ಗೋಪಾಡಿ ಗ್ರಾಪಂ ಉಪಾಧ್ಯಕ್ಷರಾಗಿ ಕಲ್ಪನಾ ಭಾಸ್ಕರ್ ಅವಿರೋಧ ಆಯ್ಕೆ

Click Here

Call us

Call us

ಕುಂದಾಪ್ರ ಡಾಟ್ ಕಾಂ ಸುದ್ದಿ.
ಕುಂದಾಪುರ: ತಾಲೂಕಿನ ಗೋಪಾಡಿ ಗ್ರಾಮ ಪಂಚಾಯತ್ ಉಪಾಧ್ಯಕ್ಷ ಸ್ಥಾನಕ್ಕೆ ಕಲ್ಪನಾ ಭಾಸ್ಕರ ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಕುಂದಾಪುರ ತಹಶೀಲ್ದಾರರಾದ ಗಾಯತ್ರಿ ನಾಯಕ್ ಚುನಾವಣಾ ಪ್ರಕ್ರಿಯೆಯನ್ನು ನಡೆಸಿಕೊಟ್ಟರು. ತಾಲೂಕು ಪಂಚಾಯತ್ ಸದಸ್ಯರಾಗಿ ಆಯ್ಕೆಯಾದ ವೈಲೆಟ್ ಬೆರೆಟ್ಟೋ ಅವರಿಂದ ತೆರವಾದ ಉಪಾಧ್ಯಕ್ಷ ಸ್ಥಾನಕ್ಕೆ ಚುನಾವಣೆ ನಡೆದಿತ್ತು.

Click Here

Call us

Call us

Visit Now

ಸಾಗರ್ ಕ್ರೆಡಿಟ್ ಕೋ-ಅಪರೇಟೀವ್ ಸೊಸೈಟಿಯ ನಿರ್ದೇಶಕರಾಗಿ, ತೆಕ್ಕಟ್ಟೆ ಸೇವಾ ಸಂಗಮ ವಿದ್ಯಾಕೇಂದ್ರದ ಆಡಳಿತ ಮಂಡಳಿ ಸದಸ್ಯರಾಗಿ, ಕೋಟೇಶ್ವರ ಶಾಂತಿಧಾಮ ಪೂರ್ವ ಗುರುಕುಲ ಪ್ರಾಥಮಿಕ ಶಾಲೆ ಆಡಳಿತ ಮಂಡಳಿ ಸದಸ್ಯರಾಗಿ, ರಾಷ್ಟ್ರ ಸೇವಿಕಾ ಸಮಿತಿಯ ಕುಂದಾಪುರ ತಾಲೂಕು ಕಾರ್ಯ ವಾಹಿಕಾರಾಗಿ, ಬಸ್ರೂರು ನಿವೇದಿತ ಪ್ರೌಢಶಾಲೆಯ ಹಳೆ ವಿದ್ಯಾರ್ಥಿ ಸಂಘದ ಜೊತೆ ಕಾರ್ಯದರ್ಶಿಯಾಗಿ, ಬಸ್ರೂರು ಶಾರದಾ ಕಾಲೇಜಿನ ಹಳೆ ವಿದ್ಯಾರ್ಥಿ ಸಂಘದ ಸಂಘಟನಾ ಕಾರ್ಯದರ್ಶಿಯಾಗಿ, ಮಾತಾ ಅಮೃತಾನಂದಮಯಿ ಸೇವಾ ಸಮಿತಿ ಕುಂದಾಪುರದ ಕಾರ್ಯದರ್ಶಿಯಾಗಿ, ಕುಂದಾಪುರದ ನೃತ್ಯ ವಸಂತ ನಾಟ್ಯಾಲಯದ ಟ್ರಸ್ಟಿಯಾಗಿ, ರೋಟರಿ ಕ್ಲಬ್ ಕುಂದಾಪುರ ಸನ್‌ರೈಸ್‌ನ ನಿಯೋಜಿತ ಅಧ್ಯಕ್ಷರಾಗಿ, ರೋಟರಿ 3182 ಇದರ ವಲಯ ವುಮೇನ್ ಮೆಂಬರ್‌ಶಿಪ್ ಡೆವೆಲಂಪ್‌ಮೆಂಟ್‌ನ ಸಂಯೋಜಕರಾಗಿ ಸೇವೆ ಸಲ್ಲಿಸುತ್ತಿದ್ದಾರೆ. ಬಿಲ್ಲವ ಸಮಾಜ ಸೇವಾ ಸಂಘದ ಮಾಜಿ ಉಪಾಧ್ಯಕ್ಷರಾಗಿ, ಬಿಲ್ಲವ ಮಹಿಳಾ ಘಟಕದ ಮಾಜಿ ಅಧ್ಯಕ್ಷರಾಗಿ ಹತ್ತು ಹಲವು ಸಂಘ ಸಂಸ್ಥೆಗಳಲ್ಲಿ ಸಮ್ಮನ್ನು ಸಕ್ರಿಯವಾಗಿ ತೊಡಗಿಸಕೊಂಡ ಅನುಭವವನ್ನು ಹೊಂದಿದ್ದಾರೆ.

Click here

Click Here

Call us

Call us

Kalpana bhaskar gopal gp VP

Leave a Reply

Your email address will not be published. Required fields are marked *

18 − thirteen =