ಮಾಜಿ ಸಚಿವ ಜಯಪ್ರಕಾಶ್ ಹೆಗ್ಡೆ ಬಿಜೆಪಿಗೆ ಸೇರ್ಪಡೆ

Call us

Call us

ಕುಂದಾಪ್ರ ಡಾಟ್ ಕಾಂ ಸುದ್ದಿ.
ಬೆಂಗಳೂರು: ಮಾಜಿ ಸಂಸದ ಜಯಪ್ರಕಾಶ್ ಹೆಗ್ಡೆ ಅವರು ಬೆಂಗಳೂರಿನ ಮಲ್ಲೇಶ್ವರದಲ್ಲಿರುವ ರಾಜ್ಯ ಬಿಜೆಪಿ ಕಚೇರಿಯಲ್ಲಿ ನಡೆದ ಸಮಾರಂಭದಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ಬಿ ಎಸ್ ಯಡಿಯೂರಪ್ಪ ಅವರಿಂದ ಪಕ್ಷದ ಧ್ವಜವನ್ನು ಸ್ವೀಕರಿಸುವ ಮೂಲಕ ಭಾರತೀಯ ಜನತಾ ಪಕ್ಷಕ್ಕೆ ಸೇರ್ಪಡೆಗೊಂಡರು.

Call us

Call us

Call us

ಇದೇ ವೇಳೆ ಮೂಡಬಿದರೆಯ ಕಾಂಗ್ರೆಸ್ ನಾಯಕ ಮೇಘನಾಥ್ ಶೆಟ್ಟಿ, ಹೊಸಪೇಟೆಯ ಮಾಜಿ ಶಾಸಕ ರತನ್ ಸಿಂಗ್ ಕೂಡ ಬಿಜೆಪಿಗೆ ಸೇರ್ಪಡೆಗೊಂಡರು. ಈ ಸಂದರ್ಭದಲ್ಲಿ ವಿಪಕ್ಷ ನಾಯಕ ಜಗದೀಶ್ ಶೆಟ್ಟರ್, ಆರ್. ಅಶೋಕ್, ವಿ ಸೋಮಣ್ಣ, ಕಾರ್ಕಳ ಸುನಿಲ್ ಕುಮಾರ್, ಮಾಜಿ ಸಚಿವ ನಾಗರಾಜ್ ಶೆಟ್ಟಿ, ಉಡುಪಿಯ ಮಾಜಿ ಶಾಸಕ ರಘುಪತಿ ಭಟ್ ಹಾಗೂ ಇತರರು ಉಪಸ್ಥಿತರಿದ್ದರು. ಕುಂದಾಪ್ರ ಡಾಟ್ ಕಾಂ ಸುದ್ದಿ.

ಕುಂದಾಪುರ ತಾಲೂಕಿನ ಕೋರ್ಗಿಯವರಾದ ಜಯಪ್ರಕಾಶ್ ಹೆಗ್ಡೆ ಅವರು ವೃತ್ತಿಯಲ್ಲಿ ವಕೀಲರು. ಮೊದಲ ಭಾರಿಗೆ ಬ್ರಹ್ಮಾವರ ಕ್ಷೇತ್ರದಿಂದ ಜನತಾ ಪರಿವಾರದ ಮೂಲಕ ಸ್ವರ್ಧಿಸಿ ಶಾಸಕರಾಗಿ ಆಯ್ಕೆಗೊಂಡು ಬಳಿಕ ಸಚಿವರಾಗಿಯೂ ಸೇವೆ ಸಲ್ಲಿಸಿದ್ದರು. ಜನತಾ ಪರಿವಾರದ ಒಡಕಿನ ಹಿನ್ನೆಲೆಯಲ್ಲಿ ಪಕ್ಷೇತರರಾಗಿ ಸ್ಪರ್ಧಿಸಿ ಗೆದ್ದಿದ್ದರು. ಕ್ಷೇತ್ರ ಮರುವಿಂಗಡಣೆಯ ಬಳಿಕ ಬ್ರಹ್ಮಾವರ ಕ್ಷೇತ್ರ ಉಡುಪಿಯೊಂದಿಗೆ ವಿಲೀ ಗೊಂಡಾಗ ಕಾಂಗ್ರೆಸ್ ಸೇರ್ಪಡೆಯಾದ ಹೆಗ್ಡೆ ಅವರು ಕುಂದಾಪುರ ಕ್ಷೇತ್ರದಲ್ಲಿ ಅಭ್ಯರ್ಥಿಯಾದರು. ಅಲ್ಲಿ ಹಾಲಾಡಿ ಶ್ರೀನಿವಾಸ್ ಶೆಟ್ಟಿ ಅವರೆದುರು ಸೋಲು ಅನುಭವಿಸಬೇಕಾಯಿತು. ಸಂಸದರಾಗಿದ್ದ ಡಿ.ವಿ.ಸದಾನಂದಗೌಡ ಮುಖ್ಯಮಂತ್ರಿ ಯಾದ ಬಳಿಕ ನಡೆದ ಉಪ ಚುನಾವಣೆಯಲ್ಲಿ ಉಡುಪಿ- ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿ ಸುನಿಲ್ ಕುಮಾರ್ ಕಾರ್ಕಳ ಅವರ ವಿರುದ್ಧ ಜಯಭೇರಿ ಬಾರಿಸಿ ಸಂಸತ್ ಪ್ರವೇಶಿಸಿದ್ದರು. ೨೦೧೪ರ ಲೋಕಸಭೆ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿ ಶೋಭಾ ಕರಂದ್ಲಾಜೆ ವಿರುದ್ಧ ಸೋಲು ಅನುಭವಿಸಿದ್ದರು. ಕಾಂಗ್ರೆಸ್ ಪಕ್ಷದ ಬಂಡಾಯ ಅಭ್ಯರ್ಥಿಯಾಗಿ ವಿಧಾನ ಪರಿಷತ್‌ಗೂ ಸ್ವರ್ಧಿಸಿ ಸೋಲು ಅನುಭವಿದ್ದ ಹೆಗ್ಡೆ ಅವರು ಬಹು ದಿನಗಳ ರಾಜಕೀಯ ಅಸ್ಥಿರತೆಯ ಬಳಿಕ ಅಂತಿಮವಾಗಿ ಬಿಜೆಪಿ ಪಕ್ಷಕ್ಕೆ ಸೇರ್ಪಡೆಗೊಂಡಿದ್ದಾರೆ.

 

 

Leave a Reply

Your email address will not be published. Required fields are marked *

2 × 5 =