ಬೈಂದೂರು: ಅಂತರ್ ಕಾಲೇಜು ಮಹಿಳೆಯರ ತ್ರೋಬಾಲ್ ಪಂದ್ಯಾಟ ಉದ್ಘಾಟನೆ

Call us

Call us

ಕುಂದಾಪ್ರ ಡಾಟ್ ಕಾಂ ಸುದ್ದಿ.
ಬೈಂದೂರು,ಮಾ.2:
ಮಂಗಳೂರು ವಿಶ್ವವಿದ್ಯಾನಿಲಯ ಹಾಗೂ ಸರಕಾರಿ ಪ್ರಥಮ ದರ್ಜೆ ಕಾಲೇಜು ಬಂದೂರು ನೇತೃತ್ವದಲ್ಲಿ ಆಯೋಜಿಸಿದ ಉಡುಪಿ ವಲಯ ಮಟ್ಟದ ಅಂತರ್ ಕಾಲೇಜು ಮಹಿಳೆಯರ ತ್ರೋಬಾಲ್ ಪಂದ್ಯಾಟ ಬುಧವಾರ ಕಾಲೇಜು ಕ್ರೀಡಾಂಗಣ ನಡೆಯಿತು.

Call us

Call us

ಬೈಂದೂರು ಶಾಸಕರಾದ ಬಿ. ಎಮ್. ಸುಕುಮಾರ ಶೆಟ್ಟಿ ಪಂದ್ಯಾಟವನ್ನು ಉದ್ಘಾಟಿಸಿ ಮಾತನಾಡಿ, ಕ್ರೀಡೆಯಲ್ಲಿ ಸೋಲು ಗೆಲುವು ಮುಖ್ಯವಲ್ಲ, ಕ್ರೀಡಾ ಸ್ಪೂರ್ತಿಯಲ್ಲಿ ಭಾಗವಹಿಸುವುದು ಮುಖ್ಯ. ಕ್ರೀಡಾ ಕ್ಷೇತ್ರದಲ್ಲಿ ವಿಫುಲ ಅವಕಾಶಗಳಿದ್ದು, ವಿದ್ಯಾರ್ಥಿ ದೆಸೆಯಲ್ಲಿ ಅವುಗಳನ್ನು ಸದ್ಭಳಕೆ ಮಾಡಿಕೊಂಡಾಗ ಯಶಸ್ಸು ಸಾಧಿಸಲು ಸಾಧ್ಯವೆಂದರು.

Call us

Call us

ಕಾಲೇಜಿನ ಪ್ರಾಂಶುಪಾಲರಾದ ಡಾ. ರಘು ನಾಯ್ಕ ಅಧ್ಯಕ್ಷತೆ ವಹಿಸಿದ್ದರು. ಬೈಂದೂರು ತಾ. ಪಂ ಮಾಜಿ ಉಪಾಧ್ಯಕ್ಷೆ ಮಾಲಿನಿ ಕೆ, ಮಂಗಳೂರು ವಿ.ವಿ ಕಾಲೇಜುಗಳ ದೈಹಿಕ ಶಿಕ್ಷಣ ನಿರ್ದೇಶಕರ ಸಂಘದ ಜೆಮ್ಸ್ ಒಲಿಪೆಯರ್, ಯುವ ಸಬಲೀಕರಣ ಕ್ರೀಡಾ ಇಲಾಖೆ ಉಡುಪಿ ಸಹಾಯಕ ನಿರ್ದೇಶಕ ಡಾ. ರೋಶನ್ ಕುಮಾರ್ ಶೆಟ್ಟಿ, ವಿಶ್ವ ವಿದ್ಯಾನಿಲಯದ ಪಂದ್ಯಾಟ ವೀಕ್ಷಕಿ ಜಯಶ್ರೀ ನಾಯ್ಕ, ಕಾಲೇಜಿನ ಹಳೆ ವಿದ್ಯಾರ್ಥಿ ಸಂಘದ ಅಧ್ಯಕ್ಷ ಮುತ್ತಯ್ಯ ಪೂಜಾರಿ, ವಿದ್ಯಾರ್ಥಿ ಪ್ರತಿನಿಧಿ ಹರ್ಷ ಉಪಸ್ಥಿತರಿದ್ದರು.

ಈ ಸಂದರ್ಭದಲ್ಲಿ ಮೂಡಬಿದಿರೆಯಲ್ಲಿ ನಡೆದ ಅಖಿಲ ಭಾರತೀಯ ದಕ್ಷಿಣ ವಲಯ ಕರಾಟೆ ಪಂದ್ಯಾಟದಲ್ಲಿ ಕುಮ್ಟಿ ಹಾಗೂ ಕಾಟ ಸ್ಪರ್ಧೆಯಲ್ಲಿ ಬೆಳ್ಳಿ ಹಾಗೂ ಕಂಚಿನ ಪದಕ ಪಡೆದ ಧನಂಜಯ್ ರವರನ್ನು ಕಾಲೇಜಿನ ವತಿಯಿಂದ ಸಮ್ಮಾನಿಸಲಾಯಿತು.

ಕಾಲೇಜು ಅಭಿವೃದ್ದಿ ಸಮಿತಿ ಅಧ್ಯಕ್ಷ ದೀಪಕ್ ಕುಮಾರ್ ಶೆಟ್ಟಿ ಪ್ರಾಸ್ತಾವಿಕ ಮಾತುಗಳನ್ನಾಡಿದರು. ಮೋಹನ್ ಕುಮಾರ್ ಸ್ವಾಗತಿಸಿದರು. ಉಪನ್ಯಾಸಕ ಪಾಂಡುರಂಗ ಮೊಗೇರ್ ಕಾರ್ಯಕ್ರಮ ನಿರ್ವಹಿಸಿದರು. ಉಪನ್ಯಾಸಕಿ ಮೀನಾಕ್ಷಿ ವಂದಿಸಿದರು.

Leave a Reply

Your email address will not be published. Required fields are marked *

thirteen + twelve =