ಕುಂದಾಪ್ರ ಡಾಟ್ ಕಾಂ ಸುದ್ದಿ.
ಕುಂದಾಪುರ/ಬೈಂದೂರು: ಕುಂದಾಪುರ ಹಾಗೂ ಬೈಂದೂರು ತಾಲೂಕು ಆಡಳಿತದ ವತಿಯಿಂದ ತಾಲೂಕು ಕೇಂದ್ರಗಳಲ್ಲಿ ಶನಿವಾರ ಸ್ವಾತಂತ್ರ್ಯೋತ್ಸವ ಆಚರಿಸಿಲಾಯಿತು.
ಕುಂದಾಪುರ ಗಾಂದಿ ಮೈದಾನದಲ್ಲಿ ಉಪವಿಭಾಗಾಧಿಕಾರಿ ರಾಜು ಅವರು ಧ್ವಜಾರೋಹಣ ನೆರವೇರಿಸಿ ಸ್ವಾತಂತ್ರ್ಯೋತ್ಸವದ ಸಂದೇಶವಿತ್ತರು. ಬಳಿಕ ನಡೆದ ಸಭಾ ಕಾರ್ಯಕ್ರಮದಲ್ಲಿ ಈ ಸಂದರ್ಭ ಕೊರೋನಾ ವಾರಿಯರ್ಸ್‌ಗಳನ್ನು ಸನ್ಮಾನಿಸಲಾಯಿತು. ತಾಲೂಕು ಪಂಚಾಯತ್ ಅಧ್ಯಕ್ಷೆ ಇಂದಿರಾ ಶೆಟ್ಟಿ, ಉಪಾಧ್ಯಕ್ಷ ಕಿಶನ್ ಹೆಗ್ಡೆ, ಎಎಸ್ಪಿ ಹರಿರಾಂ ಶಂಕರ್, ಕುಂದಾಪುರ ತಹಶೀಲ್ದಾರ್ ಕೆ.ಬಿ. ಆನಂದಪ್ಪ, ಪುರಸಭಾ ಮುಖ್ಯಾಧಿಕಾರಿ ಗೋಪಾಲಕೃಷ್ಣ ಶೆಟ್ಟಿ ಹಾಗೂ ಪುರಸಭಾ ಸದಸ್ಯರು ಇದ್ದರು. ಕುಂದಾಪುರ ಪೊಲೀಸ್ ಎಸ್ಪೈ ಹರೀಶ್ ಆರ್. ನಾಯ್ಕ್ ಅವರ ಮುಂದಾಳತ್ವದಲ್ಲಿ ಗೌರವ ವಂದನೆ ಸಲ್ಲಿಸಲಾಯಿತು. ಚಂದ್ರಶೇಖರ ಬೀಜಾಡಿ ಕಾರ್ಯಕ್ರಮ ನಿರೂಪಿಸಿದರು.
ಬೈಂದೂರು ಗಾಂಧಿ ಮೈದಾನದಲ್ಲಿ ಜರುಗಿದ ಸ್ವಾತಂತ್ರ್ಯ ದಿನಾಚರಣೆಯಲ್ಲಿ ಬೈಂದೂರು ತಹಶಿಲ್ದಾರ್ ಬಸಪ್ಪ ಪಿ. ಪೂಜಾರಿ ಧ್ವಜಾರೋಹಣ ನೆರವೇರಿಸಿದರು. ಬಳಿಕ ನಡೆದ ಸರಳ ಸಮಾರಂಭದಲ್ಲಿ ಬೈಂದೂರು ತಾಲೂಕು ಪಂಚಾಯತ್ ಅಧ್ಯಕ್ಷ ಮಹೇಂದ್ರ ಪೂಜಾರಿ ಅಧ್ಯಕ್ಷತೆ ವಹಿಸಿದ್ದರು. ಉಪಾಧ್ಯಕ್ಷೆ ಮಾಲಿನಿ ಕೆ., ಯಡ್ತರೆ ಗ್ರಾಮ ಪಂಚಾಯತ್ ಅಧ್ಯಕ್ಷೆ ಮೂಕಾಂಬು ದೇವಾಡಿಗ, ಬೈಂದೂರು ವೃತ್ತ ನಿರೀಕ್ಷಕ ಸುರೇಶ್ ನಾಯಕ್, ಜಿಲ್ಲಾ ಪಂಚಾಯತ್ ಸದಸ್ಯರಾದ ಬಾಬು ಶೆಟ್ಟಿ, ಗೌರಿ ದೇವಾಡಿಗ, ತಾಲೂಕು ಪಂಚಾಯತ್ ಸದಸ್ಯರುಗಳಾದ ಜಗದೀಶ್ ದೇವಾಡಿಗ ಮೊದಲಾದವರು ಇದ್ದರು.
ಬೈಂದೂರು ಪೊಲೀಸ್ ಎಸ್ಪೈ ಸಂಗೀತಾ ಅವರ ಮುಂದಾಳತ್ವದಲ್ಲಿ ಗೌರವ ವಂದನೆ ಸಲ್ಲಿಸಲಾಯಿತು. ಕೊರೋನಾ ವಾರಿಯರ್ಸ್‌ಗಳನ್ನು ಗೌರವಿಸಲಾಯಿತು. ಬೈಂದೂರು ಕ್ಷೇತ್ರ ಶಿಕ್ಷಣಾಧಿಕಾರಿ ಜ್ಯೋತಿ ಬಿ. ಸ್ವಾಗತಿಸಿ, ಸಮನ್ವಯಾಧಿಕಾರಿ ಅಬ್ದುಲ್ ರವೂಫ್ ವಂದಿಸಿದರು. ಚಂದ್ರಶೇಖರ ಶೆಟ್ಟಿ ಕಾರ್ಯಕ್ರಮ ನಿರೂಪಿಸಿದರು.