ಕುಂದಾಪುರ: 94ಸಿ ಫಲಾನುಭವಿಗಳಿಗೆ ಹಕ್ಕುಪತ್ರ ನೀಡಲು ವಿಳಂಬ: ಕೋಟ ಶ್ರೀನಿವಾಸ್ ಪೂಜಾರಿ ನೇತೃತ್ವದಲ್ಲಿ ಬೃಹತ್ ಪ್ರತಿಭಟನೆ

Call us

ಕುಂದಾಪ್ರ ಡಾಟ್ ಕಾಂ ಸುದ್ದಿ.
ಕುಂದಾಪುರ: ಸ್ವತಃ ಜಾಗವಿಲ್ಲದೇ ಸರಕಾರಿ ಜಾಗದಲ್ಲಿ ಹತ್ತಾರು ವರ್ಷಗಳಿಂದ ನೆಲೆ ಕಂಡಿರುವರಿಗೆ ಹಕ್ಕಪತ್ರ ನೀಡಲು ಜಿಲ್ಲಾಡಳಿತ ಹಾಗೂ ತಾಲೂಕು ಕಂದಾಯ ಇಲಾಖೆ ವಿಳಂಬ ನೀತಿ ಅನುಸರಿಸುತ್ತಿದ್ದು, ಅರ್ಹ ಫಲಾನುಭಾವಿಗಳು ಮೂಲಭೂತ ಸೌಕರ್ಯಗಳಿಲ್ಲದೇ ಪರದಾಡುವಂತಾಗಿದೆ. ಇಲಾಖಾಧಿಕಾರಿಗಳ ಬೇಜವಾಬ್ದಾರಿಯಿಂದ ಬಡವರು ಸಂಕಷ್ಟದಲ್ಲಿ ಸಿಲುಕುವಂತಾಗಿದೆ ಎಂದು ವಿಧಾನ ಪರಿಷತ್ ಸದಸ್ಯ ಕೋಟ ಶ್ರೀನಿವಾಸ ಪೂಜಾರಿ ವಿಷಾದ ವ್ಯಕ್ತಪಡಿಸಿದರು

Call us

Call us

ಕುಂದಾಪುರ ತಾಲ್ಲೂಕಿನಾದ್ಯಾಂತ ೯೪ಸಿ ಕಾಯಿದೆಯನ್ವಯ ಅರ್ಜಿ ಸಲ್ಲಿಸಿದ ಅರ್ಜಿದಾರರಿಗೆ ಹಕ್ಕು ಪತ್ರ ನೀಡುವಲ್ಲಿ ಕಂದಾಯ ಇಲಾಖೆಯ ವಿಳಂಬ ಧೋರಣೆ ಖಂಡಿಸಿ ಶುಕ್ರವಾರ ಇಲ್ಲಿನ ಮಿನಿ ವಿಧಾನಸೌಧದ ಎದುರು ನಡೆದ ಬೃಹತ್ ಪ್ರತಿಭಟನಾ ಧರಣಿಯಲ್ಲಿ ಅವರು ಮಾತನಾಡಿದರು. ಜಿಲ್ಲಾಡಳಿತ ಹಾಗೂ ತಾಲೂಕು ಕಂದಾಯ ಇಲಾಖೆಯ ವಿಳಂಬ ನೀತಿಯಿಂದಾಗಿ ತಾಲೂಕಿನ ಸಾವಿರಾರು ಬಡ ಜನರು ಮೂಲಸೌಕರ್ಯದಿಂದ ವಂಚಿತರಾಗಿ ತೊಂದರೆ ಅನುಭವಿಸುತ್ತಿದ್ದಾರೆ. ಶಾಸನ ಸಭೆಯಲ್ಲಿ ಭರವಸೆ ಹಾಗೂ ಕಂದಾಯ ಮಂತ್ರಿಗಳ ಆದೇಶವನ್ನೂ ಲೆಕ್ಕಿಸದೇ ಇಲಾಖೆ ಅಧಿಕಾರಿಗಳು ವಿಳಂಬ ನೀತಿ ಅನುಸರಿಸುತ್ತಿರುವುದು ಸರಿಯಲ್ಲ. ಬಡವರ ಕೆಲಸದ ಬಗ್ಗೆ ನಿರ್ಲಕ್ಯ ತೋರುವ ಇಂತಹ ಅಧಿಕಾರಿಗಳನ್ನು ಕೂಡಲೇ ಜಾಗ ಖಾಲಿ ಮಾಡಿಸಿ ಎಂದು ಆಕ್ರೋಶ ವ್ಯಕ್ತ ಪಡಿಸಿದ ಅವರು ಮುಂದಿನ 15 ದಿನಗಳ ಒಳಗೆ ಈ ಸಮಸ್ಯೆಗೆ ಪರಿಹಾರ ಕಾಣದೆ ಇದ್ದಲ್ಲಿ ಉಗ್ರ ಸ್ಪರೂಪದ ಪ್ರತಿಭಟನೆ ನಡೆಸಬೇಕಾಗುತ್ತದೆ ಎಂದು ಎಚ್ಚರಿಸಿದರು. ಕುಂದಾಪ್ರ ಡಾಟ್ ಕಾಂ ಸುದ್ದಿ.

ರಾಜ್ಯ ಬಿಜೆಪಿ ಕಾರ‍್ಯಕಾರಿಣಿ ಸಮಿತಿಯ ಬಿ.ಎಂ ಸುಕುಮಾರ ಶೆಟ್ಟಿ, ಕಲಾಕ್ಷೇತ್ರ ಕುಂದಾಪುರದ ಅಧ್ಯಕ್ಷ ಬಿ.ಕಿಶೋರ ಕುಮಾರ, ಕುಂದಾಪುರ ತಾಲ್ಲೂಕು ಪಂಚಾಯಿತಿ ಅಧ್ಯಕ್ಷೆ ಜಯಶ್ರೀ ಮೊಗವೀರ, ಪುರಸಭೆಯ ಉಪಾಧ್ಯಕ್ಷ ರಾಜೇಶ್ ಕಾವೇರಿ, ಜಿಲ್ಲಾ ಬಿಜೆಪಿ ಮುಖಂಡ ಬೆಳ್ವೆ ವಸಂತ ಶೆಟ್ಟಿ, ತಾ.ಪಂ ಸದಸ್ಯ ಪುಷ್ಪರಾಜ್ ಶೆಟ್ಟಿ, ಮಾಜಿ ಜಿ.ಪಂ ಸದಸ್ಯ ಗಣಪತಿ ಟಿ ಶ್ರೀಯಾನ್, ಮಾಜಿ ತಾ.ಪಂ ಸದಸ್ಯ ಹದ್ದೂರು ರಾಜೀವ್ ಶೆಟ್ಟಿ, ಹಾಲಾಡಿ ಗ್ರಾಮ ಪಂಚಾಯಿತಿ ಅಧ್ಯಕ್ಷ ಸರ್ವೋತ್ತಮ ಹೆಗ್ಡೆ, ರೈತ ಮೋರ್ಚಾ ಮುಖಂಡ ದೀಪಕ್‌ಕುಮಾರ ಶೆಟ್ಟಿ, ಉದಯ್ ಪೂಜಾರಿ ಬೆಳ್ವೆ, ಬಿಜೆಪಿ ಕ್ಷೇತ್ರ ಸಮಿತಿ ಅಧ್ಯಕ್ಷ ಸುರೇಶ್ ಶೆಟ್ಟಿ ಕಾಡೂರು, ಬೈಂದೂರು ಮಹಿಳಾ ಮೋರ್ಚಾ ಅಧ್ಯಕ್ಷೆ ಪ್ರೀಯದರ್ಶಿನಿ ಬೆಸ್ಕೂರ್ ಮಾತನಾಡಿದರು.  ಪುರಸಭಾ ಅಧ್ಯಕ್ಷೆ ವಸಂತಿ ಸಾರಂಗ, ತಾ.ಪಂ ಉಪಾಧ್ಯಕ್ಷ ಪ್ರವೀಣ್‌ಕುಮಾರ ಶೆಟ್ಟಿ ಕಡ್ಕೆ, ಜಿಲ್ಲಾ ಬಿಜೆಪಿ ಮುಖಂಡ ಕಿರಣ್‌ಕುಮಾರ ಕೊಡ್ಗಿ, ಜಿಲ್ಲಾ ಪಂಚಾಯಿತಿ ಸದಸ್ಯರುಗಳಾದ ಶಂಕರ ಪೂಜಾರಿ, ಬಾಬು ಶೆಟ್ಟಿ ತಗ್ಗರ್ಸೆ, ಶ್ರೀಲತಾ ಸುರೇಶ್ ಶೆಟ್ಟಿ, ಚಿಟ್ಟಿ ರಾಜಗೋಪಾಲ ಹೆಗ್ಡೆ, ಶರಶ್ಚಂದ್ರ ಶೆಟ್ಟಿ ಸಲ್ವಾಡಿ ಇದ್ದರು. ಕುಂದಾಪ್ರ ಡಾಟ್ ಕಾಂ ಸುದ್ದಿ.

Call us

Call us

ಕುಂದಾಪುರ ತಹಸೀಲ್ದಾರ್ ಜಿ.ಎಂ ಬೋರ್ಕರ್ ಧರಣಿ ನಿರತರಿಂದ ಅಹವಾಲು ಸ್ವೀಕರಿಸಿ, ಹಿರಿಯ ಅಧಿಕಾರಿಗಳೊಂದಿಗೆ ಈ ಕುರಿತು ಚರ್ಚೆ ನಡೆಸುವ ಕುರಿತು ಭರವಸೆ ವ್ಯಕ್ತ ಪಡಿಸಿದರು. ಕಂದಾಯ ಉಪವಿಭಾಗಾಧಿಕಾರಿ ಶಿಲ್ಪಾ ನಾಗ್ ಧರಣಿ ಸ್ಥಳಕ್ಕೆ ಬಂದು ಪ್ರತಿಭಟನಾಕಾರರೊಂದಿಗೆ ಮಾತುಕತೆ ನಡೆಸಿದರು. ಕುಂದಾಪುರ ಬಿಜೆಪಿ ಕ್ಷೇತ್ರ ಸಮಿತಿಯ ಪ್ರಧಾನ ಕಾರ್ಯದರ್ಶಿ ಶಂಕರ ಅಂಕದಕಟ್ಟೆ ವಂದೆ ಮಾತರಂ ಗೀತೆ ಹಾಡಿದರು, ಬೈಂದೂರು ಬಿಜೆಪಿ ಕ್ಷೇತ್ರ ಸಮಿತಿಯ ಅಧ್ಯಕ್ಷ ಸದಾನಂದ ಬೈಂದೂರು ಸ್ವಾಗತಿಸಿದರು, ಮಾಲಿನಿ ಸತೀಶ್ ನಿರೂಪಿಸಿದರು. ಕುಂದಾಪ್ರ ಡಾಟ್ ಕಾಂ.

Govt officials delaying to issue charter to 94c Beneficiaries. protest held uner the leadership of ex minister kota shrinivas poojary

news-shrinivas-poojary-protest news-shrinivas-poojary-protest7 news-shrinivas-poojary-protest6 news-shrinivas-poojary-protest5 news-shrinivas-poojary-protest3 news-shrinivas-poojary-protest2

Leave a Reply

Your email address will not be published. Required fields are marked *

two × 1 =