ಗುರುಕುಲ ಪಬ್ಲಿಕ್ ಸ್ಕೂಲ್‌ಗೆ 10ನೇ ತರಗತಿಯಲ್ಲಿ ಶೇ.100 ಫಲಿತಾಂಶ

Call us

Call us

ಸಿಬಿಎಸ್‌ಇ ಪಠ್ಯಕ್ರಮದ ಗುರುಕುಲದಲ್ಲಿ ಸತತ 6ನೇ ಬಾರಿ ಶತಕ ಸಾಧನೆ

Call us

Call us

Call us

ಕುಂದಾಪ್ರ ಡಾಟ್ ಕಾಂ ಸುದ್ದಿ
ಕುಂದಾಪುರ: ಪ್ರತಿಷ್ಠಿತ ಕೋಟೆಶ್ವರ ವಕ್ವಾಡಿಯಲ್ಲಿನ ಗುರುಕುಲ ಪಬ್ಲಿಕ್ ಶಾಲೆಯ 10ನೇ ತರಗತಿ ಸಿ.ಬಿ.ಎಸ್.ಇ ಪಠ್ಯಕ್ರಮದ ವಿದ್ಯಾರ್ಥಿಗಳು ಸತತ 6ನೇ ಬಾರಿಗೆ ಶೇ.100 ಫಲಿತಾಂಶವನ್ನು ದಾಖಲಿಸಿದ್ದಾರೆ. ಪ್ರಸಕ್ತ ಸಾಲಿನಲ್ಲಿ 64ವಿದ್ಯಾರ್ಥಿಗಳು ಪರೀಕ್ಷೆಯಲ್ಲಿ ಹಾಜರಾಗಿದ್ದು 13 ವಿದ್ಯಾರ್ಥಿಗಳು 10 ಸಿ.ಜಿ.ಪಿ.ಎ (ಅತ್ಯುನ್ನತ ಶ್ರೇಣಿ), 17 ವಿದ್ಯಾರ್ಥಿಗಳು 9 ಸಿ.ಜಿ.ಪಿ.ಎ ಮೇಲ್ಪಟ್ಟು ವಿಶಿಷ್ಠ ಶ್ರೇಣಿಯಲ್ಲಿ, ಹಾಗೂ ಹಾಜರಾದ ವಿದ್ಯಾರ್ಥಿಗಳು ಪ್ರಥಮ ಶ್ರೇಣಿಯಲ್ಲಿ ಉತ್ತೀರ್ಣರಾಗಿ ಶಾಲೆಗೆ ಕೀರ್ತಿಯನ್ನು ತಂದಿರುತ್ತಾರೆ.

ದಶಮಾನೋತ್ಸವದ ಹೊಸ್ತಿಲಲ್ಲಿರುವ ಬಾಂಡ್ಯ ಎಜುಕೇಶನಲ್ ಟ್ರಸ್ಟ್ ಪ್ರವರ್ತಿತ ಗುರುಕುಲ ಶಾಲೆಯಲ್ಲಿ ಈ ಭಾರಿ ದಾಖಲೆಯ ಫಲಿತಾಂಶವನ್ನು ನೀಡಿದ ಎಲ್ಲಾ ವಿದ್ಯಾರ್ಥಿಗಳಿಗೆ, ಶ್ರಮಿಸಿದ ಪ್ರಾಂಶುಪಾಲರು ಹಾಗೂ ಶಿಕ್ಷಕ ವೃಂದದವರಿಗೆ, ಸಂಸ್ಥೆಯ ಸಂಸ್ಥಾಪಕರಾದ ಬಿ. ಅಪ್ಪಣ್ಣ ಹೆಗ್ಡೆ, ಸಂಸ್ಥೆಯ ಜಂಟಿ ಕಾರ್ಯನಿರ್ವಾಹಕರುಗಳಾದ ಸುಭಾಶ್ಚಂದ್ರ ಶೆಟ್ಟಿ ಮತ್ತು ಅನುಪಮ ಎಸ್. ಶೆಟ್ಟಿಯವರು ಅಭಿನಂದಿಸಿದ್ದಾರೆ. /ಕುಂದಾಪ್ರ ಡಾಟ್ ಕಾಂ ಸುದ್ದಿ/

Leave a Reply

Your email address will not be published. Required fields are marked *

4 + three =