ಕುಂದಾಪ್ರ ಡಾಟ್ ಕಾಂ ಸುದ್ದಿ.
ಬೈಂದೂರು: ಖಂಬದಕೋಣೆ ರೈತರ ಸೇವಾ ಸಹಕಾರಿ ಸಂಘದ ವತಿಯಿಂದ ಮಂಗಳವಾರ ತಾಲೂಕು ಆಡಳಿತಕ್ಕೆ ಕೋವಿಡ್ ಕೇರ್ ಸೆಂಟರ್ಗೆ ಅಗತ್ಯವಿರುವ ಸಾಮಾಗ್ರಿಗಳನ್ನು ಹಸ್ತಾಂತರಿಸಲಾಯಿತು. ಖಂಬದಕೋಣೆ ರೈತರ ಸೇವಾ ಸಹಕಾರಿ ಸಂಘ ಉಪ್ಪುಂದದ ಅಧ್ಯಕ್ಷರಾದ ಎಸ್. ಪ್ರಕಾಶ್ಚಂದ್ರ ಶೆಟ್ಟಿ ಅವರು ಕುಂದಾಪುರ ಉಪವಿಭಾಗಾಧಿಕಾರಿ ರಾಜು ಕೆ.ಅವರಿಗೆ ಕೋವಿಡ್ ಕೇರ್ ಸಾಮಾಗ್ರಿಗಳನ್ನು ಹಸ್ತಾಂತರಿಸಿದರು.
ಈ ಸಂದರ್ಭ ಬೈಂದೂರು ತಹಶೀಲ್ದಾರ ಶೋಭಾಲಕ್ಷ್ಮೀ ಎಚ್. ಎಸ್., ಖಂಬದಕೋಣೆ ರೈತರ ಸೇವಾ ಸಹಕಾರಿ ಸಂಘದ ಉಪಾಧ್ಯಕ್ಷ ಈಶ್ವರ ಹಕ್ಲತೋಡು, ಮುಖ್ಯ ಕಾರ್ಯನಿರ್ವಹಣಾಧಿಕಾರಿ ವಿಷ್ಣು ಪೈ, ಮ್ಯಾನೇಜರ್ ಚಂದ್ರಯ್ಯ ಶೆಟ್ಟಿ ಮತ್ತಿತರರು ಉಪಸ್ಥಿತರಿದ್ದರು.