ಕುಂದಾಪುರ: ಪತಿ-ಪತ್ನಿಗೆ ಕೊರೋನಾ ಪಾಸಿಟಿವ್

Call us

ಕುಂದಾಪ್ರ ಡಾಟ್ ಕಾಂ ಸುದ್ದಿ.
ಕುಂದಾಪುರ: ನಗರದ ಚಿಕನ್‌ಸಾಲ್ ರಸ್ತೆ ವಾರ್ಡಿನ 58 ವರ್ಷದ ವ್ಯಕ್ತಿ ಹಾಗೂ 50 ವರ್ಷದ ಅವರ ಪತ್ನಿಗೆ ಕೋವಿಡ್ ಪಾಸಿಟಿವ್ ಇರುವುದು ಬುಧವಾರ ದೃಢಪಟ್ಟಿದ್ದು, ಅವರನ್ನು ಕೋವಿಡ್ ಆಸ್ಪತ್ರೆಗೆ ದಾಖಲಿಸಲಾಗಿದೆ.

Call us

Call us

ದಂಪತಿಗಳ ಸಂಬಂಧಿಕರೊಬ್ಬರು ಇತ್ತೀಚೆಗಷ್ಟೇ ಬೆಂಗಳೂರಿನಿಂದ ಬಂದಿದ್ದರು. ಅವರಿಗೆ ಕೋವಿಡ್ ಪಾಸಿಟಿವ್ ಬಂದಿತ್ತು. ಆ ಮನೆಯಲ್ಲಿದ್ದ ನಾಲ್ವರನ್ನು ಕ್ವಾರಂಟೈನ್ ಮಾಡಿ, ಅವರ ಗಂಟಲ ದ್ರವದ ವರದಿಯನ್ನು ಪರೀಕ್ಷೆಗೆ ಕಳುಹಿಸಲಾಗಿತ್ತು. ಅದರಲ್ಲಿ ದಂಪತಿಯ ವರದಿ ಪಾಸಿಟಿವ್ ಬಂದಿದ್ದು, ಉಳಿದ ಇಬ್ಬರದು ನೆಗೆಟಿವ್ ಬಂದಿದೆ. ಸದ್ಯ ಮನೆಯನ್ನು ಸೀಲ್ಡೌನ್ ಮಾಡಿ, ದಂಪತಿಗಳನ್ನು ಕೋವಿಡ್ ಆಸ್ಪತ್ರೆಗೆ ದಾಖಲಿಸಲಾಗಿದೆ.

 

Leave a Reply

Your email address will not be published. Required fields are marked *

fourteen + 9 =