ಕುಂದಾಪ್ರ ಡಾಟ್ ಕಾಂ ಸುದ್ದಿ.
ಉಡುಪಿ: ಜಿಲ್ಲಾದ್ಯಂತ ರಾಷ್ಟ್ರೀಯ ಹೆದ್ದಾರಿ, ಪ್ರಮುಖ ರಸ್ತೆಯ ಬದಿಗಳಲ್ಲಿ ಹಾಗೂ ಸಾರ್ವಜನಿಕ ಸ್ಥಳಗಳಲ್ಲಿ ಸಾರ್ವಜನಿಕರು, ಕೆಲ ಹೋಟೆಲ್ ಹಾಗೂ ಅಂಗಡಿಯವರು ಕಸ/ಕಡ್ಡಿ ತ್ಯಾಜ್ಯ ಎಸೆಯುತ್ತಿದ್ದು ಇದನ್ನು ತಡೆಗಟ್ಟಲು ಹಾಗೂ ಕಸವನ್ನು ಎಸೆಯುವರ ವಿರುದ್ದ ಕ್ರಮವಹಿಸಲು ಸ್ಥಳೀಯ ಪ್ರಾಧಿಕಾರಕ್ಕೆ ಸೂಚಿಸಲಾಗಿದೆ.
ಪ್ರಸ್ತುತ ಕೊರೋನಾ ಸೋಂಕು ಜಿಲ್ಲೆಯಲ್ಲಿ ಹರಡುತ್ತಿದ್ದು ಈ ಸಮಯದಲ್ಲೂ ಸಾರ್ವಜನಿಕರು ವಾಹನದಲ್ಲಿ ಬಂದು ಕಸವನ್ನು ಸಾರ್ವಜನಿಕ ಸ್ಥಳಗಳಲ್ಲಿ, ರಸ್ತೆ ಬದಿಗಳಲ್ಲಿ ಎಸೆಯುತ್ತಿರುವುದು ಗಮನಕ್ಕೆ ಬಂದಿದ್ದು ತ್ಯಾಜ್ಯ ವಸ್ತುಗಳನ್ನು ಎಸೆಯುವ ವಾಹನಗಳನ್ನು ಮುಟ್ಟುಗೋಲು (ಸೀಜ್) ಹಾಕಿ ಆ ವಾಹನಗಳನ್ನು ಕೋವಿಡ್ ಸಾಂಕ್ರಾಮಿಕ ರೋಗ ಮುಗಿಯುವ ತನಕ ಕಸ ಸಾಗಾಣಿಕೆಗೆ ಬಳಸಲು ಕ್ರಮ ವಹಿಸಲಾಗುವುದು ಎಂದು ಉಡುಪಿ ಜಿಲ್ಲಾಧಿಕಾರಿ ಜಿ. ಜಗದೀಶ್ ತಿಳಿಸಿದ್ದಾರೆ.