ಕುಂದಾಪ್ರ ಡಾಟ್ ಕಾಂ ಸುದ್ದಿ.
ಗಂಗೊಳ್ಳಿ: ಕೊರೊನಾ ತಡೆಗಟ್ಟಲು ಹಗಲಿರುಳು ಸೆಣಸುತ್ತಿರುವ ಪೊಲೀಸ್ ಸಿಬ್ಬಂದಿಗಳ ನೆರವಿಗೆ ಧಾವಿಸಿರುವ ಗಂಗೊಳ್ಳಿಯ ಶ್ರೀ ಸರಸ್ವತಿ ವಿದ್ಯಾನಿಧಿ ಮತ್ತು ಉದ್ಯಮಿ ಜಿ. ಭಾಸ್ಕರ ವಿಠಲ ಶೆಣೈ ಕುಟುಂಬಸ್ಥರು ಲಾಕ್ ಡೌನ್ ಅವಧಿಯಲ್ಲಿ ಗಂಗೊಳ್ಳಿ ಪೊಲೀಸ್ ಠಾಣೆಯ ಸಿಬ್ಬಂದಿಗಳಿಗೆ ಮಧ್ಯಾಹ್ನದ ದಾಸೋಹ ವ್ಯವಸ್ಥೆಗೆ ಮುಂದಾಗಿದ್ದಾರೆ.
ಗಂಗೊಳ್ಳಿಯ ಶ್ರೀ ಸರಸ್ವತಿ ವಿದ್ಯಾನಿಧಿ ಮತ್ತು ಉದ್ಯಮಿ ಜಿ. ಭಾಸ್ಕರ ವಿಠಲ ಶೆಣೈ ಕುಟುಂಬಸ್ಥರು, ಕಳೆದ ಸುಮಾರು ಒಂದು ವಾರದಿಂದ ಪ್ರತಿನಿತ್ಯ ಗಂಗೊಳ್ಳಿ ಪೊಲೀಸ್ ಠಾಣೆಯ ಸಿಬ್ಬಂದಿಗಳಿಗೆ ಉತ್ತಮ ಗುಣಮಟ್ಟದ ಮಧ್ಯಾಹ್ನದ ಊಟವನ್ನು ಉಣಬಡಿಸುವ ಮೂಲಕ ಮಾನವೀಯತೆ ಮೆರೆದಿದ್ದಾರೆ.
- ಪೊಲೀಸರಿಗೆ ಲಾಕ್ ಡೌನ್ ಸಮಯದಲ್ಲಿ ಎಲ್ಲೂ ಸರಿಯಾದ ಆಹಾರ ದೊರೆಯುತ್ತಿಲ್ಲ. ಹೀಗಾಗಿ ಲಾಕ್ ಡೌನ್ ಸಮಯದಲ್ಲಿ ಪ್ರತಿದಿನ ಮಧ್ಯಾಹ್ನ ಉತ್ತಮ ಗುಣಮಟ್ಟದ ಊಟದ ವ್ಯವಸ್ಥೆಯನ್ನು ಗಂಗೊಳ್ಳಿಯ ಶ್ರೀ ಸರಸ್ವತಿ ವಿದ್ಯಾನಿಧಿ ಮತ್ತು ಉದ್ಯಮಿ ಜಿ. ಭಾಸ್ಕರ ವಿಠಲ ಶೆಣೈ ಕುಟುಂಬಸ್ಥರ ಮೂಲಕ ಮಾಡಲಾಗುತ್ತಿದೆ ಎಂದು ಸರಸ್ವತಿ ವಿದ್ಯಾನಿಧಿ ಅಧ್ಯಕ್ಷ ಜಿ. ವೆಂಕಟೇಶ ಶೆಣೈ ತಿಳಿಸಿದ್ದಾರೆ.