ರಾಷ್ಟ್ರೀಯ ಯುವ ಸಪ್ತಾಹ: ಕೊಲ್ಲೂರಿನಲ್ಲಿ ಸೈಕಲ್ ರ‍್ಯಾಲಿ

ಕುಂದಾಪ್ರ ಡಾಟ್ ಕಾಂ ಸುದ್ದಿ.
ಕೊಲ್ಲೂರು: ನೆಹರು ಯುವ ಕೇಂದ್ರ ಉಡುಪಿ ಹಾಗೂ ನವಶಕ್ತಿ ಮಹಿಳಾ ವೇದಿಕೆ ರಿ. ಕೊಲ್ಲೂರು ಇವರ ಸಂಯುಕ್ತ ಆಶ್ರಯದಲ್ಲಿ ಶ್ರೀ ಮೂಕಾಂಬಿಕಾ ದೇವಳದ ಪ್ರೌಢಶಾಲೆ ಕೊಲ್ಲೂರಿನಲ್ಲಿ ರಾಷ್ಟ್ರೀಯ ಯುವ ಸಪ್ತಾಹ ಅಂಗವಾಗಿ ಸೈಕಲ್ ರ‍್ಯಾಲಿಗೆ ಕೊಲ್ಲೂರು ಗ್ರಾಮ ಪಂಚಾಯತ್ ಅಧ್ಯಕ್ಷರಾದ ಪ್ರಕಾಶ್ ಪೂಜಾರಿ ಚಾಲನೆ ನೀಡಿದರು.

ಕೊಲ್ಲೂರು ದೇವಳದ ಪದವಿ ಪೂರ್ವ ಕಾಲೇಜು ಪ್ರಾಂಶುಪಾಲ ಅರುಣ್ ಕುಮಾರ್ ಶೆಟ್ಟಿ ಮಾತನಾಡಿ ವ್ಯಾಯಾಮದ ಮೂಲಕ ಶರೀರದ ಫಿಟ್ನೆಸ್‌ಗೆ ಸೈಕ್ಲಿಂಗ್ ಅತ್ಯಂತ ಉಪಯೋಗಕಾರಿದೆ. ಈಗಿನ ಕಾಲದಲ್ಲಿ ಎಲ್ಲರೂ ಕುಳಿತಲ್ಲೇ ಕೆಲಸ ಮಾಡುವುದು, ವ್ಯಾಯಾಮ ಮಾಡದೆ ಇರುವುದು ಸರಿಯಾದ ಸಮಯಕ್ಕೆ ಆಹಾರ ಸೇವಿಸದೆ ಇರುವುದರಿಂದ ಖಾಯಿಲೆಗಳು ಅವರನ್ನು ಕಾಡುತ್ತಿದೆ. ಸದೃಢ ದೇಹದಿಂದ, ಸದೃಢ ಮನಸ್ಸು, ಸದೃಢ ಭಾರತ ಸೃಷ್ಟಿಸುವುದು ನಮ್ಮ ನಿಮ್ಮೆಲ್ಲರ ಕರ್ತವ್ಯ ಎಂದು ಅಭಿಪ್ರಾಯಪಟ್ಟರು.

ಕಾರ್ಯಕ್ರಮದಲ್ಲಿ ಮೂಕಾಂಬಿಕ ದೇವಳದ ಆಡಳಿತ ಮಂಡಳಿಯ ಅಧ್ಯಕ್ಷರಾದ ಹರೀಶ್ ಕುಮಾರ್ ಶೆಟ್ಟಿ, ತಾಲ್ಲೂಕು ಪಂಚಾಯಿತಿ ಸದಸ್ಯೆ ಗ್ರೀಷ್ಮಾ ಗಿರಿಧರ ಭಿಡೆ, ಶಾಲಾ ಮುಖ್ಯೋಪಾಧ್ಯಾಯರಾದ ನಾಗರಾಜ್ ಭಟ್, ದೈಹಿಕ ಶಿಕ್ಷಣ ಶಿಕ್ಷಕರಾದ ಸಚಿನ್ ಕುಮಾರ್ ಶೆಟ್ಟಿ, ನವಶಕ್ತಿ ಮಹಿಳಾ ವೇದಿಕೆಯ ಸದಸ್ಯರು ಹಾಗೂ ಶಾಲಾ ಶಿಕ್ಷಕರ ಮತ್ತು ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

 

Leave a Reply

Your email address will not be published. Required fields are marked *

seventeen − sixteen =