ಕರ್ನಾಟಕದ ಕರಾವಳಿಯಲ್ಲಿ ಜೂನ್ 1ರಿಂದ ಮೀನುಗಾರಿಕೆ ನಿಷೇಧ

Call us

ಕುಂದಾಪ್ರ ಡಾಟ್ ಕಾಂ ಸುದ್ದಿ
ಉಡುಪಿ: ಕರ್ನಾಟಕ ಕರಾವಳಿ ಮೀನುಗಾರಿಕೆ ನಿಯಂತ್ರಣ ಕಾಯ್ದೆಯನ್ವಯ ಉಡುಪಿ ಜಿಲ್ಲೆಯನ್ನು ಸೇರಿದಂತೆ ಕರ್ನಾಟಕದ ಕರಾವಳಿಯಲ್ಲಿ ಯಾವುದೇ ಬಲೆಗಳನ್ನು / ಸಾಧನಗಳನ್ನು ಉಪಯೋಗಿಸಿ ಎಲ್ಲಾ ಯಾಂತ್ರೀಕೃತ ದೋಣಿಗಳ ಮುಖಾಂತರ ಹಾಗೂ 10 ಅಶ್ವಶಕ್ತಿ (ಹೆಚ್.ಪಿ) ಸಾಮರ್ಥ್ಯಕ್ಕಿಂತ ಮೇಲ್ಪಟ್ಟ ಇನ್‌ಬೋರ್ಡ್ ಅಥವಾ ಔಟ್‌ಬೋರ್ಡ್ ಯಂತ್ರಗಳನ್ನು ಅಳವಡಿಸಿರುವ ಸಾಂಪ್ರದಾಯಿಕ ದೋಣಿಗಳ ಮುಖಾಂತರ ಕೈಗೊಳ್ಳುವ ಮೀನುಗಾರಿಕೆ ಚಟುವಟಿಕೆಯನ್ನು ಜೂನ್ 1 ರಿಂದ ಜುಲೈ 31 ರವರೆಗೆ (ಉಭಯ ದಿನಗಳು ಸೇರಿ) ಒಟ್ಟು 61 ದಿನಗಳ ನಿಷೇಧವನ್ನು ಹೇರಿ ಆದೇಶ ಹೊರಡಿಸಿದೆ.

Call us

ದೋಣಿಯನ್ನು ಸಾಗಿಸುವ ಉದ್ದೇಶಕ್ಕಾಗಿ 10 ಅಶ್ವಶಕ್ತಿಯ ವರೆಗಿನ ಸಾಮರ್ಥ್ಯದ ಮೋಟರೀಕೃತ ದೋಣಿ ಹಾಗೂ ಸಾಂಪ್ರದಾಯಕ / ನಾಡದೋಣಿಗಳು ಕರಾವಳಿ ಮೀನುಗಾರಿಕೆಯನ್ನು ಕೈಗೊಳ್ಳಲು ಅನುಮತಿಸಿದೆ.

Call us

ಅಲ್ಲದೆ ಕೇಂದ್ರ ಕೃಷಿ, ಪಶುಸಂಗೋಪನೆ ಮತ್ತು ಮೀನುಗಾರಿಕೆ ಸಚಿವಾಲಯವು ಆದೇಶದಂತೆ ಕರ್ನಾಟಕ ಸೇರಿದಂತೆ ಪಶ್ಚಿಮ ಕರಾವಳಿಯ ಎಲ್ಲಾ ರಾಜ್ಯಗಳ ವಿಶೇಷ ಆರ್ಥಿಕ ವಲಯದ (12 ರಿಂದ 200 ನಾಟಿಕಲ್ ಮೈಲಿ) ಜಲಪ್ರದೇಶದಲ್ಲಿ ಜೂನ್ 1 ರಿಂದ ಜುಲೈ 31 ರವರೆಗೆ ಒಟ್ಟು 61 ದಿನಗಳ ಮೀನುಗಾರಿಕೆ ನಿಷೇಧವನ್ನು ಹೇರಿ ಏಕರೂಪದ ಮೀನುಗಾರಿಕೆ ನಿಷೇಧವನ್ನು ಜಾರಿಗೊಳಿಸಿದೆ.

ಮೀನುಗಾರಿಕೆ ನಿಷೇದಿಸಿದ ಸರ್ಕಾರದ ಆದೇಶವನ್ನು ಉಲ್ಲಂಘಿಸುವ ಮೀನುಗಾರಿಕಾ ದೋಣಿಗಳು ಮತ್ತು ಮೀನುಗಾರರು ಕರ್ನಾಟಕ ಕಡಲ ಮೀನುಗಾರಿಕೆ ಕಾಯ್ದೆ-1986ರಲ್ಲಿ ವಿಧಿಸಲಾಗಿರುವ ದಂಡನೆಗಳಿಗೆ ಹೊಣೆಯಾಗುವುದಲ್ಲದೇ ಒಂದು ವರ್ಷದ ಅವಧಿಗೆ ಡೀಸೆಲ್ ಮೇಲಿನ ಸಹಾಯಧನ ಪಡೆಯಲು ಅನರ್ಹರಾಗುತ್ತಾರೆ.

ಈ ಆದೇಶವನ್ನು ಕರಾವಳಿ ಪ್ರದೇಶದ ಎಲ್ಲಾ ಮೀನುಗಾರರ ಹಿತದೃಷ್ಟಿಯನ್ನು ಗಮನದಲ್ಲಿಟ್ಟುಕೊಂಡು ಹೊರಡಿಸಲಾಗಿರುವುದರಿಂದ ಎಲ್ಲಾ ಮೀನುಗಾರರು ಈ ಆದೇಶವನ್ನು ಪಾಲಿಸಿ ಸರ್ಕಾರದೊಂದಿಗೆ ಸಹಕರಿಸುವಂತೆ ಮೀನುಗಾರಿಕಾ ಉಪನಿರ್ದೇಶಕರು, ಉಡುಪಿ ಅವರ ಪ್ರಕಟಣೆ ತಿಳಿಸಿದೆ.

Leave a Reply

Your email address will not be published. Required fields are marked *

two × 4 =