ಡಾ. ಬಿ. ಆರ್. ಅಂಬೇಡ್ಕರ್ ಅಭಿವೃದ್ಧಿ ನಿಗಮದಿಂದ ಸಾಲ ಸೌಲಭ್ಯಕ್ಕೆ ಅರ್ಜಿ ಆಹ್ವಾನ

Call us

Call us

ಕುಂದಾಪ್ರ ಡಾಟ್ ಕಾಂ ಸುದ್ದಿ.
ಉಡುಪಿ,ಅ.13: ಪ್ರಸ್ತುತ ಸಾಲಿನ ಡಾ.ಬಿ.ಆರ್.ಅಂಬೇಡ್ಕರ್ ಅಭಿವೃದ್ಧಿ ನಿಗಮ, ಕರ್ನಾಟಕ ಆದಿಜಾಂಬವ ಅಭಿವೃದ್ಧಿ ನಿಗಮದಿಂದ ಸ್ವಯಂ ಉದ್ಯೋಗ ನೇರಸಾಲ, ಉದ್ಯಮಶೀಲತಾ ಅಭಿವೃದ್ಧಿ(ಐ.ಎಸ್.ಬಿ.), ಭೂ ಒಡೆತನ, ಮೈಕ್ರೋ ಕ್ರೆಡಿಟ್ ಹಾಗೂ ಗಂಗಾ ಕಲ್ಯಾಣ ಯೋಜನೆ ಹಾಗೂ ಪರಿಶಿಷ್ಟ ಜಾತಿ ಅಲೆಮಾರಿ, ಅರೆ ಅಲೆಮಾರಿ, ಸೂಕ್ಷ್ಮ ಮತ್ತು ಅತಿಸೂಕ್ಷ್ಮ ಸಮುದಾಯಗಳ ಅಭಿವೃದ್ಧಿ ಕೋಶದಿಂದ ಸ್ವಯಂ ಉದ್ಯೋಗ ನೇರಸಾಲ, ಉದ್ಯಮಶೀಲತಾ ಅಭಿವೃದ್ಧಿ(ಐ.ಎಸ್.ಬಿ.), ಮೈಕ್ರೋ ಕ್ರೆಡಿಟ್ ಸಾಲ ಸೌಲಭ್ಯಕ್ಕಾಗಿ ಅರ್ಹ ಫಲಾನುಭವಿಗಳಿಂದ ಅರ್ಜಿ ಆಹ್ವಾನಿಸಿದೆ.

Click Here

Call us

Call us

ಈಗಾಗಲೇ ನಿಗಮದಿಂದ ಯಾವುದೇ ಸೌಲಭ್ಯ ಪಡೆಯದವರು ಆಗಸ್ಟ್ 31 ರೊಳಗೆ ಅರ್ಜಿ ಸಲ್ಲಿಸಬಹುದು. ಡಾ.ಬಿ.ಆರ್.ಅಂಬೇಡ್ಕರ್ ಅಭಿವೃದ್ಧಿ ನಿಗಮ ಮತ್ತು ಪರಿಶಿಷ್ಟ ಜಾತಿ ಅಲೆಮಾರಿ, ಅರೆ ಅಲೆಮಾರಿ, ಸೂಕ್ಷ್ಮ ಮತ್ತು ಅತಿಸೂಕ್ಷ್ಮ ಸಮುದಾಯಗಳ ಅಭಿವೃದ್ಧಿ ಕೋಶದಡಿ ಅರ್ಜಿ ನಮೂನೆಯನ್ನು ನಿಗಮದ http://adcl.karnataka.gov.in ನಲ್ಲಿ ಹಾಗೂ ಕರ್ನಾಟಕ ಆದಿಜಾಂಬವ ಅಭಿವೃದ್ಧಿ ನಿಗಮದಡಿ http://adijambava.karnataka.gov.in ವೆಬ್‌ಸೈಟ್ ನಲ್ಲಿ ಅರ್ಜಿ ಸಲ್ಲಿಸಬಹುದಾಗಿದೆ.

Click here

Click Here

Call us

Visit Now

ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ವ್ಯವಸ್ಥಾಪಕರ ಕಛೇರಿ, ಡಾ.ಬಿ.ಆರ್.ಅಂಬೇಡ್ಕರ್ ಅಭಿವೃದ್ಧಿ ನಿಗಮ, ಬಿ ಬ್ಲಾಕ್, ಕೊಠಡಿ ಸಂಖ್ಯೆ 302, ರಜತಾದ್ರಿ ಮಣಿಪಾಲ-576104, ದೂರವಾಣಿ ಸಂಖ್ಯೆ: 0820-2574884 ಸಂಪರ್ಕಿಸಬಹುದು.

Leave a Reply

Your email address will not be published. Required fields are marked *

12 − 12 =