ಹಾರ್ದಳ್ಳಿ ಮಂಡಳ್ಳಿ ಗ್ರಾ. ಪಂ: ಅಧ್ಯಕ್ಷರಾಗಿ ಜಗನ್ನಾಥ ಶೆಟ್ಟಿ, ಉಪಾಧ್ಯಕ್ಷರಾಗಿ ರೇಖಾ ಮೊಗವೀರ ಆಯ್ಕೆ

ಕುಂದಾಪ್ರ ಡಾಟ್ ಕಾಂ ಸುದ್ದಿ.
ಕುಂದಾಪುರ: ಹಾರ್ದಳ್ಳಿ ಮಂಡಳ್ಳಿ ಗ್ರಾಮ ಪಂಚಾಯತಿಯ ಅಧ್ಯಕ್ಷ ಹಾಗೂ ಉಪಾಧ್ಯಕ್ಷ ಸ್ಥಾನಗಳ ಆಯ್ಕೆ ಪ್ರಕ್ರಿಯೆ ನಡೆಯಿತು. ಅಧ್ಯಕ್ಷರಾಗಿ ಜಗನ್ನಾಥ ಶೆಟ್ಟಿ, ಉಪಾಧ್ಯಕ್ಷರಾಗಿ ರೇಖಾ ಮೊಗವೀರ ಅವಿರೋಧವಾಗಿ ಆಯ್ಕೆಯಾದರು.

ಒಟ್ಟು 13 ಸದಸ್ಯ ಬಲ ಹೊಂದಿರುವ ಹಾರ್ದಳ್ಳಿ ಗ್ರಾಮ ಪಂಚಾಯಿತಿಯಲ್ಲಿ ಕಾಂಗ್ರೇಸ್8 , ಬಿಜೆಪಿ 5 ಬೆಂಬಲಿತ ಸದಸ್ಯರು ಆಯ್ಕೆಯಾಗಿದ್ದರು.

ಮೀಸಲಾತಿ ಪ್ರಕಾರ ಅಧ್ಯಕ್ಷ ಸ್ಥಾನಕ್ಕೆ ಸಾಮಾನ್ಯ, ಉಪಾಧ್ಯಕ್ಷ ಸ್ಥಾನಕ್ಕೆ ಸಾಮಾನ್ಯ ಮಹಿಳೆ ಮೀಸಲು ನಿಗದಿಯಾಗಿತ್ತು.

Leave a Reply

Your email address will not be published. Required fields are marked *

eighteen − fifteen =