ಹಿಂದುಳಿದ ವರ್ಗಗಳ ಆಯೋಗದ ರಾಜ್ಯಾಧ್ಯಕ್ಷರಾಗಿ ಕೆ. ಜಯಪ್ರಕಾಶ್ ಹೆಗ್ಡೆ ನೇಮಕ

Call us

ಕುಂದಾಪ್ರ ಡಾಟ್ ಕಾಂ ಸುದ್ದಿ.
ಕುಂದಾಪುರ: ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ಆಯೋಗದ ರಾಜ್ಯಾಧ್ಯಕ್ಷರಾಗಿ ಮಾಜಿ ಸಚಿವ ಹಾಗೂ ಬಿಜೆಪಿ ನಾಯಕ ಕೆ. ಜಯಪ್ರಕಾಶ್ ಹೆಗ್ಡೆ ಅವರನ್ನು ನೇಮಕ ಮಾಡಿ ಸರಕಾರ ಆದೇಶ ಹೊರಡಿಸಿದೆ.

Call us

ಕರ್ನಾಟಕ ಸರಕಾರವು ಕೆ. ಜಯಪ್ರಕಾಶ್ ಹೆಗ್ಡೆ ಅವರನ್ನು ರಾಜ್ಯ ಹಿಂದುಳಿದ ವರ್ಗಗಳ ಆಯೋಗದ ಅಧ್ಯಕ್ಷರನ್ನಾಗಿ ನೇಮಿಸಿದೆ ಎಂದು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಸರಕಾರದ ಅಧೀನ ಕಾರ್ಯದರ್ಶಿ-1 ಅವರು ರಾಜ್ಯಪಾಲರ ಆದೇಶಾನುಸಾರ ಅಧಿಸೂಚನೆ ಪ್ರಕಟಿಸಿದ್ದಾರೆ.

Call us

ಕೆ. ಜಯಪ್ರಕಾಶ್ ಹೆಗ್ಡೆ ಅವರು ಮೂರು ಬಾರಿ ಶಾಸಕರಾಗಿ, ಒಂದು ಭಾರಿ ಮೀನುಗಾರಿಕಾ ಸಚಿವರಾಗಿ,  ಉಡುಪಿ ಚಿಕ್ಕಮಗಳೂರು ಸಂಸದರಾಗಿಯೂ ರಾಜಕೀಯದಲ್ಲಿ ಸೇವೆ ಸಲ್ಲಿಸಿದ್ದರು.

 

Leave a Reply

Your email address will not be published. Required fields are marked *

20 − 20 =