ಉಡುಪಿ ಕೃಷಿ ಇಲಾಖೆಯ ವಿವಿಧ ಹುದ್ದೆಗೆ ಗುತ್ತಿಗೆ ಆಧಾರದಲ್ಲಿ ನೇಮಕ

Call us

Call us

Click here

Click Here

Call us

Call us

Visit Now

ಕುಂದಾಪ್ರ ಡಾಟ್ ಕಾಂ ಸುದ್ದಿ.
ಉಡುಪಿ,ಡಿ.29:
ಕೃಷಿ ಇಲಾಖೆ ವತಿಯಿಂದ ಅನುಷ್ಠಾನಗೊಳಿಸಲಾಗುತ್ತಿರುವ ಆತ್ಮ ಯೋಜನೆಯಡಿ ಗುತ್ತಿಗೆ ಆಧಾರದಲ್ಲಿ ಉಪ ಯೋಜನಾ ನಿರ್ದೇಶಕರು ಹಾಗೂ ಸಹಾಯಕ ತಾಂತ್ರಿಕ ವ್ಯವಸ್ಥಾಪಕರ ತಲಾ 1 ಹುದ್ದೆಗಳ ನೇಮಕಾತಿಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.

Call us

Call us

ನಗರದ ಜಂಟಿ ಕೃಷಿ ನಿರ್ದೇಶಕರ ಕಚೇರಿಯಲ್ಲಿ ಖಾಲಿ ಇರುವ ಉಪ ಯೋಜನಾ ನಿರ್ದೇಶಕರ ಹುದ್ದೆಗೆ ಮಾಸಿಕ 42,000 ರೂ. ವೇತನ ನಿಗಧಿಪಡಿಸಿದ್ದು, ಕೃಷಿ/ಕೃಷಿ ಸಂಬಂಧಿತ ವಿಷಯಗಳಲ್ಲಿ ಸ್ನಾತಕೋತ್ತರ ಪದವಿ ಹಾಗೂ ಸಂಶೋಧನಾ ಕ್ಷೇತ್ರದಲ್ಲಿ ಕನಿಷ್ಠ 5 ವರ್ಷಗಳ ಕ್ಷೇತ್ರ ಮಟ್ಟದ ಅನುಭವ ಹೊಂದಿರುವವರು ಹಾಗೂ ಬೈಂದೂರು ರೈತ ಸಂಪರ್ಕ ಕೇಂದ್ರದಲ್ಲಿ ಖಾಲಿ ಇರುವ ಸಹಾಯಕ ತಾಂತ್ರಿಕ ವ್ಯವಸ್ಥಾಪಕರ ಹುದ್ದೆಗೆ ಮಾಸಿಕ 25,000 ರೂ. ವೇತನ ನಿಗಧಿಪಡಿಸಿದ್ದು, ಕೃಷಿ/ಕೃಷಿ ಸಂಬಂಧಿತ ವಿಷಯಗಳಲ್ಲಿ ಪದವಿ ಹೊಂದಿರುವ, ವಿಸ್ತರಣಾ ಕ್ಷೇತ್ರಗಳಲ್ಲಿ ಅನುಭವವುಳ್ಳ ಸ್ಥಳಿಯ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದೆ./ ಕುಂದಾಪ್ರ ಡಾಟ್ ಕಾಂ ಸುದ್ದಿ/

ಅರ್ಜಿ ಸಲ್ಲಿಸಲು ಜನವರಿ 28 ಕೊನೆಯ ದಿನವಾಗಿದ್ದು, ಅರ್ಜಿ ನಮೂನೆ ಹಾಗೂ ಹೆಚ್ಚಿನ ಮಾಹಿತಿಗಾಗಿ ಜಂಟಿ ಕೃಷಿ ನಿರ್ದೇಶಕರು, ಸಿ ಬ್ಲಾಕ್, 2ನೇ ಮಹಡಿ, ರಜತಾದ್ರಿ, ಮಣಿಪಾಲ, ಉಡುಪಿ ದೂ.ಸಂಖ್ಯೆ: 0820-2574960 ಅನ್ನು ಸಂಪರ್ಕಿಸುವಂತೆ ಕೃಷಿ ಇಲಾಖೆಯ ಆತ್ಮಯೋಜನೆಯ ಯೋಜನಾ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Leave a Reply

Your email address will not be published. Required fields are marked *

4 × three =