ಮತ್ಸ್ಯ ಬಂಧನ – ಮೀನಿನ ಮೌಲ್ಯವರ್ಧಿತ ಖಾದ್ಯಗಳ ಉತ್ಪಾದನಾ ಘಟಕಕ್ಕೆ ಜ.19ರಂದು ಶಿಲಾನ್ಯಾಸ

Call us

ಕುಂದಾಪ್ರ ಡಾಟ್ ಕಾಂ ಸುದ್ದಿ.
ಕುಂದಾಪುರ: ಮತ್ಸ್ಯ ಬಂಧನ ಸಂಸ್ಥೆಯ ಮೀನಿನ ಮೌಲ್ಯವರ್ಧಿತ ಖಾದ್ಯಗಳ ಉತ್ಪಾದನಾ ಘಟಕದ ಶಿಲಾನ್ಯಾಸ ಸಮಾರಂಭವು ಬೈಂದೂರು ತಾಲೂಕಿನ ಎಲ್ಲೂರಿನಲ್ಲಿ ದಿನಾಂಕ 19-01-2021ರ ಮಧ್ಯಾಹ್ನ ಗಂಟೆ 1:30ಕ್ಕೆ ಜರುಗಲಿದೆ.

Call us

ಮೀನಿನ ಮೌಲ್ಯವರ್ಧಿತ ಖಾದ್ಯಗಳ ಉತ್ಪಾದನಾ ಘಟಕದ ಶಿಲಾನ್ಯಾಸವನ್ನು ಮುಜರಾಯಿ ಮೀನುಗಾರಿಕೆ, ಬಂದರು ಮತ್ತು ಒಳನಾಡು ಜಲಸಾರಿಗೆ ಸಚಿವರಾದ ಕೋಟ ಶ್ರೀನಿವಾಸ ಪೂಜಾರಿ ಅವರು ನೇರವೇರಿಸಲಿದ್ದು, ಈ ಸಂದರ್ಭ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವರಾದ ಎಸ್. ಅಂಗಾರ ಅವರು ಉಪಸ್ಥಿತರಿರಲಿದ್ದಾರೆ. ಸಭಾ ಕಾರ್ಯಕ್ರಮದ ಉದ್ಘಾಟನೆಯನ್ನು ಶಿವಮೊಗ್ಗ ಲೋಕಸಭಾ ಕ್ಷೇತ್ರದ ಸಂಸದರಾದ ಬಿ. ವೈ. ರಾಘವೇಂದ್ರ ಅವರು ನೆರವೇರಿಸಲಿದ್ದಾರೆ. ಬೈಂದೂರು ಕ್ಷೇತ್ರದ ಶಾಸಕರಾದ ಬಿ. ಎಂ. ಸುಕುಮಾರ ಶೆಟ್ಟಿ ಅವರು ಅಧ್ಯಕ್ಷತೆ ವಹಿಸಲಿದ್ದು, ಬಸ್ರೂರು ಮಹಾಲಿಂಗೇಶ್ವರ ದೇವಸ್ಥಾನದ ಆಡಳಿತದ ಧರ್ಮದರ್ಶಿ ಬಿ. ಅಪ್ಪಣ್ಣ ಹೆಗ್ಡೆ ಅವರು ಶುಭಶಂಸನೆಗೈಯಲಿದ್ದಾರೆ. ಕುಂದಾಪ್ರ ಡಾಟ್ ಕಾಂ.

ಕಾರ್ಯಕ್ರಮದಲ್ಲಿ ಕುಂದಾಪುರ ವಿಧಾನಸಭಾ ಕ್ಷೇತ್ರದ ಶಾಸಕರಾದ ಹಾಲಾಡಿ ಶ್ರೀನಿವಾಸ ಶೆಟ್ಟಿ, ಉಡುಪಿ ಶಾಸಕರಾದ ರಘುಪತಿ ಭಟ್ ಕೆ., ಕಾರ್ಕಳ ಶಾಸಕರಾದ ವಿ. ಸುನಿಲ್ ಕುಮಾರ್, ಕಾಪು ಶಾಸಕರಾದ ಲಾಲಾಜಿ ಆರ್. ಮೆಂಡನ್, ಮೂಡುಬಿದಿರೆ ಶಾಸಕರಾದ ಉಮಾನಾಥ ಕೋಟ್ಯಾನ್, ಮಂಗಳೂರು ನಗರ ಉತ್ತರ ಶಾಸಕರಾದ ಡಾ| ಭರತ್ ಶೆಟ್ಟಿ ವೈ., ಮಂಗಳೂರು ನಗರ ದಕ್ಷಿಣ ಶಾಸಕರಾದ ಡಿ. ವೇದವ್ಯಾಸ ಕಾಮತ್, ಬೆಳ್ತಂಗಡಿ ಶಾಸಕರಾದ ಹರೀಶ ಪೂಂಜಾ, ರಾಜ್ಯ ಹಿಂದುಳಿದ ವರ್ಗಗಳ ಆಯೋಗ ಅಧ್ಯಕ್ಷರಾದ ಕೆ. ಜಯಪ್ರಕಾಶ್ ಹೆಗ್ಡೆ, ಬೈಂದೂರು ಮಾಜಿ ಶಾಸಕರಾದ ಕೆ. ಗೋಪಾಲ ಪೂಜಾರಿ, ಕರ್ನಾಟಕ ಮೀನುಗಾರಿಕಾ ಅಭಿವೃದ್ಧಿ ನಿಗಮದ ಅಧ್ಯಕ್ಷರಾದ ನಿತಿನ್ ಕುಮಾರ್, ಕರ್ನಾಟಕ ರಾಜ್ಯ ಸಣ್ಣ ಕೈಗಾರಿಕಾ ಅಭಿವೃದ್ಧಿ ನಿಗಮದ ಉಪಾಧ್ಯಕ್ಷರಾದ ಎಸ್. ದತ್ತಾತ್ರೀ, ಕರ್ನಾಟಕ ಮೀನುಗಾರಿಕಾ ಅಭಿವೃದ್ಧಿ ನಿಗಮದ ಎಂ.ಡಿ ಶ್ರೀ ಎಂ.ಎಲ್. ದೊಡ್ಮನಿ, ಬೈಂದೂರು ತಾಲೂಕು ಪಂಚಾಯತ್ ಅಧ್ಯಕ್ಷರಾದ ಮಹೇಂದ್ರ ಪೂಜಾರಿ, ಜಿಲ್ಲಾ ಪಂಚಾಯತ್ ಸದಸ್ಯರುಗಳಾದ ಶಂಕರ ಪೂಜಾರಿ, ಗೌರಿ ದೇವಾಡಿಗ, ದ.ಕ – ಉಡುಪಿ ಜಿಲ್ಲಾ ಸಹಕಾರ ಮೀನು ಮಾರಾಟ ಫೆಡರೇಶನ್ ಅಧ್ಯಕ್ಷರಾದ ಯಶಪಾಲ್ ಎ. ಸುವರ್ಣ, ಜಿಲ್ಲಾ ಪಂಚಾಯತ್ ಮಾಜಿ ಅಧ್ಯಕ್ಷರಾದ ಎಸ್. ರಾಜು ಪೂಜಾರಿ, ತಾಲೂಕು ಪಂಚಾಯತ್ ಸದಸ್ಯರಾದ ವಿಜಯ ಶೆಟ್ಟಿ, ಬಿಜೆಪಿ ಬೈಂದೂರು ಮಂಡಲದ ಅಧ್ಯಕ್ಷರಾದ ದೀಪಕ್ ಕುಮಾರ್ ಶೆಟ್ಟಿ, ರಾಜ್ಯ ಯೋಜನಾ ಆಯೋಗದ ಅಧಿಕಾರೇತರ ಸದಸ್ಯರಾದ ಪ್ರೀಯದರ್ಶಿನಿ ಬೆಸ್ಕೂರು, ಜ್ಯೋತಿಷಿಗಳಾದ ರಘುನಾಥ ಜೋಯಿಸ್, ಉದ್ಯಮಿಗಳಾದ ಕೆ. ವೆಂಕಟೇಶ್ ಕಿಣಿ, ಗೋಳಿಹೊಳೆ ಗ್ರಾಮ ಪಂಚಾಯತ್ ಪಿಡಿಓ ದಿವಾಕರ ಶಾನುಭಾಗ್, ಉದ್ಯಮಿ ಗುರುರಾಜ ಪಂಜು ಪೂಜಾರಿ ಇವರುಗಳು ಉಪಸ್ಥಿತರಿರಲಿದ್ದಾರೆ ಎಂದು ಮತ್ಸ್ಯ ಬಂಧನ ಪ್ರೈವೆಟ್ ಲಿಮಿಟೆಡ್ ಆಡಳಿತ ನಿರ್ದೇಶಕ ಗೋವಿಂದ ಬಾಬು ಪೂಜಾರಿ ಹಾಗೂ ನಿರ್ದೇಶಕ ಅರುಣ್ ಧನಪಾಲ್ ಪತ್ರಿಕಾ ಹೇಳಿಕೆಯಲ್ಲಿ ತಿಳಿಸಿದ್ದಾರೆ. ಕುಂದಾಪ್ರ ಡಾಟ್ ಕಾಂ ಸುದ್ದಿ.

ಫಿಶ್ ವೇಪರ್ಸ್ ಹಾಗೂ ಮೀನಿನ ಖಾದ್ಯಗಳು:
ದೇಶದಲ್ಲಿಯೇ ಪ್ರಥಮ ಭಾರಿಗೆ ಮಾರುಕಟ್ಟೆಗೆ ಬರಲಿರುವ ಮತ್ಸ್ಯ ಬಂಧನ ಸಂಸ್ಥೆಯ ಫಿಶ್ ವೇಪರ್ಸ್ ಸೇರಿದಂತೆ ಮೀನಿನ ಮೌಲ್ಯವರ್ಧಕ ಖಾದ್ಯಗಳ ಉತ್ಪಾದನಾ ಘಟಕ ನಿರ್ಮಾಣಕ್ಕೆ ಎಲ್ಲೂರಿನಲ್ಲಿ ಶಂಕುಸ್ಥಾಪನೆ ನೆರವೇರಲಿದೆ.

ಮಾರುಕಟ್ಟೆಯಲ್ಲಿ ದೊರೆಯುವ ಹೆಚ್ಚಿನ ಚಿಪ್ಸ್ಗಳು ಜಂಕ್ ಪುಡ್ ಆಗಿರುತ್ತದೆ. ಅದು ಆರೋಗ್ಯಕ್ಕೂ ಅಷ್ಟೊಂದು ಹಿತಕರವಲ್ಲ. ಫಿಶ್ ವೆಪರ್ಸ್ ತಯಾರಿಸುವಾಗ ಯಾವುದೇ ರಾಸಾಯನಿಕ ಹಾಗೂ ಸಂರಕ್ಷಕಗಳನ್ನು ಬಳಸುವುದಿಲ್ಲ. ಇದರಲ್ಲಿ ಉತ್ತಮ ಪ್ರೋಟಿನ್ ಇರುವುದಲ್ಲದೇ ಒಮೆಗಾ 3 ಕೊಬ್ಬಿನ ಅಂಶ, ವಿಟಮಿನ್ ಡಿ, ಬಿ2, ಬಿ12 ಹಾಗೂ ಕ್ಯಾಲ್ಸಿಯಂ ಇರುತ್ತದೆ. ತಾಜಾ ಮೀನುಗಳಿಂದ ತಯಾರಿಸಿದ ಫಿಶ್ ವೇಪರ್ಸ್ ಮಕ್ಕಳ ಆರೋಗ್ಯಕ್ಕೂ ಹಾನಿಕಾರಕವಲ್ಲ ಎಂಬ ಅಭಿಪ್ರಾಯ ತಜ್ಞರಿಂದ ಬಂದಿದೆ.

Call us

ಜೂನ್ 18ರಂದು ಮುಖ್ಯಮಂತ್ರಿಗಳಾದ ಶ್ರೀ ಬಿ. ಎಸ್. ಯಡಿಯೂರಪ್ಪನವರು ಮತ್ಸ್ಯ ಬಂಧನ ಸಂಸ್ಥೆಯ ಮೌಲ್ಯವರ್ಧಿತ ಮೀನಿನ ಖಾದ್ಯಗಳನ್ನು ಲೋಕಾರ್ಪಣೆಗೊಳಿಸಿದ್ದರು. ಪ್ರಸ್ತುತ ಬೆಂಗಳೂರಿನಲ್ಲಿ ಉತ್ಪಾದನಾ ಘಟಕ ಕಾರ್ಯಾಚರಿಸುತ್ತಿದ್ದು, ಬೈಂದೂರು ತಾಲೂಕಿನ ಎಲ್ಲೂರಿನ ವಿಶಾಲ ಜಾಗದಲ್ಲಿ ಪೂರ್ಣ ಪ್ರಮಾಣದಲ್ಲಿ ಉತ್ಪಾದನಾ ಘಟಕ ಆರಂಭಗೊಳ್ಳಲಿದೆ. ರಾಜ್ಯ ಮೀನುಗಾರಿಕಾ ಅಭಿವೃದ್ಧಿ ನಿಗಮವು ಮೀನಿನ ಖಾದ್ಯಗಳಗೆ ಮಾರುಕಟ್ಟೆ ಒದಗಿಸುವ ಒಪ್ಪಂದ ಮಾಡಿಕೊಂಡಿದೆ.

ಎಲ್ಲೂರಿನಲ್ಲಿ ಫಿಶ್ ವೇಪರ್ಸ್ ಉತ್ಪಾದನಾ ಘಟಕ ಆರಂಭಿಸುವುದರಿಂದ ಅಭಿವೃದ್ಧಿಯ ಹಂತದಲ್ಲಿರುವ ಬೈಂದೂರು ತಾಲೂಕಿನ ಆರ್ಥಿಕ ಪುನಶ್ಚೇತನಕ್ಕೆ ದಾರಿಯಾಗುವುದಲ್ಲದೇ ನೂರಾರು ಉದ್ಯೋಗಾವಕಾಶಗಳು ಸೃಷ್ಟಿಯಾಗಲಿದೆ. ಉತ್ಪಾದನಾ ಘಟಕವು ಅತ್ಯಾಧುನಿಕ ತಂತ್ರಜ್ಞಾನವನ್ನು ಒಳಗೊಳ್ಳಲಿದ್ದು ಪರಿಸರ ಸ್ನೇಹಿಯಾಗಿ ಇರಲಿದೆ. ಎಲ್ಲೂರಿನಲ್ಲಿ ಶಂಕು ಸ್ಥಾಪನೆಯಾದ 6 ತಿಂಗಳುಗಳ ಒಳಗಾಗಿ ಉತ್ಪಾದನಾ ಘಟಕ ಆರಂಭಿಸಲು ಯೋಜನೆ ಹಾಕಿಕೊಳ್ಳಲಾಗಿದೆ ಎಂದು ಅವರು ಪತ್ರಿಕಾ ಹೇಳಿಕೆಯಲ್ಲಿ ತಿಳಿಸಿದ್ದಾರೆ.

ಮತ್ಸ್ಯ ಬಂಧನ ಸಂಸ್ಥೆಯ ಮೀನಿನ ಮೌಲ್ಯವರ್ಧಿತ ಖಾದ್ಯಗಳ ಉತ್ಪಾದನಾ ಘಟಕವನ್ನು ಗ್ರಾಮೀಣ ಪ್ರದೇಶದಲ್ಲಿ ಆರಂಭಿಸುವುದರಿಂದ ಅಭಿವೃದ್ಧಿಯ ಹಂತದಲ್ಲಿರುವ ಬೈಂದೂರು ತಾಲೂಕಿನ ಆರ್ಥಿಕ ಪುನಶ್ಚೇತನಕ್ಕೆ ದಾರಿಯಾಗುವುದಲ್ಲದೇ ನೂರಾರು ಉದ್ಯೋಗಾವಕಾಶಗಳು ಸೃಷ್ಟಿಯಾಗಲಿದೆ. ವಿಶಾಲ ಪ್ರದೇಶದಲ್ಲಿ ಆರಂಭಗೊಳ್ಳಲಿರುವ ಉತ್ಪಾದನಾ ಘಟಕವು ಅತ್ಯಾಧುನಿಕ ತಂತ್ರಜ್ಞಾನವನ್ನು ಒಳಗೊಳ್ಳಲಿದ್ದು ಪರಿಸರ ಸ್ನೇಹಿಯಾಗಿಯೂ ಕಾರ್ಯನಿರ್ವಹಿಸಲಿದೆ – ಗೋವಿಂದ ಬಾಬು ಪೂಜಾರಿ ಎಂಡಿ, ಮತ್ಸ ಬಂಧನ ಪ್ರೈ.ಲಿ.

Leave a Reply

Your email address will not be published. Required fields are marked *

twelve − ten =