ಕುಂದಾಪ್ರ ಡಾಟ್ ಕಾಂ ಸುದ್ದಿ.
ಕುಂದಾಪುರ: ಕೊರೋನಾ ಹರಡುವಿಕೆ ನಿಯಂತ್ರಿಸುವಲ್ಲಿ ಜಿಲ್ಲಾಡಳಿತ, ಆರೋಗ್ಯ & ಪೊಲೀಸ್ ಇಲಾಖೆಯ ಕಾರ್ಯ ಶ್ಲಾಘನಾರ್ಹ. ಅವರ ಪರಿಶ್ರಮದಿಂದಾಗಿ ಉಡುಪಿ ಜಿಲ್ಲೆ ಕೊರೋನಾ ನಿಯಂತ್ರಣದಲ್ಲಿದ್ದು, ಇದು ಹಾಗೇಯೇ ಮುಂದುವರಿಯಲು ನಾಗರಿಕರು ಸಹಕರಿಸಬೇಕಿದೆ ಎಂದು ಮಾಜಿ ಶಾಸಕ ಕೆ. ಗೋಪಾಲ ಪೂಜಾರಿ ಹೇಳಿದರು.
ಅವರು ಕಟ್‌ಬೆಲ್ತೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿ, ಜಿಲ್ಲೆಯಲ್ಲಿ ಅಧಿಕಾರಿಗಳು ಕೈಗೊಂಡ ಕಟ್ಟುನಿಟ್ಟಿನ ಕ್ರಮದಿಂದಾಗಿ ಉಡುಪಿ ಗ್ರೀನ್‌ಝೋನ್‌ನಲ್ಲಿದೆ. ಉದ್ಯೋಗ ನಿಮಿತ್ತ ಬೇರೆ ಬೇರೆ ರಾಜ್ಯ ಹಾಗೂ ದೇಶಗಳಲ್ಲಿ ನೆಲೆಸಿರುವ ಯುವಕರು ಊರಿಗೆ ಬರಲು ಅವಕಾಶ ಮಾಡಿಕೊಡುವುದು ಸರಕಾರದ ಜವಾಬ್ದಾರಿಯಾಗಿದ್ದು, ಅವರಿಗೆ ಕ್ವಾರಂಟೈನ್ ಮಾಡುವ ಪ್ರದೇಶದಲ್ಲಿಯೂ ಎಲ್ಲಾ ಮೂಲಭೂತ ಸೌಕರ್ಯಗಳನ್ನು ಒದಗಿಸಲು ಅಗತ್ಯ ಕ್ರಮ ಕೈಗೊಳ್ಳಬೇಕು. ಹೊರ ರಾಜ್ಯ ಹಾಗೂ ದೇಶಗಳಿಂದ ಬರುವವರು ಕೂಡ ಮನೆಯ ಹಿರಿಯರು, ಮಕ್ಕಳ ಸುರಕ್ಷತೆಯ ದೃಷ್ಟಿಯಿಂದ ಕ್ವಾರಂಟೈನ್‌ಗೆ ಒಳಪಟ್ಟು ಆ ಬಳಿಕವಷ್ಟೇ ಮನೆಗಳಿಗೆ ತೆರಳುವುದು ಸೂಕ್ತ ಎಂದಿದ್ದಾರೆ. ಕುಂದಾಪ್ರ ಡಾಟ್ ಕಾಂ ಸುದ್ದಿ.
ದೇಶದಲ್ಲಿ ಉದ್ಯಮಗಳು ತೀವ್ರ ಸಂಕಷ್ಟದಲ್ಲಿದೆ. ರಾಜ್ಯದ ಹೋಟೆಲ್ ಉದ್ಯಮ ಸ್ಥಿತಿ ಸಂಪೂರ್ಣ ಹದಗೆಟ್ಟಿದೆ. ಹೋಟೆಲ್ ಮಾಲೀಕರು ಬಾಡಿಗೆ, ನೌಕರರ ಸಂಬಳ ಹಾಗೂ ಬ್ಯಾಂಕ್ ಸಾಲದ ಹೊರೆಗೆ ತತ್ತರಿಸಿ ಹೋಗುತ್ತಿದ್ದಾರೆ. ರಾಜ್ಯ ಸರಕಾರ ಹೋಟೆಲ್ ಮಾಲಿಕರು ಹಾಗೂ ಕಾರ್ಮಿಕರ ರಕ್ಷಣೆಗೆ ಬಾರದಿದ್ದರೆ, ಸಾವಿರಾರು ಕುಟುಂಬಗಳು ಸಂಕಷ್ಟ ಎದುರಿಸಬೇಕಾಗುತ್ತದೆ ಎಂದರು. ಮುಂದುವರಿದು ಮಾತನಾಡಿ ಉದ್ಯೋಗ, ವ್ಯವಹಾರವಿಲ್ಲದೇ ಜನರು ತೊಂದರೆ ಎದುರಿಸುತ್ತಿರುವ ಕಠಿಣ ಸಂದರ್ಭದಲ್ಲಿ ಸರಕಾರ ಪೆಟ್ರೋಲ್ ಡೀಸೆಲ್ ಬೆಲೆ, ದಿನಸಿ ವಸ್ತುಗಳ ಏರಿಕೆ ಮಾಡಿರುವುದು ಜನಸಾಮಾನ್ಯನ ಬದುಕು ಮತ್ತಷ್ಟು ದುಸ್ತರವಾಗುವಂತೆ ಮಾಡಿದೆ ಎಂದರು/ಕುಂದಾಪ್ರ ಡಾಟ್ ಕಾಂ ಸುದ್ದಿ/
ಇದನ್ನೂ ಓದಿ:
► ಹೊರ ದೇಶ ಮತ್ತು ರಾಜ್ಯದಿಂದ ಬರುವವರ ಕ್ವಾರಂಟೈನ್‌ಗೆ ಸಕಲ ವ್ಯವಸ್ಥೆ: ಜಿಲ್ಲಾಧಿಕಾರಿ ಜಿ. ಜಗದೀಶ್ – https://kundapraa.com/?p=37398 .
► ಮುಂಬೈಯಿಗರು ಉಡುಪಿ ಜಿಲ್ಲೆಗೆ ಆಗಮಿಸಲು ಅನುಮತಿ. ಸೇವಾಸಿಂಧು ಪಾಸ್, ಕ್ವಾರಂಟೈನ್ ಕಡ್ಡಾಯ – https://kundapraa.com/?p=37387 .
► ಅಂತರಾಜ್ಯ ಸಂಚಾರಕ್ಕೆ ಸೇವಾಸಿಂಧುವಿನಲ್ಲಿ ನೊಂದಣಿ ಅಗತ್ಯ – https://kundapraa.com/?p=37276 .
► ಭಟ್ಕಳದಲ್ಲಿ ಹೆಚ್ಚಿದ ಕೋರೋನಾ ಸೋಂಕು: ಜಿಲ್ಲೆಯ ಶಿರೂರು ಗಡಿಯಲ್ಲಿ ಕಟ್ಟೆಚ್ಚರ – https://kundapraa.com/?p=37403 .
► ಕುಂದಾಪುರ: ಹೊರ ರಾಜ್ಯ, ದೇಶದಿಂದ ಬರುವವರಿಗೆ ಕ್ವಾರಂಟೈನ್ ಮಾಡಲು ಸೂಕ್ತ ವ್ಯವಸ್ಥೆ – https://kundapraa.com/?p=37420 .