ ಪೂಜೆ ಸಲ್ಲಿಸಿದ ಮುಖ್ಯಮಂತ್ರಿ ಗಣಹೋಮದಲ್ಲಿ ಪಾಲ್ಗೊಂಡು, ಪ್ರಸಾದ ಭೋಜನ ಸ್ವೀಕರಿಸಿ, ಕೋಟೇಶ್ವರ ಯುವ ಮೆರಿಡಿಯನ್ ಹೆಲಿಪ್ಯಾಡ್ ಮೂಲಕ ಬೆಂಗಳೂರಿಗೆ ನಿರ್ಗಮಿಸಿದರು. ಮುಖ್ಯಮಂತ್ರಿ ಭೇಟಿ ಹಿನ್ನೆಲೆಯಲ್ಲಿ ಉಡುಪಿ ಎಸ್ಪಿ ವಿಷ್ಣುವರ್ಧನ್ ನೇತೃತ್ವದಲ್ಲಿ ಕುಂದಾಪುರ ಪ್ರಭಾರ ಡಿವೈಎಸ್ಪಿ ಭರತ್ ರೆಡ್ಡಿ ಮಾರ್ಗದರ್ಶನದಲ್ಲಿ ಕುಂದಾಪುರ ಸಿಪಿಐ ಹಾಗೂ ಪಿಎಸ್‌ಐ ಸೇರಿದಂತೆ 170 ಪೊಲೀಸರು ಹಾಗೂ ಗೃಹರಕ್ಷಕ ಸಿಬ್ಬಂದಿಗಳು ಬಂದೋಬಸ್ತ್ ಕರ್ತವ್ಯದಲ್ಲಿದ್ದರು.
ಇದನ್ನೂ ಓದಿ
► ರಾಜ್ಯಕ್ಕೆ ಹಾಗೂ ಎಲ್ಲರಿಗೂ ಹಿತವಾಗುವ ಬಜೆಟ್ ಮಂಡಿಸುತ್ತೇನೆ: ಸಿಎಂ ಬಿಎಸ್‌ವೈ – https://kundapraa.com/?p=44271 .