ಬೈಂದೂರು, ಕುಂದಾಪುರದ ವಿವಿಧೆಡೆ ಸ್ವಾತಂತ್ರ್ಯೋತ್ಸವ

ಕುಂದಾಪ್ರ ಡಾಟ್ ಕಾಂ ಸುದ್ದಿ
ಕುಂದಾಪುರ ಹಾಗೂ ಬೈಂದೂರು ತಾಲೂಕಿನ ವಿವಿಧೆಡೆಗಳಲ್ಲಿ ೭೨ನೇ ಸ್ವಾತಂತ್ರ್ಯ ದಿನಾಚರಣೆಯನ್ನು ಸಂಭ್ರಮದಿಂದ ಆಚರಿಸಲಾಯಿತು.

ಕುಂದಾಪುರದ ಗಾಂಧಿಮೈದಾನದಲ್ಲಿ ಜರುಗಿದ ತಾಲೂಕು ಮಟ್ಟದ ಸ್ವಾತಂತ್ರ್ಯ ದಿನಾಚರಣೆಯಲ್ಲಿ ಉಪವಿಭಾಗಾಧಿಕಾರಿ ಭೂಬಾಲನ್ ಧ್ವಜಾರೋಹಣಗೈದರು. ಕೋಟ ರೋಟರಿ ಸಿಟಿ ಸಂಸ್ಥೆಯಿಂದ ಜರುಗಿದ ಸ್ವಾತಂತ್ರ್ಯ ದಿನಾಚರಣೆಯಲ್ಲಿ ಪ್ರತಿಪಕ್ಷ ನಾಯಕ ಕೋಟ ಶ್ರೀನಿವಾಸ ಪೂಜಾರಿ ಧ್ವಜಾರೋಹಣಗೈದರು. ಬೈಂದೂರು ಶಾಸಕರ ಕಛೇರಿ ಹಾಗೂ ವಂಡ್ಸೆ ಬಿಜೆಪಿ ಕಛೇರಿಯಲ್ಲಿ ಜರುಗಿದ ಸ್ವಾತಂತ್ರ್ಯ ದಿನಾಚರಣೆಯಲ್ಲಿ ಬೈಂದೂರು ಶಾಸಕ ಬಿ. ಎಂ. ಸುಕುಮಾರ ಶೆಟ್ಟಿ ಅವರು ಧ್ವಜಾರೋಹಣಗೈದರು. ಬೈಂದೂರು ಬ್ಲಾಕ್ ಕಾಂಗ್ರೆಸ್ ಕಛೇರಿಯಲ್ಲಿ ಜರುಗಿದ ಸ್ವಾತಂತ್ರ್ಯ ದಿನಾಚರಣೆಯಲ್ಲಿ ಮಾಜಿ ಶಾಸಕ ಕೆ. ಗೋಪಾಲ ಪೂಜಾರಿ ಅವರು ಧ್ವಜಾರೋಹಣ ನೆರವೇರಿಸಿದರು.

ತಾಲೂಕಿನ ವಿವಿಧ ಶಾಲಾ ಕಾಲೇಜುಗಳು ಹಾಗೂ ಸರಕಾರಿ ಕಛೇರಿಗಳಲ್ಲಿ, ಆಟೋ, ಟೆಂಪೋ ನಿಲ್ದಾಣಗಳಲ್ಲಿ ಸ್ವಾತಂತ್ರ್ಯ ದಿನಾಚರಣೆಯನ್ನು ಆಚರಿಸಿ ಸಿಹಿ ವಿತರಿಸಲಾಯಿತು. ಎಲ್ಲೆಡೆಯೂ ಗಣ್ಯರಿಂದ ರಾಷ್ಟ್ರಭಕ್ತಿಯನ್ನು ಪ್ರೇರೇಪಿಸುವ ಮಾತುಗಳು ಕೇಳಿಬಂದವು.

 

Leave a Reply

Your email address will not be published. Required fields are marked *

2 × five =