ಕೊರೋನಾ ರೋಗ ಲಕ್ಷಣಗಳು ಕಂಡು ಬಂದಲ್ಲಿ ಕೂಡಲೇ ಪರೀಕ್ಷೆಗೆ ಸೂಚಿಸಿ: ಖಾಸಗಿ ಆಸ್ಪತ್ರೆಗಳಿಗೆ ಡಿಸಿ ಸೂಚನೆ

ಕುಂದಾಪ್ರ ಡಾಟ್ ಕಾಂ ಸುದ್ದಿ.
ಉಡುಪಿ: ಜಿಲ್ಲೆಯಲ್ಲಿ ಕೋವಿಡ್ ಸೋಂಕಿತರ ಪ್ರಮಾಣ ಹೆಚ್ಚಳವಾಗುತ್ತಿದ್ದು, ಕೋವಿಡ್ ಸೋಂಕಿತರುಕೊನೆಯಕ್ಷಣದಲ್ಲಿಆಸ್ಪತ್ರೆಗೆದಾಖಲಾಗುತ್ತಿದ್ದಾರೆ. ಸಾರ್ವಜನಿಕರು ಪ್ರಾರಂಭದಲ್ಲಿ ಸ್ಥಳೀಯ ಕ್ಲಿನಿಕ್/ಡಾಕ್ಟರ್ ಹತ್ತಿರ ಹೋಗಿ ಕೋವಿಡ್ ಸೋಂಕಿನ ಲಕ್ಷಣವಾದಜ್ವರ, ಶೀತ,ಕೆಮ್ಮು, ಮುಂತಾದವುಗಳಿಗೆ ಮದ್ದನ್ನು ವೈದ್ಯರಿಂದ ಪಡೆಯುತ್ತಿದ್ದು, ನಂತರ ರೋಗ ಉಲ್ಬಣಗೊಂಡು ಆಸ್ಪತ್ರೆಗೆ ದಾಖಲಾಗುತ್ತಿದ್ದಾರೆ. ಅಲ್ಲದೆ ಕೆಲವು ರೋಗಿಗಳು ತುಂಬಾ ಉಲ್ಬಣಗೊಂಡ ನಂತರ ದಾಖಲಾಗುವುದರಿಂದ ಮರಣ ಹೊಂದುತ್ತಿದ್ದಾರೆ.

ಕೋವಿಡ್ರೋಗ ಲಕ್ಷಣವಾದ ಕೆಮ್ಮು, ಜ್ವರ, ಮೈ ಕೈ ನೋವು ಮುಂತಾದವುಗಳು ಕಂಡು ಬಂದತಕ್ಷಣ ಪರೀಕ್ಷೆ ಮಾಡಿಸಿಕೊಳ್ಳುವುದು ಅತೀಅವಶ್ಯಕವಾಗಿದ್ದು, ಕೋವಿಡ್ ದೃಡಪಟ್ಟಲ್ಲಿ ಅದಕ್ಕೆ ಚಿಕಿತ್ಸೆ ನೀಡಿ ಗುಣಮುಖರನ್ನಾಗಿ ಮಾಡುವುದು ಸಾಧ್ಯವಾಗುತ್ತದೆ. ಆದರೆ ಪ್ರಾರಂಭದಲ್ಲಿ ಸ್ಥಳೀಯ ವೈದ್ಯರಿಂದ ತಾತ್ಕಾಲಿಕ ಉಪಶಮನ ಪಡೆಯುವುದರಿಂದ ತಾತ್ಕಾಲಿಕವಾಗಿ ಪರಿಹಾರ ಸಿಕ್ಕಿದರೂ, ದಿನ ಕಳೆದಂತೆ ರೋಗ ಲಕ್ಷಣಗಳು ಉಲ್ಬಣಗೊಂಡು ಕೊನೆಯ ಹಂತದಲ್ಲಿ ಆಸ್ಪತ್ರೆಗೆ ದಾಖಲಾಗಲು ತಡವಾಗಿರುತ್ತದೆ.

ರೋಗಿಗಳಲ್ಲಿ ಕೋರೋನಾ ಸೋಂಕು ಲಕ್ಷಣಕಂಡು ಬಂದಲ್ಲಿ ವೈದ್ಯರು ತಾತ್ಕಾಲಿಕ ಉಪಶಮನ ಚಿಕಿತ್ಸೆ ನೀಡದೆ, ನೇರವಾಗಿ ಕೊರೋನಾ ಸೋಂಕಿನ ಬಗ್ಗೆ ಪರೀಕ್ಷೆ ಮಾಡಿ ವರದಿ ಪಡೆಯಲು ಕಡ್ಡಾಯವಾಗಿ ಸೂಚನೆ ನೀಡಬೇಕು. ಕ್ಲಿನಿಕ್ ನಲ್ಲಿ ಸ್ಥಳೀಯ ಕೋರೋನಾ ಸೋಂಕು ಲಕ್ಷಣಗಳಿರುವ ರೋಗಿಗಳಿಗೆ ಚಿಕಿತ್ಸೆ ನೀಡಿ, ರೋಗ ಉಲ್ಬಣಗೊಂಡು ರೋಗಿಗಳು ಮೃತಪಟ್ಟ ಪ್ರಕರಣಗಳು ಕಂಡುಬಂದಲ್ಲಿ ಅಂತಹ ವೈದ್ಯರ ಮೇಲೆ ವಿಪತ್ತು ನಿರ್ವಹಣಾ ಕಾಯ್ದೆ 2005 ಮತ್ತು ಕರ್ನಾಟಕ ಸಾಂಕ್ರಾಮಿಕ ರೋಗಗಳು 2020ರ ಕಾಯಿದೆರಂತೆ ಕ್ರಮಕೈಗೊಳ್ಳಲಾಗುವುದು ಅಲ್ಲದೆ ಅಂತವರ ಪರವಾನಿಗೆಯನ್ನು ಅಮಾನತ್ತಿನಲ್ಲಿಡಲು ಕ್ರಮವಹಿಸಲಾಗುವುದೆಂದು ಜಿಲ್ಲಾಧಿಕಾರಿ ಜಿ. ಜಗದೀಶ್ ಎಚ್ಚರಿಸಿದ್ದಾರೆ.

Leave a Reply

Your email address will not be published. Required fields are marked *

ten − 6 =