ಗೋ ಹಂತಕರನ್ನು ಗಡಿಪಾರು ಮಾಡಿ – ಗೋಹತ್ಯೆ ಖಂಡಿಸಿ ಗಂಗೊಳ್ಳಿಯಲ್ಲಿ ನಡೆದ ಪ್ರತಿಭಟನೆಯಲ್ಲಿ ಆಗ್ರಹ

Call us

Call us

ಕುಂದಾಪ್ರ ಡಾಟ್ ಕಾಂ ಸುದ್ದಿ.
ಗಂಗೊಳ್ಳಿ,ಅ.1:
ಗಂಗೊಳ್ಳಿ ಹಿಂದೂ ಜಾಗರಣ ವೇದಿಕೆ ನೇತೃತ್ವದಲ್ಲಿ ಗೋ ಹತ್ಯೆ ವಿರೋಧಿಸಿ ಮತ್ತು ಗೋ ಹಂತಕರನ್ನು ಗಡಿಪಾರು ಮಾಡಲು ಆಗ್ರಹಿಸಿ ಶುಕ್ರವಾರ ಗಂಗೊಳ್ಳಿಯಲ್ಲಿ ಬೃಹತ್ ಪ್ರತಿಭಟನಾ ಮೆರವಣಿಗೆಯ ನಡೆಯಿತು. ಗಂಗೊಳ್ಳಿ ಫೋರ್ಟ್ ಆಫೀಸ್ ಬಳಿಯಿಂದ ಆರಂಭವಾಗಿ ರಾಮಮಂದಿರದ ತನಕ ಕಾಲ್ನಡಿಗೆ ಮೆರವಣಿಗೆ ಸಾಗಿತು. ಬಳಿಕ ಗಂಗೊಳ್ಳಿ ವಿರೇಶ್ವರ ದೇವಸ್ಥಾನದಲ್ಲಿ ಪ್ರತಿಭಟನಾ ಸಭೆ ನಡೆಯಿತು.

Call us

Call us

ಸಭೆಯನ್ನುದ್ದೇಶಿಸಿ ಹಿಂದೂ ಜಾಗರಣ ವೇದಿಕೆಯ ಕರ್ನಾಟಕ ದಕ್ಷಿಣ ಪ್ರಾಂತ್ಯದ ಪ್ರಧಾನ ಕಾರ್ಯದರ್ಶಿ ಕೆ.ಟಿ. ಉಲ್ಲಾಸ್ ಮಾತನಾಡಿ ಗಂಗೊಳ್ಳಿಯಲ್ಲಿ ಗೋವುಗಳನ್ನು ಅಮಾನುಷವಾಗಿ ಕೊಯ್ದು ಅದನ್ನು ವಿಡಿಯೋ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಹರಿಬಿಟ್ಟಿರುವ ವ್ಯಕ್ತಿಗಳು ಸಮಾಜದಲ್ಲಿ ಶಾಂತಿ ಕದಡುವ ಅಶಾಂತಿಯ ವಾತಾವರಣ ಉಂಟು ಮಾಡುವ ಷಡ್ಯಂತ್ರ ರೂಪಿಸಿದ್ದಾರೆ. ಹಿಂದೂಗಳ ರಕ್ತ ಕುದಿಯುವಂತೆ ಮಾಡಿದ ಈ ವಿಡಿಯೋ ವೈರಲ್ ಆಗುತ್ತಿದ್ದಂತೆ ಇಲಾಖೆ ಸುಮೊಟೊ ಪ್ರಕರಣ ದಾಖಲು ಮಾಡಿ ಗೂಂಡಾ ಕಾಯ್ದೆ ಅಡಿಯಲ್ಲಿ ಗಡಿಪಾರು ಮಾಡಬೇಕಾಗಿತ್ತು. ಆದರೆ ಇಲಾಖೆ ಯಾವುದೇ ಕ್ರಮ ಕೈಗೊಂಡಿಲ್ಲ. ಕೂಡಲೇ ಇಂತವರನ್ನು ಗಡಿಪಾರು ಮಾಡುವಂತೆ ಆಗ್ರಹಿಸಿದರು. ಹಿಂದೂ ಸಮಾಜ ಇವತ್ತು ಬಲಿಷ್ಠವಾಗಿದೆ. ಇಂತಹ ಕಿಡಿಗೇಡಿ ಕೃತ್ಯಗಳ ವಿರುದ್ದ ಒಟ್ಟಾಗಿ ಹೋರಾಡಲು ಸಜ್ಜಾಗಿದೆ. ಹಿಂದೂ ಸಮಾಜಕ್ಕೆ ಆಗುತ್ತಿರುವ ಅನ್ಯಾಯದ ವಿರುದ್ಧ ಹೋರಾಟ ಅನಿವಾರ್ಯವಾಗಿದೆ ಎಂದರು.

Call us

Call us

ಹಿಂದೂ ಧರ್ಮದಲ್ಲಿ ಗೋವನ್ನು ಧಾರ್ಮಿಕವಾಗಿ ಪೂಜನೀಯ ಭಾವನೆಯಿಂದ ನೋಡಲಾಗುತ್ತಿದೆ. ಹಿಂದೂ ಪರಂಪರೆಯಲ್ಲಿ ಪೂಜ್ಯತೆಯನ್ನು ಪಡೆದುಕೊಂಡ ಶ್ರೇಷ್ಠ ಪ್ರಾಣಿ. ಮಾನವೀಯ ಭಾವನೆ ಗೋವಿಗಿದೆ. ಅದು ಗೋವು ಸಾಕಿದವರಿಗೆ ತಿಳಿದಿದೆ. ಗೋವಿಗೆ ತಾಯಿಯ ಸ್ಥಾನ ನೀಡಲಾಗುತ್ತಿದೆ. ಗೋವನ್ನು ಕೊಲ್ಲುವುದೆಂದರೆ ತಾಯಿಯನ್ನು ಕೊಂದಂತೆ. ಆದರೆ ಇಂದು ಹಿಂದೂಗಳ ಮನೆಗೆ ತೆರಳಿ ತಲವಾರು ತೋರಿಸಿ ದನಗಳನ್ನು ಕದಿಯುವ ಪ್ರವೃತ್ತಿ ಹೆಚ್ಚುತ್ತಿದೆ. ಇಂಥಹ ಸಮಾಜಘಾತುಕ ಶಕ್ತಿಗಳ ಮೇಲೆ ಕ್ರಮ ಜರುಗಿಸುವ ಕೆಲಸ ಆಗದಿರುವುದರಿಂದಲೇ ಇಂಥಹ ಅಮಾನುಷ ಕೃತ್ಯಗಳು ಹೆಚ್ಚಲು ಕಾರಣವಾಗಿದೆ ಎಂದರು.

ಈ ಸಂದರ್ಭದಲ್ಲಿ ಹಿಂದೂ ಜಾಗರಣ ವೇದಿಕೆ ಮಂಗಳೂರು ವಿಭಾಗದ ಪ್ರ. ಕಾರ್ಯದರ್ಶಿ ಪ್ರಕಾಶ್ ಕುಕ್ಕೆಹಳ್ಳಿ, ಹಿಂ. ಜಾ. ವೇ. ಉಡುಪಿ ಜಿಲ್ಲಾಧ್ಯಕ್ಷ ಪ್ರಶಾಂತ್ ನಾಯಕ್, ಗಂಗೊಳ್ಳಿ ಹಿಂ. ಜಾ. ವೇ. ಅಧ್ಯಕ್ಷ ಗೋವಿಂದ ಶೇರುಗಾರ್, ಮುಖಂಡರಾದ ವಾಸುದೇವ ಗಂಗೊಳ್ಳಿ, ನವೀನ್ ಗಂಗೊಳ್ಳಿ, ಯಶವಂತ್ ಗಂಗೊಳ್ಳಿ, ಮಹೇಶ್ ಬೈಂದೂರು ಉಪಸ್ಥಿತರಿದ್ದರು. ಬಳಿಕ ಗೋ ಹಂತಕರ ಬಂಧನ ಮತ್ತು ಗಡಿಪಾರಿಗೆ ಒತ್ತಾಯಿಸಿ ತಹಶಿಲ್ದಾರ್ ಕಿರಣ್ ಗೌರಯ್ಯ ಅವರಿಗೆ ಮನವಿ ಸಲ್ಲಿಸಲಾಯಿತು.

ಪ್ರತಿಭಟನೆ ಇದ್ದುದರಿಂದ ಗಂಗೊಳ್ಳಿ ಪೇಟೆ ಸ್ವಯಂಪ್ರೇರಿತವಾಗಿ ಬಂದ್ ಮಾಡಲಾಗಿತ್ತು. ಮೆರವಣಿಗೆಯಲ್ಲಿ ಸುಮಾರು 5 ಸಾವಿರ ಜನ ಭಾಗವಹಿಸಿದ್ದರು. ಪ್ರತಿಭಟನೆ ವೇಳೆ ಗೋಹತ್ಯೆಗೆ ಆರೋಪಿಗಳನ್ನು ಬಿಡುಗಡೆ ಮಾಡಿರುವುದಕ್ಕೆ ಆಕ್ರೋಶ ವ್ಯಕ್ತವಾಯಿತು. ಗೋಹತ್ಯೆ ಆರೋಪಿಗಳನ್ನು ಗಡಿಪಾರಿಗೆ ಒತ್ತಾಯಿಸಲಾಯಿತು. ಗೋಕಳ್ಳರ ವಿರುದ್ಧ ಆಕ್ರೋಶದ ಘೋಷಣೆಗಳು ಕೇಳಿಬಂದವು. ಪ್ರತಿಭಟನೆಯಲ್ಲಿ ಮಹಿಳೆಯರು ಹೆಚ್ಚು ಪಾಲ್ಗೊಂಡಿದ್ದರು.

Leave a Reply

Your email address will not be published. Required fields are marked *

five × 2 =