ಕುಂದಾಪ್ರ ಡಾಟ್ ಕಾಂ ಸುದ್ದಿ.
ಉಡುಪಿ,ಆ.1: ಭಾರತೀಯ ಹವಾಮಾನ ಇಲಾಖೆ, ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರ, ಬೆಂಗಳೂರು ಇವರ ಮುನ್ಸೂಚನೆಯಂತೆ ರಾಜ್ಯದ ಕರಾವಳಿ ಭಾಗದಲ್ಲಿ ಹೆಚ್ಚಿನ ಮಳೆಯಾಗುವ ಸಾಧ್ಯತೆಯಿದೆಯೆಂದು ಎಚ್ಚರಿಸಿ, ಜಿಲ್ಲೆಯಲ್ಲಿ ಆರೆಂಜ್ ಅಲರ್ಟ್ ಘೋಷಣೆ ಮಾಡಿದೆ.
ಜುಲೈ 31ರ ಮಧ್ಯಾಹ್ನದ ವರದಿಯಂತೆ ಉಡುಪಿ ಜಿಲ್ಲೆಗೆ ಮುಂದಿನ 5 ದಿನಗಳ ಸುಮಾರು ಕಾಲ 115mm ಕ್ಕಿಂತ ಹೆಚ್ಚು ಮಳೆಯಾಗುವ ಸಾಧ್ಯತೆಯಿರುತ್ತದೆ. ಈ ಹಿನ್ನಲೆಯಲ್ಲಿ ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರ ಮುಂಜಾಗ್ರತಾ ಕ್ರಮವಾಗಿ ಸಾರ್ವಜನಿಕರಿಗೆ ಸೂಚನೆಗಳನ್ನು ನೀಡಿದೆ.
ಜಿಲ್ಲಾ/ತಾಲೂಕು ಮಟ್ಟದ ಅಧಿಕಾರಿಗಳು ಕಡ್ಡಾಯವಾಗಿ ಕೇಂದ್ರ ಸ್ನಾನದಲ್ಲಿ ಇರತಕ್ಕದ್ದು. ಸಾರ್ವಜನಿಕರು ನದಿ/ಸಮುದ್ರಕ್ಕೆ ಇಳಿಯದಂತೆ ಕಟ್ಟೆಚ್ಚರ ವಹಿಸುವುದು. ಇಂತಹ ಸಂದರ್ಭದಲ್ಲಿ ಮಕ್ಕಳು/ಸಾರ್ವಜನಿಕರು ಅಪಾಯಕಾರಿ ವಿದ್ಯುತ್ ಕಂಬ/ಕಟ್ಟಡ/ಮರಗಳ ಕೆಳಗೆ ನಿಲ್ಲದ ಸುರಕ್ಷಿತ ಸಾಲಗಳನ್ನು ತಲುಪುವದು.
- ತುರ್ತು ಸೇವೆಗೆ: 1077
- ದೂರವಾಣಿ: 0820-2574802