ಕಬಡ್ಡಿ ಪಂದ್ಯ: ಕೊಲ್ಲೂರು ದೇವಳದ ಪದವಿಪೂರ್ವ ಕಾಲೇಜಿನ ಬಾಲಕಿಯರು ದ್ವಿತೀಯ

ಕುಂದಾಪ್ರ ಡಾಟ್ ಕಾಂ ಸುದ್ದಿ.
ಕೊಲ್ಲೂರು: ಉಡುಪಿ ಜಿಲ್ಲಾ ಪದವಿ ಪೂರ್ವ ಶಿಕ್ಷಣ ಇಲಾಖೆ ಹಾಗೂ ಶಿರೂರು ಸರಕಾರಿ ಪದವಿ ಪೂರ್ವ ಕಾಲೇಜು ಆಶ್ರಯದಲ್ಲಿ ನಡೆದ ಉಡುಪಿ ಜಿಲ್ಲಾಮಟ್ಟದ ಪದವಿ ಪೂರ್ವ ಕಾಲೇಜುಗಳ ಕಬಡ್ಡಿ ಪಂದ್ಯಾವಳಿಯಲ್ಲಿ ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಳದ ಪದವಿ ಪೂರ್ವ ಕಾಲೇಜು ಬಾಲಕಿಯರ ಕಬಡ್ಡಿ ತಂಡ ದ್ವಿತೀಯ ಸ್ಥಾನ ಪಡೆದುಕೊಂಡಿದೆ.

ದ್ವಿತೀಯ ಸ್ಥಾನ ವಿಜೇತ ವಿದ್ಯಾರ್ಥಿಗಳೊಂದಿಗೆ ದೈಹಿಕ ಶಿಕ್ಷಣ ಉಪನ್ಯಾಸಕ ಸುಕೇಶ್ ಶೆಟ್ಟಿ ಹೊಸಮಠ, ದೈಹಿಕ ಶಿಕ್ಷಣ ಶಿಕ್ಷಕ ಸಚಿನ್ ಕುಮಾರ್ ಶೆಟ್ಟಿ ಹುಂಚನಿ ಹಾಗೂ ಉಪನ್ಯಾಸಕರಾದ ನಾಗರಾಜ್ ಅಡಿಗ ಮತ್ತು ಹಳೆ ವಿದ್ಯಾರ್ಥಿ ಪ್ರದೀಪ್ ಭಟ್ ಇದ್ದರು.

 

Leave a Reply

Your email address will not be published. Required fields are marked *

one × 5 =