ಉಡುಪಿ: ನೂತನ ಎಸ್ಪಿಯಾಗಿ ನಿಶಾ ಜೇಮ್ಸ್ ಅಧಿಕಾರ ಸ್ವೀಕಾರ

ಕುಂದಾಪ್ರ ಡಾಟ್ ಕಾಂ ಸುದ್ದಿ
ಕುಂದಾಪುರ: ಉಡುಪಿ ಜಿಲ್ಲೆಯ ನೂತನ ಪೊಲೀಸ್ ಅಧೀಕ್ಷಕರಾಗಿ ಐಪಿಎಸ್ ಅಧಿಕಾರಿ ನಿಶಾ ಜೇಮ್ಸ್ ಅವರು ನಿರ್ಗಮನ ಎಸ್‌ಪಿ ಲಕ್ಷಣ ನಿಂಬರ್ಗಿ ಅವರಿಂದ ಅಧಿಕಾರ ಸ್ವೀಕರಿಸಿದರು.

ನಿಶಾ ಜೇಮ್ಸ್ ೨೦೧೨ರ ಬ್ಯಾಚ್‌ನ ಐಪಿಎಸ್ ಅಧಿಕಾರಿಯಾಗಿದ್ದು ಈ ತನಕ ಬೆಂಗಳೂರಿನಲ್ಲಿ ಕರ್ನಾಟಕ ಮೀಸಲು ಪೊಲೀಸ್ ಪಡೆಯ ೪ನೆಯ ಬೆಟಾಲಿಯನ್ ಕಮಾಂಡರ್ ಆಗಿದ್ದರು. ಅಧಿಕಾರ ಸ್ವೀಕರಿಸಿದ ಬಳಿಕ ಮಾತನಾಡಿದ ನಿಶಾ ಜೇಮ್ಸ್ ಕಾನೂನು ಸುವ್ಯವಸ್ಥೆ ಕಾಪಾಡುವುದು ನನ್ನ ಮೊದಲ ಆದ್ಯತೆ ಎಂದು ಹೇಳಿದ್ದಾರೆ.

Leave a Reply

Your email address will not be published. Required fields are marked *

nineteen + 2 =