ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಉದ್ಯಮಿ ವಕ್ವಾಡಿ ಪ್ರವೀಣ್ ಕುಮಾರ್ ಶೆಟ್ಟಿ ಅವರಿಗೆ ಹುಟ್ಟೂರ ಸನ್ಮಾನ

Call us

Call us

ಅತಿಥಿ ಗಣ್ಯರ ಉಪಸ್ಥಿತಿಯಲ್ಲಿ ಅದ್ದೂರಿ ಕಾರ್ಯಕ್ರಮ, ಹಲವರಿಗೆ ನೆರವು, ವೈದ್ಯಕೀಯ ಶಿಬಿರ

Call us

Call us

ಕುಂದಾಪ್ರ ಡಾಟ್ ಕಾಂ ಸುದ್ದಿ.
ಕುಂದಾಪುರ:
ವಕ್ವಾಡಿ ಫಾರ್ಚೂನ್ ವಿಲೇಜ್ ಹೊಟೇಲ್ ಬಳಿ ವಕ್ವಾಡಿ ಪ್ರವೀಣ್ ಶೆಟ್ಟಿ ಹುಟ್ಟೂರ ಸನ್ಮಾನ ಸಮಿತಿ ವತಿಯಿಂದ ಕನ್ನಡ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಉದ್ಯಮಿ ವಕ್ವಾಡಿ ಪ್ರವೀಣ್ ಕುಮಾರ್ ಶೆಟ್ಟಿಯವರ ಹುಟ್ಟೂರಿನ ಅಭಿನಂದನಾ ಸಮಾರಂಭ ಹಮ್ಮಿಕೊಳ್ಳಲಾಗಿತ್ತು.

Call us

Call us

ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದ ಶ್ರೀ ಸುಬ್ರಮಣ್ಯ ಮಠಾಧೀಶರಾದ ಶ್ರೀ ವಿದ್ಯಾಪ್ರಸನ್ನ ತೀರ್ಥ ಸ್ವಾಮೀಜಿ ಅವರು ಆಶೀರ್ವಚನ ನೀಡಿ, ಹುಟ್ಟೂರು ಜೀವನದ ನೆಮ್ಮದಿಯ ತಾಣ. ಬದುಕಿನಲ್ಲಿ ತಾನು ಪಡೆದ ಸೌಲಭ್ಯಗಳನ್ನು ಊರಿಗೂ ವಿಸ್ತರಿಸುವ ಸಾಮಾಜಿಕ ಚಿಂತನೆಯುಳ್ಳವರು ಅಸಾಧಾರಣ ಸಾಧನೆ ಮಾಡಿದಾಗ ಸನ್ಮಾನ ಮಾಡಬೇಕಿರುವುದು ಸಮಾಜದ ಕರ್ತವ್ಯ. ಸಾವಿರಾರು ಮಂದಿ ಬದುಕನ್ನು ಏಳಿಗೆಯತ್ತ ಕೊಂಡೊಯ್ದ ಪ್ರವೀಣ ಶೆಟ್ಟಿಯವರ ಕೀರ್ತಿ ಜಗದುದ್ದಗಲಕ್ಕೂ ಹೊರಹೊಮ್ಮಿದೆ ಎಂದರು.

ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವ ವಿ. ಸುನೀಲ್ ಕುಮಾರ್ ಅವರು ಪ್ರಸಾದ್ ನೇತ್ರಾಲಯಕ್ಕೆ ಪ್ರವೀಣ್ ಶೆಟ್ಟಿಯವರು ಕೊಡುಗೆಯಾಗಿ ನೀಡಿದ ಅಂಬುಲೆನ್ಸ್ ವಾಹನದ ಕಿಲಿಕೈ ಹಸ್ತಾಂತರಿಸಿದರು. ಪ್ರಾಥಮಿಕ ಮತ್ತು ಫ್ರೌಢ ಶಿಕ್ಷಣ ಸಚಿವ ಬಿ. ಸಿ. ನಾಗೇಶ್, ಸ್ಮರಣ ಸಂಚಿಕೆ ಬಿಡುಗಡೆಗೊಳಿಸಿದರು.

ಕಾರ್ಯಕ್ರಮದಲ್ಲಿ 17 ಮಂದಿ ಅಶಕ್ತರಿಗೆ ವೈದ್ಯಕೀಯ ನೆರವಿನ ಸಹಾಯಧನ ವಿತರಿಸಲಾಯಿತು. ವಕ್ವಾಡಿ ಶಾಲೆಯ 25 ವಿದ್ಯಾರ್ಥಿಗಳಿಗೆ ಸಮವಸ್ತ್ರ ವಿತರಿಸಲಾಯಿತು.

ಹುಟ್ಟೂರ ಸನ್ಮಾನ ಸ್ವೀಕರಿಸಿ ಮಾತನಾಡಿದ ವಕ್ವಾಡಿ ಪ್ರವೀಣ್ ಕುಮಾರ್ ಶೆಟ್ಟಿ, ರಾಜ್ಯೋತ್ಸವ ಪ್ರಶಸ್ತಿ ಸಿಕ್ಕ ಬಳಿಕ ಪುನೀತ್ ಇಲ್ಲದ ನೋವು ಕಾಡಿತ್ತು. ಎಲ್ಲಡೆ ಸನ್ಮಾನಗಳನ್ನು ಪಡೆದರೂ ಕೂಡ ಹುಟ್ಟೂರಿನಲ್ಲಿ ನಡೆದ ಸನ್ಮಾನ ಕೊನೆ ಉಸಿರು ಇರುವ ತನಕ ಮರೆಯೋದಿಲ್ಲ ಎಂದರು.

ವಕ್ವಾಡಿ ಪ್ರವೀಣ್ ಶೆಟ್ಟಿ ಹುಟ್ಟೂರ ಸನ್ಮಾನ ಸಮಿತಿ ಅಧ್ಯಕ್ಷ ಬಸ್ರೂರು ಅಪ್ಪಣ್ಣ ಹೆಗ್ಡೆ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಮಾಜಿ ಸಚಿವ ಸಿ.ಎಸ್. ಪುಟ್ಟರಾಜು, ವಿರೋಧ ಪಕ್ಷದ ಉಪನಾಯಕ ಯು.ಟಿ. ಖಾದರ್, ಉಡುಪಿ ಶಾಸಕ ಕೆ. ರಘುಪತಿ ಭಟ್, ಬೈಂದೂರು ಶಾಸಕ ಬಿ. ಎಂ. ಸುಕುಮಾರ ಶೆಟ್ಟಿ, ಮಂಗಳೂರು ಉತ್ತರ ಶಾಸಕ ಡಾ. ವೈ ಭರತ್ ಶೆಟ್ಟಿ, ವಿಧಾನ ಪರಿಷತ್ ಸದಸ್ಯ ಮಂಜುನಾಥ ಭಂಡಾರಿ, ಕರಾವಳಿ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಮಟ್ಟಾರು ರತ್ನಾಕರ ಹೆಗ್ಡೆ, ಹಿರಿಯ ಸಂಪಾದಕ ವಿಶ್ವೇಶ್ವರ ಭಟ್, ಉದ್ಯಮಿ ಕೆ. ನಾಗರಾಜ್, ಯುಎಇ ಕನ್ನಡಿಗಾಸ್ ಅಧ್ಯಕ್ಷ ಸರ್ವೋತ್ತಮ ಶೆಟ್ಟಿ, ಮಾಜಿ ವಿಧಾನ ಪರಿಷತ್ ಸದಸ್ಯ ಎಂ. ಶ್ರೀನಿವಾಸ್, ಪಟ್ಲ ಫೌಂಡೇಶನ್ ಸ್ಥಾಪಕಾಧ್ಯಕ್ಷ ಪಟ್ಲ ಸತೀಶ್ ಶೆಟ್ಟಿ, ಉಡುಪಿ ಪ್ರಸಾದ್ ನೇತ್ರಾಲಯದ ವೈದ್ಯಕೀಯ ನಿರ್ದೇಶಕ ಡಾ. ಕೃಷ್ಣಪ್ರಸಾದ್, ಹುಟ್ಟೂರ ಸನ್ಮಾನ ಸಮಿತಿಯ ಗೌರವಾಧ್ಯಕ್ಷ ಆನಂದ್ ಸಿ. ಕುಂದರ್, ವಕ್ವಾಡಿ ಪ್ರವೀಣ್ ಶೆಟ್ಟಿಯವರ ಧರ್ಮಪತ್ನಿ ರೂಪಾಲಿ ಪ್ರವೀಣ್ ಕುಮಾರ್ ಶೆಟ್ಟಿ, ಜಿ.ಪಿ. ಶೆಟ್ಟಿ, ಖ್ಯಾತ ಸಂಗೀತ ನಿರ್ದೇಶಕ ಗುರುಕಿರಣ್, ನಟ-ನಿರ್ದೇಶಕ ರಿಷಬ್ ಶೆಟ್ಟಿ, ನಟಿ ಹರಿಪ್ರಿಯಾ ಮೊದಲಾದವರಿದ್ದರು.

ಮಂಗಳೂರು ಶ್ರೀ ರಾಮಕೃಷ್ಣ ಡಿಗ್ರಿ ಕಾಲೇಜು ಪ್ರಾಂಶುಪಾಲ ಎಂ. ಬಾಲಕೃಷ್ಣ ಶೆಟ್ಟಿ ಅಭಿನಂದನಾ ಭಾಷಣ ಮಾಡಿದರು. ವಕ್ವಾಡಿ ಪ್ರವೀಣ್ ಶೆಟ್ಟಿ ಹುಟ್ಟೂರ ಸನ್ಮಾನ ಸಮಿತಿ ಕಾರ್ಯದರ್ಶಿ ವೇಣುಗೋಪಾಲ ಹೆಗ್ಡೆ ಸ್ವಾಗತಿಸಿದರು. ದಿನಕರ್ ಆರ್. ಶೆಟ್ಟಿ ಪ್ರಸ್ತಾವಿಸಿದರು. ಪತ್ರಕರ್ತ ಕೆ.ಸಿ ರಾಜೇಶ್, ಮಹೇಶ್ ವಕ್ವಾಡಿ ನಿರೂಪಿಸಿದರು.

ಉಚಿತ ವೈದ್ಯಕೀಯ ಶಿಬಿರ:
ವಕ್ವಾಡಿ ಪ್ರವೀಣ್ ಕುಮಾರ್ ಶೆಟ್ಟಿಯವರ ಸಂಪೂರ್ಣ ಖರ್ಚು ವೆಚ್ಚದಲ್ಲಿ ಭಾನುವಾರ ವಕ್ವಾಡಿಯ ಫಾರ್ಚೂನ್ ವಿಲೇಜ್ ಹೋಟೆಲ್ ಬಳಿ ಉಚಿತ ಕಣ್ಣಿನ ತಪಾಸಣೆ ಹಾಗೂ ಆರೋಗ್ಯ ತಪಾಸಣೆ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು.

ಉದ್ಯಮಿ ಗುರ್ಮೆ ಸುರೇಶ್ ಶೆಟ್ಟಿ ಕಾರ್ಯಕ್ರಮ ಉದ್ಘಾಟಿಸಿದರು. ಕಾಳಾವರ ಗ್ರಾಮ ಪಂಚಾಯತ್ ಅಧ್ಯಕ್ಷೆ ಆಶಾಲತಾ ಶೆಟ್ಟಿ ಅಧ್ಯಕ್ಷತೆ ವಹಿಸಿದ್ದರು. ಕಾರ್ಯಕ್ರಮದಲ್ಲಿ ವಿಶ್ವ ಬಂಟರ ಸಂಘಗಳ ಒಕ್ಕೂಟದ ಅಧ್ಯಕ್ಷ ಐಕಳ ಹರೀಶ್ ಶೆಟ್ಟಿ, ಉಡುಪಿ ಪ್ರಸಾದ ನೇತ್ರಾಲಯದ ವೈದ್ಯಕೀಯ ನಿರ್ದೇಶಕ ಡಾ. ಕೃಷ್ಣಪ್ರಸಾದ್, ವಕ್ವಾಡಿ ಪ್ರವೀಣ್ ಕುಮಾರ್ ಶೆಟ್ಟಿ ಹುಟ್ಟೂರ ಸನ್ಮಾನ ಸಮಿತಿ ಅಧ್ಯಕ್ಷ ಬಸ್ರೂರು ಅಪ್ಪಣ್ಣ ಹೆಗ್ಡೆ, ಗೌರವಾಧ್ಯಕ್ಷ ಆನಂದ್ ಸಿ. ಕುಂದರ್, ಆರ್ಥಿಕ ಸಮಿತಿಯ ಉದಯಕುಮಾರ್ ಶೆಟ್ಟಿ ಬೈಲೂರು, ಜಾಗತಿಕ ಬಂಟರ ಸಂಘದ ಕಾರ್ಯದರ್ಶಿ ಜಯಕರ ಶೆಟ್ಟಿ ಇಂದ್ರಾಳಿ, ಕುಂದಾಪುರ ರೂರಲ್ ಆಯುರ್ವೇದಿಕ್ ಮೆಡಿಕಲ್ ಕಾಲೇಜು ಪ್ರಾಂಶುಪಾಲ ಡಾ. ಪ್ರಸನ್ನ ಐತಾಳ್, ಉದ್ಯಮಿ ವಕ್ವಾಡಿ ಪ್ರವೀಣ್ ಕುಮಾರ್ ಶೆಟ್ಟಿ, ತಂದೆ ನಾರಾಯಣ ಶೆಟ್ಟಿ, ಸರೋಜಿನಿ ಶೆಟ್ಟಿ ಮೊದಲಾದವರು ಉಪಸ್ಥಿತರಿದ್ದರು.

ಉಡುಪಿ ಪ್ರಸಾದ ನೇತ್ರಾಲಯದ ತಜ್ಞ ವೈದ್ಯರಿಂದ ಉಚಿತ ಕಣ್ಣಿನ ತಪಾಸಣೆ ಹಾಗೂ ಕುಂದಾಪುರ ರೂರಲ್ ಆಯುರ್ವೇದಿಕ್ ಮೆಡಿಕಲ್ ಕಾಲೇಜು ಆಸ್ಪತ್ರೆಯ ತಜ್ಞ ವೈದ್ಯರಿಂದ ಆರೋಗ್ಯ ತಪಾಸಣೆ ನಡೆಯಿತು. ಇದೇ ಸಂದರ್ಭದಲ್ಲಿ ಜಾಗತಿಕ ಬಂಟರ ಸಂಘದಿಂದ ಪ್ರವೀಣ್ ಕುಮಾರ್ ಶೆಟ್ಟಿ, ರೂಪಾಲಿ ಪ್ರವೀಣ್ ಕುಮಾರ್ ಶೆಟ್ಟಿ ದಂಪತಿಯನ್ನು ಸನ್ಮಾನಿಸಲಾಯಿತು.

ಬಾಲಚಂದ್ರ ಶೆಟ್ಟಿ ಪ್ರಾರ್ಥಿಸಿದರು. ಸತೀಶ್ ಪೂಜಾರಿ ವಕ್ವಾಡಿ ಸ್ವಾಗತಿಸಿದರು. ಬಾಲಕೃಷ್ಣ ಶೆಟ್ಟಿ ಪ್ರಾಸ್ತಾವಿಕ ಮಾತನಾಡಿದರು. ಅಕ್ಷತಾ ಗಿರೀಶ್ ಕಾರ್ಯಕ್ರಮ ನಿರೂಪಿಸಿ, ಸದಾನಂದ ಶೆಟ್ಟಿ ವಂದಿಸಿದರು.

Leave a Reply

Your email address will not be published. Required fields are marked *

nineteen − 6 =