ಜೂನ್ 7ರ ತನಕ ಲಾಕ್‌ಡೌನ್ ವಿಸ್ತರಣೆ. ಬೆಳಗ್ಗೆ 10 ಗಂಟೆ ಬಳಿಕ ಓಡಾಡಿದ್ರೆ ಶಿಸ್ತು ಕ್ರಮ: ಸಿಎಂ

ಕುಂದಾಪ್ರ ಡಾಟ್ ಕಾಂ ಸುದ್ದಿ.
ಬೆಂಗಳೂರು: ರಾಜ್ಯದಲ್ಲಿ ಮತ್ತೆ 14 ದಿನಗಳ ಕಾಲ ಲಾಕ್‌ಡೌನ್ ವಿಸ್ತರಣೆ ಮಾಡಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಘೋಷಣೆ ಮಾಡಿದ್ದು, ಜೂನ್ 7ರ ತನಕ ಲಾಕ್‌ಡೌನ್ ಮುಂದುವರಿಯಲಿದೆ.

ಕೋವಿಡ್ ಪರಿಸ್ಥಿತಿ ಮತ್ತು ಲಾಕ್ಡೌನ್ ವಿಸ್ತರಣೆ ಕುರಿತು ಇಂದು ಸಿಎಂ ನಿವಾಸ ಕಾವೇರಿಯಲ್ಲಿ ಸಿಎಂ ಬಿಎಸ್ ಯಡಿಯೂರಪ್ಪ ನೇತೃತ್ವದಲ್ಲಿ ಸಭೆ ನಡೆಸಲಾಗಿದ್ದು, ಸಭೆ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಈ ನಿರ್ಧಾರ ಪ್ರಕಟಿಸಿದ್ದಾರೆ.

ಲಾಕ್ಡೌನ್ನಿಂದ ಸೋಂಕಿನ ಪ್ರಮಾಣ ಇಳಿಕೆಯಾಗುತ್ತಿದ್ದು, ಜನರ ಹಿತದೃಷ್ಟಿಯಿಂದ ಮತ್ತೆ ಲಾಕ್‌ಡೌನ್ ಬಗ್ಗೆ ನಿರ್ಧಾರ ಕೈಗೊಳ್ಳಲಾಗಿದೆ. ಜನ ಸಹಕರಿಸಬೇಕು. ಕೊರೊನಾ ನಿಯಂತ್ರಣಕ್ಕೆ ಮತ್ತೆ ಎರಡು ವಾರಗಳ ಕಾಲ ಲಾಕ್‌ಡೌನ್ ವಿಧಿಸಲಾಗುತ್ತಿದ್ದು, ಮೇ 24 ರಿಂದ ಜೂನ್ 7ರ ವರೆಗೆ ವಿಸ್ತರಣೆ ಮಾಡಲಾಗಿದೆ. ಈ ಹಿಂದಿನ ಲಾಕ್‌ಡೌನ್ ಮಾರ್ಗಸೂಚಿಗಳೇ ಮುಂದುವರಿಯುತ್ತವೆ ಎಂದು ಲಾಕ್ಡೌನ್ ಮಾರ್ಗಸೂಚಿಗಳ ಕುರಿತು ಎಂದು ಸಿಎಂ ತಿಳಿಸಿದ್ದಾರೆ.

ಬೆಳಗ್ಗೆ 10 ಗಂಟೆ ನಂತರ ಸಹ ಜನ ಬೇಕಾಬಿಟ್ಟಿಯಾಗಿ ಓಡಾಡುತ್ತಿದ್ದಾರೆ. ಪೊಲೀಸರು ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಬೇಕು, 9 ಗಂಟೆಗೆ ಮನೆಗೆ ಸೇರಬೇಕು, 10 ಗಂಟೆ ಬಳಿಕ ಯಾರೂ ಸಂಚರಿಸಕೂಡದು ಎಂದು ಪೊಲೀಸರಿಗೆ ತಿಳಿಸಿದ್ದಾರೆ. ಬೆಳಗ್ಗೆ 10 ಗಂಟೆ ಬಳಿಕ ಯಾರೇ ಓಡಾಡಿದರೂ ಅಂತಹವರ ವಿರುದ್ಧ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳುತ್ತೇವೆ. ಈ ಕುರಿತು ಪೊಲೀಸರಿಗೆ ಸೂಚನೆ ನೀಡಲಾಗಿದೆ ಎಂದು ಸಿಎಂ ತಿಳಿಸಿದರು.

Leave a Reply

Your email address will not be published. Required fields are marked *

eleven + 18 =