ಕುಂದಾಪುರ ಡಾ. ಬಿ.ಬಿ. ಹೆಗ್ಡೆ ಕಾಲೇಜಿನ ಹಳೆ ವಿದ್ಯಾರ್ಥಿ ಸಂಘ ರಚನೆಗೆ ಪೂರ್ವಭಾವಿ ಸಭೆ

Call us

Call us

ಕುಂದಾಪ್ರ ಡಾಟ್ ಕಾಂ ಸುದ್ದಿ
ಬೆಂಗಳೂರು: ಕುಂದಾಪುರ ಡಾ. ಬಿ.ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜಿನ ಹಳೆ ವಿದ್ಯಾರ್ಥಿಗಳ ಸಂಘಟನಾ ಸಭೆಯು ಬೆಂಗಳೂರಿನ ಲಾಲ್‌ಬಾಲ್ ಉದ್ಯಾನವನದಲ್ಲಿ ಜರುಗಿತು. ಕಾಲೇಜಿನ ವಿವಿಧ ಚಟುವಟಿಕೆಗಳು ಹಾಗೂ ಇನ್ನಿತರೇ ಸಮಾಜಮುಖಿ ಕಾರ್ಯಗಳಲ್ಲಿ ತೊಡಗಿಸಿಕೊಳ್ಳುವ ಸಲುವಾಗಿ ಹಳೆ ವಿದ್ಯಾರ್ಥಿ ಸಂಘವನ್ನು ಕಟ್ಟುವ ನಿರ್ಣಯ ಸಭೆಯಲ್ಲಿ ಕೈಗೊಳ್ಳಲಾಯಿತು.

Click here

Click Here

Call us

Call us

Visit Now

Call us

Call us

ಕುಂದಾಪುರದಲ್ಲಿ ಹಲವಾರು ಶಿಕ್ಷಣ ಸಂಸ್ಥೆಗಳನ್ನು ಕಟ್ಟಿ ಮುನ್ನಡೆಸುತ್ತಿರುವ ಬಿ.ಎಂ. ಸುಕುಮಾರ ಶೆಟ್ಟಿ ಅವರು, ಶಿಕ್ಷಣ ಕ್ಷೇತ್ರ ಹಾಗೂ ಸಾಮಾಜಿಕ ಕ್ಷೇತ್ರದಲ್ಲಿ ತೋರಿರುವ ಒಲವು ವಿದ್ಯಾರ್ಥಿ ಸಂಘಟನೆಯೊಂದನ್ನು ಕಟ್ಟಲು ಪ್ರೇರೆಪಿಸಿದೆ ಎನ್ನುವ ಹಳೆ ವಿದ್ಯಾರ್ಥಿಗಳು ಕಾಲೇಜಿನಲ್ಲಿ ಹಳೆ ವಿದ್ಯಾರ್ಥಿ ಸಂಘವನ್ನು ಕಟ್ಟಿ ಕಾಲೇಜಿನ ಚಟುವಟಿಕೆಗಳಿಗೆ ಸಹಕಾರಿಯಾಗುವ ಮತ್ತು ವಿದ್ಯಾರ್ಥಿಗಳಿಗೊಂದು ಮಾದರಿಯಾಗುವ ನಿಟ್ಟಿನಲ್ಲಿ ಮುನ್ನಡೆಯುವ ನಿರ್ಣಯ ಕೈಗೊಂಡರು. ಕುಂದಾಪ್ರ ಡಾಟ್ ಕಾಂ ಸುದ್ದಿ

ಸಭೆಯಲ್ಲಿ ಹಳೆ ವಿದ್ಯಾರ್ಥಿ ಸಂಘದ ರಚನೆ, ಉದ್ದೇಶ ಹಾಗೂ ಕಾರ್ಯಚಟುವಟಿಕೆಗಳ ಬಗ್ಗೆ ಚರ್ಚಿಸಿ ನೊಂದಣಿಯನ್ನು ಆರಂಭಿಸಲಾಯಿತು. ಎಲ್ಲಾ ಹಳೆ ವಿದ್ಯಾರ್ಥಿಗಳನ್ನು ಸಂಪರ್ಕಿಸಿ ಶೀಘ್ರವೇ ಸಂಘವನ್ನು ಅಸ್ತಿತ್ವಕ್ಕೆ ತರುವ ನಿರ್ಣಯ ಕೈಗೊಳ್ಳಲಾಯಿತು. ಸಭೆಯಲ್ಲಿ ಹಳೆ ವಿದ್ಯಾರ್ಥಿಗಳಾದ ಪವಿತ್ರ, ರೋಹಿತ್, ವಜ್ರೇಶ್, ಸಾಜನ್ ಹೆಬ್ಬಾರ್, ಮೊದಲಾದವರು ತಮ್ಮ ಅಭಿಪ್ರಾಯ ಹಂಚಿಕೊಂಡರು. ಸುಮಾರು 100 ಮಂದಿ ಹಳೆವಿದ್ಯಾರ್ಥಿಗಳು ಸಭೆಯಲ್ಲಿ ಭಾಗವಹಿಸಿದ್ದರು. ಅಶ್ವಿನ್, ಗಣೇಶ್, ಉಮೇಶ್, ಪ್ರಸಾದ್ ಕಾರ್ಯಕ್ರಮದ ನೇತೃತ್ವ ವಹಿಸಿದ್ದರು.

IMG-20160302-WA0046

Leave a Reply

Your email address will not be published. Required fields are marked *

1 × 4 =