ಕುಂದಾಪ್ರ ಡಾಟ್ ಕಾಂ ಸುದ್ದಿ.
ಉಡುಪಿ: ಜಿಲ್ಲೆಯಲ್ಲಿ ಮುಂಗಾರು ಹಂಗಾಮಿಗೆ ಮುಖ್ಯ ಬೆಳೆಯಾದ ಮಳೆಯಾಶ್ರಿತ ಭತ್ತವನ್ನು ಗ್ರಾಮ ಪಂಚಾಯತ್ ಮಟ್ಟಕ್ಕೆ ಬೆಳೆ ವಿಮೆ ಯೋಜನೆಯಡಿ ನೋಂದಣಿಗಾಗಿ ಅಧಿಸೂಚಿಸಲಾಗಿದೆ. ಮುಂಗಾರು ಹಂಗಾಮಿಗೆ ಅಧಿಸೂಚಿತ ಬೆಳೆಯ ರೈತರು ಬೆಳೆ ವಿಮೆ ಯೋಜನೆಯಡಿ ನೋಂದಣಿ ಮಾಡಿಸಿಕೊಳ್ಳಲು ಜುಲೈ 31 ದಿನಾಂಕವಾಗಿದೆ.
ಬೆಳೆ ಸಾಲ ಪಡೆಯದ ರೈತರು ಪಹಣಿ ಪತ್ರ, ಖಾತೆ/ಪುಸ್ತಕ, ಕಂದಾಯ ರಸೀದಿ ಮತ್ತು ಆಧಾರ್ ಸಂಖ್ಯೆಗಳನ್ನು ಒದಗಿಸಿ ಸ್ಥಳೀಯ ಸಾಲ ನೀಡುವ ವಾಣಿಜ್ಯ ಅಥವಾ ಗ್ರಾಮೀಣ ಮಟ್ಟದ ವ್ಯವಸಾಯ ಸೇವಾ ಸಹಕಾರ ಸಂಘಗಳು, ಸಾರ್ವಜನಿಕ ಸೇವಾ ಕೇಂದ್ರ ವಿಮಾ ಸಂಸ್ಥೆಗಳನ್ನು ಸಂಪರ್ಕಿಸಿ ಬೆಳೆ ವಿಮೆಗೆ ನೋಂದಾಯಿಸಿಕೊಳ್ಳಬಹುದಾಗಿದೆ. ವಿಮಾ ಮೊತ್ತ ಪ್ರತೀ ಹೆಕ್ಟೇರ್ ಗೆ ರೂ.55000 ಗಳಾಗಿದ್ದು, ವಿಮಾ ಕಂತಿನ ದರ ಪ್ರತೀ ಹೆಕ್ಟೇರ್ ಗೆ ರೂ.1100 ಆಗಿದೆ.
ಬೆಳೆ ವಿಮಾ ಯೋಜನೆಯಿಂದ ರೈತರಿಗೆ ಪ್ರಯೋಜನಗಳು
ಅಧಿಸೂಚಿತ ಘಟಕದಲ್ಲಿ ಸಂಭವಿಸುವ ಹವಾಮಾನ ವೈಪರೀತ್ಯಗಳಾದ ಹೆಚ್ಚಿನ ಮಳೆ ಮುಳುಗಡೆ, ಧೀರ್ಘಕಾಲ ತೇವಾಂಶ ಕೊರತೆ , ತೀವ್ರ ಬರಗಾಲ, ಮುಂತಾದವುಗಳಿAದ ಬಿತ್ತನೆಯಾದ 1 ತಿಂಗಳಿನಿAದ ಕಟಾವಿನ 15 ದಿನ ಪೂರ್ವದವರೆಗಿನ ಬೆಳೆಯಲ್ಲಿ ಬೆಳೆ ನಷ್ಟವಾಗಿ ನಿರೀಕ್ಷಿತ ಇಳುವರಿಯು, ಪ್ರಾರಂಭಿಕ ಇಳುವರಿಯ ಶೇ.50 ಕ್ಕಿಂತ ಕಡಿಮೆ ಇದ್ದಲ್ಲಿ ಅಥವಾ ಬೆಳೆ ಬೆಳೆ ನಷ್ಟ ಕಂಡುಬAದಲ್ಲಿ ಮುಂಚಿತವಾಗಿ ವಿಮೆ ಮಾಡಿದ ರೈತರಿಗೆ ಶೇ.25ರಷ್ಟು ಬೆಳೆ ನಷ್ಟ ಪರಿಹಾರ ದೊರೆಯಲಿದೆ. ಬೆಳೆ ಕಟವಿನ ವಾಸ್ತವಿಕ ಇಳುವರಿ ಆಧಾರದ ಮೇಲೆ ಅಂತಿಮ ಬೆಳೆ ನಷ್ಟ ಪರಿಹಾರದಲ್ಲಿ ಹೊಂದಾಣಿಕೆ.
ಸ್ಥಳ ನಿರ್ದಿಷ್ಟ ಪ್ರಕೃತಿ ವಿಕೋಪಗಳಾದ ಆಲಿಕಲ್ಲು ಮಳೆ, ಭೂಕುಸಿತ,ಬೆಳೆ ಮುಳುಗಡೆ ,ಮೇಘ ಸ್ಪೋಟ ಹಾಗೂ ಗುಡುಗು ಮಿಂಚುಗಳಿAದ ಉಂಟಾಗುವ ಬೆಂಕಿ ಅವಘಡಗಳಿಂದ ಬೆಳೆ ಹಾನಿಯಾಗಿದ್ದಲ್ಲಿ ವೈಯಕ್ತಿಕ ವಾಗಿ ಪರಿಹಾರ ದೊರೆಯಲಿದ್ದು .ಅಧಿಸೂಚಿತ ಘಟಕದಲ್ಲಿ ಶೇ.25 ಕ್ಕಿಂತ ಹೆಚ್ಚಿನ ಪ್ರದೇಶದಲ್ಲಿ ಬೆಳೆ ನಷ್ಟವಾದಲ್ಲಿ ವಿಮಗೆ ಒಳಪಟ್ಟ ಬೆಳೆ ನಷ್ಠವಾದ ರೈತರಿಗೆ ಮಾದರಿ ಸಮೀಕ್ಷೆಗೆ ಅನುಗುಣವಾಗಿ ಪರಿಹಾರ.
ಕಟಾವಿನ ನಂತರದ ಬೆಳೆಯನ್ನು ಜಮೀನಿನಲ್ಲಿ ಒಣಗಲು ಬಿಟ್ಟ ಸಂದರ್ಭದಲ್ಲಿ(14 ದಿನಗಳ ಒಳಗೆ) ಚಂಡಮಾರುತ ಅಕಾಲಿಕ ಮಳೆಯಿಂದ ಬೆಳೆ ನಾಶವಾದ್ದಲ್ಲಿ ವೈಯಕ್ತಿಕವಾಗಿ ಪರಿಹಾರ ದೊರೆಯಲಿದೆ. ಮೇಲಿನ ಎರಡೂ ಸಂದರ್ಭದಲ್ಲಿ ರೈತರು ವಿಮಾ/ಆರ್ಥಿಕ ಸಂಸ್ಥೆ ಅಥವಾ ಕೃಷಿ ತೋಟಗಾರಿಕಾ ಇಲಾಖಾ ಕಚೇರಿಗೆ 72 ಘಂಟೆಗಳ ಒಳಗಾಗಿ ಬೆಳೆ ಹಾನಿ ವಿವರದ ಮಾಹಿತಿ ಒದಗಿಸಬೇಕಾಗಿರುತ್ತದೆ.
ಮಳೆ ಅಭಾವ ಅಥವಾ ಪ್ರತಿಕೂಲ ಹವಾಮಾನ ಪರಿಸ್ಥಿತಿಯಲ್ಲಿ ಅಧಿಸೂಚಿತ ಘಟಕದಲ್ಲಿ ಶೇ.75 ರಷ್ಟು ಬಿತ್ತನೆಯಾಗಿದ್ದಲ್ಲಿ ವಿಮೆ ಮಾಡಿಸಿದ ರೈತರಿಗೆ ವಿಮಾ ಮೊತ್ತದ ಶೇ. 25 ರಷ್ಟು ಪರಿಹಾರ.
ಹೆಚ್ಚಿನ ಮಾಹಿತಿಗಾಗಿ ಸ್ಥಳೀಯ ಕೃಷಿ ಇಲಾಖೆಯ ಕಛೇರಿಯನ್ನು ಸಂಪರ್ಕಿಸಬಹುದಾಗಿದೆ ಎಂದು ಉಡುಪಿ ಜಿಲ್ಲೆಯ ಜಂಟಿ ಕೃಷಿ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.