ಕುಂದಾಪ್ರ ಡಾಟ್ ಕಾಂ ಸುದ್ದಿ.
ಕುಂದಾಪುರ: ಮುಂಬೈನಿಂದ ಬಂದು ಕ್ವಾರಂಟೈನ್‌ನಲ್ಲಿದ್ದ ಕುಂದಾಪುರ ಮೂಲದ ವ್ಯಕ್ತಿಯೋರ್ವರು (54 ವರ್ಷ) ವ್ಯಕ್ತಿಯೋರ್ವರು ಮಣಿಪಾಲದ ಕೆಎಂಸಿ ಆಸ್ಪತ್ರೆಯಲ್ಲಿ ಸಾವನ್ನಪ್ಪಿದ್ದು, ಅವರಿಗೆ ಕೊರೋನಾ ಪಾಸಿಟಿವ್ ಇದ್ದಿರುವುದು ವರದಿಯಲ್ಲಿ ದೃಢಪಟ್ಟಿದೆ.
ಮೇ 13 ರಂದು ಕುಂದಾಪುರದಲ್ಲಿ ಕ್ವಾರಂಟೈನ್ ಇದ್ದ ವ್ಯಕ್ತಿಯನ್ನು ಎದೆನೋವು ಕಾಣಿಸಿಕೊಳ್ಳುತ್ತಿದ್ದಂತೆಯೇ ಕುಂದಾಪುರ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಎದೆನೋವು ತೀವ್ರ ಸ್ವರೂಪ ಪಡೆದುಕೊಳ್ಳುತ್ತಿದ್ದಂತೆಯೇ ಅವರನ್ನು ಮಣಿಪಾಲದದ ಖಾಸಗಿ ಆಸ್ಪತ್ರೆಗೆ ದಾಖಲಾಯಿತು. ವ್ಯಕ್ತಿಗೆ ಉಸಿರಾಟದ ತೊಂದರೆ ಇದ್ದ ಕಾರಣ ಐಸೋಲೇಷನ್ ವಾರ್ಡ್‌ನಲ್ಲಿ ಕೊರೋನಾ ಮಾರ್ಗಸೂಚಿಯಂತೆಯೇ ಚಿಕಿತ್ಸೆ ನೀಡಲಾಗಿತ್ತು. ಚಿಕಿತ್ಸೆ ಫಲಕಾರಿಯಾಗದೆ ವ್ಯಕ್ತಿ ಮೇ 14ರಂದು ಸಾವನ್ನಪ್ಪಿದ್ದಾರೆ. ಕೊರೊನಾ ಶಂಕೆ ಇರುವ ಹಿನ್ನೆಲೆಯಲ್ಲಿ ವ್ಯಕ್ತಿಯ ಗಂಟಲಿನ ದ್ರವನ್ನು ಪರೀಕ್ಷೆಗಾಗಿ ಕಳುಹಿಸಲಾಗಿತ್ತು. ಇಂದು ವರದಿ ಕೈಸೇರಿದ್ದು, ಅವರಿಗೆ ಕೊರೋನಾ ಸೊಂಕು ಇರುವುದು ಪರೀಕ್ಷಾ ವರದಿಯಲ್ಲಿ ದೃಢಪಟ್ಟಿದೆ.
ಅವರಿಗೆ ಚಿಕಿತ್ಸೆ ನೀಡಿದ ಸಿಬ್ಬಂದಿಗಳನ್ನು ಕ್ವಾರಂಟೈನ್ ಮಾಡಲಾಗಿದೆ. ಅವರ ಟ್ರಾವೆಲ್ ಹಿಸ್ಟರಿ ಪಡೆಯಲಾಗುತ್ತಿದ್ದು, ಸಂಪರ್ಕಕ್ಕೆ ಬಂದವರ ಮಾಹಿತಿ ಕಲೆಹಾಕಲಾಗುತ್ತಿದೆ. ಸರಕಾರದ ಮಾರ್ಗಸೂಚಿಯಂತೆ ಆಸ್ಪತ್ರೆಯ ತುರ್ತು ಚಿಕಿತ್ಸಾ ವಿಭಾಗ ಮತ್ತು ಬೆಳಿಗ್ಗೆ 8:30ರಿಂದ 1ರವರೆಗೆ ಹೊರರೋಗಿ ವಿಭಾಗ ಎಂದಿನಂತೆ ಕಾರ್ಯನಿರ್ವಹಿಸಲಿದೆ. /ಕುಂದಾಪ್ರ ಡಾಟ್ ಕಾಂ ಸುದ್ದಿ/