ಕುಂದಾಪ್ರ ಡಾಟ್ ಕಾಂ ಸುದ್ದಿ.
ಬೈಂದೂರು: ಕರ್ನಾಟಕ ಜ್ಞಾನ ವಿಜ್ಞಾನ ಸಮಿತಿ ಉಡುಪಿ ಇದರ ಎ ಪಿ ಭಟ್ ಮತ್ತು ಅತುಲ್ ಭಟ್ ಮಾರ್ಗದರ್ಶನದಲ್ಲಿ ಶಾಲಾ ವಿದ್ಯಾರ್ಥಿಗಳಿಗೆ ಡಿಸೆಂಬರ್ 26ರಂದು ಸಂಭವಿಸಲಿರುವ ಕಂಕಣ ಸೂರ್ಯಗ್ರಹಣದ ಬಗ್ಗೆ ಮಾಹಿತಿ ಮತ್ತು ಪ್ರಾತ್ಯಕ್ಷಿಕೆ ಕಾರ್ಯಕ್ರಮ ನಡೆಸಲಾಗುತ್ತಿದ್ದು, ಬುಧವಾರ ಬೈಂದೂರು ಸರಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಪ್ರಾತ್ಯಕ್ಷಿಕೆ ನಡೆಸಲಾಯಿತು.
ಪೂರ್ಣಪ್ರಜ್ಞಾ ಕಾಲೇಜಿನ ವಿದ್ಯಾರ್ಥಿಗಳಾದ ಜೇಷ್ಠಾ ಪ್ರಭು, ಶಾಂಭವಿ ವಿ ಭಟ್, ಕುಮಾರ ಚವ್ವನ ಹೆಗ್ಡೆ ಮತ್ತು ಮಹಮ್ಮದ್ ಹಶಿಮ್ ಅನ್ವರ್ ಮಾಹಿತಿ ಮತ್ತು ಪ್ರಾತ್ಯಕ್ಷಿಕೆ ಕಾರ್ಯಕ್ರಮವನ್ನು ಬೈಂದೂರು ಸರಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲೆ ಸೇರಿದಂತೆ ವಿವಿಧ ಶಾಲೆಗಳಿಗೆ ತೆರಳಿ ಪ್ರಾತ್ಯಕ್ಷಿಕೆ ನೀಡಿದರು. ವಿದ್ಯಾರ್ಥಿಗಳು ಗ್ರಹಣ ವೀಕ್ಷಿಸಲು ಪಿನ್ಹೋಲ್ ಯಂತ್ರ ಹಾಗೂ ಕನ್ನಡಕವನ್ನು ನೀಡಿದರು.
ಈ ಸಂದರ್ಭ ಉದ್ಯಮಿಗಳಾದ ಶ್ರೀನಿವಾಸ ಪ್ರಭು ಉಪಸ್ಥಿತರಿದ್ದರು. ಶಾಲಾ ಪದವೀಧರ ಮುಖ್ಯೋಪಾಧ್ಯಾಯರಾದ ಜನಾರ್ಧನ ದೇವಾಡಿಗ ಸ್ವಾಗತಿಸಿದರು ಕರ್ನಾಟಕ ಜ್ಞಾನ ವಿಜ್ಞಾನ ಸಮಿತಿಯ ಜಿಲ್ಲಾ ಸಂಚಾಲಕರಾದ ಗಣಪತಿ ಹೋಬಳಿದಾರ್ ಕಾರ್ಯಕ್ರಮ ನಿರ್ವಹಿಸಿದರು.