ಹಿರಿಯ ಪತ್ರಕರ್ತ ಶ್ರೀಪತಿ ಹೆಗಡೆ ಹಕ್ಲಾಡಿ ಅವರಿಗೆ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪ್ರದಾನ

Call us

ಕುಂದಾಪ್ರ ಡಾಟ್ ಕಾಂ ಸುದ್ದಿ.
ಕುಂದಾಪುರ: ಹಿರಿಯ ಪತ್ರಕರ್ತ ಶ್ರೀಪತಿ ಹೆಗಡೆ ಹಕ್ಲಾಡಿ ಅವರಿಗೆ ಪತ್ರಿಕೋದ್ಯಮ ವಿಭಾಗದಲ್ಲಿ ಪ್ರಸಕ್ತ ಸಾಲಿನ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಲಭಿಸಿದೆ. ಉಡುಪಿ ಜಿಲ್ಲಾಧಿಕಾರಿ ಜಿ. ಜಗದೀಶ್, ಶಾಸಕ ಕೆ. ರಘುಪತಿ ಭಟ್, ಕರಾವಳಿ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಮಟ್ಟಾರು ರತ್ನಾಕರ ಹೆಗ್ಡೆ, ಜಿಲ್ಲಾ ಪಂಚಾಯತ್ ಅಧ್ಯಕ್ಷ ದಿನಕರ ಬಾಬು, ಅಪರ ಜಿಲ್ಲಾಧಿಕಾರಿ ಸದಾಶಿವ ಪ್ರಭು, ಜಿಲ್ಲಾ ಕಸಾಪ ಅಧ್ಯಕ್ಷ ನೀಲಾವರ ಸುರೇಂದ್ರ ಅಡಿಗ ಮೊದಲಾದವರ ಉಪಸ್ಥಿತಿಯಲ್ಲಿ ಪ್ರಶಸ್ತಿ ಪ್ರದಾನ ಮಾಡಲಾಯಿತು.

Call us

ನೇರ, ದಿಟ್ಟ ವರದಿಗಾರಿಕೆಯ ಮೂಲಕ ಪತ್ರಿಕಾರಂಗದಲ್ಲಿ ತನ್ನದೇ ಆದ ಛಾಪು ಮೂಡಿಸಿದ ಹಿರಿಯ ಪತ್ರಕರ್ತ, ವಿಜಯವಾಣಿ ಪತ್ರಿಕೆಯ ಜಿಲ್ಲಾ ವರದಿಗಾರ ಶ್ರೀಪತಿ ಹೆಗಡೆ ಹಕ್ಲಾಡಿ ಅವರ ಹತ್ತಾರು ವರದಿಗಳು ಮಹತ್ತರ ಸಾಮಾಜಿಕ ಬದಲಾವಣೆಗೆ ಕಾರಣವಾಗಿರುವುದಲ್ಲದೇ, ಆಡಳಿತಯಂತ್ರವನ್ನು ನಿರಂತರವಾಗಿ ಎಚ್ಚರಿಸುತ್ತಲೇ ಬಂದಿದೆ.

Call us

ಹಕ್ಲಾಡಿ ಅವರಿಗೆ ಕರ್ನಾಟಕ ರಾಜ್ಯ ಕಲಾವಿದರ ಕಲ್ಯಾಣ ವೇದಿಕೆಯು ಕೊಡಮಾಡುವ ಆರನೇ ವರ್ಷದ `ಕಡಲ ತೀರದ ಭಾರ್ಗವ ಡಾ.ಕೆ.ಶಿವರಾಮ ಕಾರಂತ ಸದ್ಭಾವನಾ ರಾಜ್ಯ ಪ್ರಶಸ್ತಿ’, ಮಾನವ ಹಕ್ಕು ಮಂಡಳಿ- ಬೆಂಗಳೂರು ಸಂಸ್ಥೆಯು ಕೊಡಮಾಡುವ ರಾಜ್ಯ ಮಟ್ಟದ ‘ಟಿಪ್ಪು ಸುಲ್ತಾನ್ ಸದ್ಭಾವನಾ ಪ್ರಶಸ್ತಿ’, ಬಿಜಾಪುರದ ಶ್ರೀ ಬಸವೇಶ್ವರ ಕರ್ಮವೀರ ಕಲಾ ಸಾಹಿತ್ಯ ಸಾಂಸ್ಕೃತಿಕ ವೇದಿಕೆಯು ಕೋಡಮಾಡುವ ‘ಬಸವ ಜ್ಯೋತಿ ರಾಜ್ಯ ಪ್ರಶಸ್ತಿ’, ಕಾರ್ಮಿಕ ವೇದಿಕೆ ರಾಜ್ಯೋತ್ಸವ ಪ್ರಶಸ್ತಿ ಸೇರಿದಂತೆ ಹಲವಾರು ಪ್ರಶಸ್ತಿ, ಪುರಸ್ಕಾರಗಳು ದೊರೆತಿವೆ.

Leave a Reply

Your email address will not be published. Required fields are marked *

2 × four =