ಗಣೇಶೋತ್ಸವ ಆಚರಣೆಗೆ ರಾಜ್ಯ ಸರ್ಕಾರದ ಮಾರ್ಗಸೂಚಿ ಪ್ರಕಟ

Call us

Call us

ಕುಂದಾಪ್ರ ಡಾಟ್ ಕಾಂ ಸುದ್ದಿ.
ಉಡುಪಿ: ಕೇಂದ್ರ ಸರಕಾರದ ತೆರವು ಮಾರ್ಗಸೂಚಿ ಅಗಸ್ಟ್ 31ರ ತನಕ ಜಾರಿಯಲ್ಲಿದ್ದು, ಯಾವುದೇ ಧಾರ್ಮಿಕ ಆಚರಣೆಗಳಿಗೆ ಅನುಮತಿ ಇಲ್ಲದಿರುವುದರಿಂದ ಗಣೇಶ ಚತುರ್ಥಿ ಹಬ್ಬವನ್ನು ಸಾರ್ವಜನಿಕವಾಗಿ ನಡೆಸುವಂತಿಲ್ಲ. ಮನೆಯಲ್ಲೇ ಅಥವಾ ದೇವಸ್ಥಾನದಲ್ಲಿ ಸರಳವಾಗಿ ಸರಕಾರದ ಮಾರ್ಗಸೂಚಿ ಅನ್ವಯ ಆಚರಿಸಲು ಅವಕಾಶ ನೀಡಿ ರಾಜ್ಯ ಸರಕಾರ ಆದೇಶ ಹೊರಡಿಸಿದೆ.

Click Here

Call us

Call us

ರಾಜ್ಯ ಸರಕಾರದ ಮಾರ್ಗಸೂಚಿ:

Click here

Click Here

Call us

Visit Now

  • ಗಣೇಶ ಚತುರ್ಥಿ ಹಬ್ಬವನ್ನು ಸರಳ ರೀತಿಯಲ್ಲಿ ಭಕ್ತಿ ಪೂರ್ವಕವಾಗಿ ದೇವಸ್ಥಾನದೊಳಗೆ ಅಥವಾ ತಮ್ಮ ಮನೆಗಳಲ್ಲಿಯೇ ಆಚರಿಸುವುದು. ಕುಂದಾಪ್ರ ಡಾಟ್ ಕಾಂ ಸುದ್ದಿ.
  • ಗಣೇಶೋತ್ಸವ ಹಬ್ಬವನ್ನು ಸಾರ್ವಜನಿಕ ಸ್ಥಳ (ಉದಾ-ರಸ್ತೆ, ಗಲ್ಲಿ, ಓಣಿ, ಮೈದಾನ ಇತ್ಯಾದಿ) ಗಳಲ್ಲಿ ಪ್ರತಿಷ್ಠಾಪಿಸಬಾರದು.
  • ಯಾವುದೇ ಕಾರಣಕ್ಕೂ ಸಾರ್ವಜನಿಕ ನದಿ, ಕೆರೆ, ಕೊಳ, ಬಾವಿ ಮತ್ತು ಕಲ್ಯಾಣಿಗಳಲ್ಲಿ ವಿಸರ್ಜನೆ ಮಾಡತಕ್ಕದ್ದಲ್ಲ.
  • ಗಣೇಶ ಮೂರ್ತಿ ತರುವಾಗ ಹಾಗೂ ವಿಸರ್ಜಿಸುವಾಗ ಅಥವಾ ಯಾವುದೇ ಸಂದರ್ಭಗಳಲ್ಲಿ ಮೆರವಣಿಗೆಯನ್ನು ಹೊರಡಿಸತಕ್ಕದ್ದಲ್ಲ/ಮಾಡತಕ್ಕದ್ದಲ್ಲ. ಇದನ್ನು ಸಂಪೂರ್ಣವಾಗಿ ನಿರ್ಬಂಧಿಸಲಾಗಿದೆ.
  • ಮನೆಯಲ್ಲಿ ಪ್ರತಿಷ್ಠಾಪಿಸಿದ ಗಣೇಶ ಮೂರ್ತಿಗಳನ್ನು ಅವರ ಮನೆ ಆವರಣದಲ್ಲಿಯೇ ವಿಸರ್ಜನೆ ಮಾಡುವುದು.
  • ಗಣೇಶ ಹಬ್ಬ ಆಚರಿಸುವ ದೇವಸ್ಥಾನಗಳಲ್ಲಿ ದಿನನಿತ್ಯ ಸ್ಯಾನಿಟೈಜೇಷನ್ ಮಾಡುವುದು ಮತ್ತು ದರ್ಶನಕ್ಕಾಗಿ ಆಗಮಿಸುವ ಭಕ್ತಾಧಿಗಳಿಗೆ ಸ್ಯಾನಿಟೈಸರ್ ಹಾಗೂ ಥರ್ಮಲ್ ಸ್ಕೀನಿಂಗ್ ವ್ಯವಸ್ಥೆ ಕಲ್ಪಿಸುವುದು. ಸಾಮಾಜಿಕ ಅಂತರ ಪಾಲಿಸುವುದು ಹಾಗೂ ಮಾಸ್ಕ್ ಧರಿಸುವುದು ಕಡ್ಡಾಯ. ಕುಂದಾಪ್ರ ಡಾಟ್ ಕಾಂ ಸುದ್ದಿ.
  • ರಾಜ್ಯದಲ್ಲಿ ಕೊರೋನಾ ಸೋಂಕು ದಿನೇ ದಿನೇ ಹೆಚ್ಚಾಗುತ್ತಿದೆ. ಹೀಗಾಗಿ ರಾಜ್ಯದಲ್ಲಿ ಈ ವರ್ಷ ಹಬ್ಬಗಳ ಅದ್ದೂರಿ ಆಚರಣೆಯ ಸಂದರ್ಭ ಸರಕಾರದ ಮಾರ್ಗಸೂಚಿ ಕಟ್ಟುನಿಟ್ಟಾಗಿ ಪಾಲಿಸುವುದು ಹಾಗೂ ಆರೋಗ್ಯ ಇಲಾಖೆ, ಪೊಲೀಸ್ ಇಲಾಖೆ, ಜಿಲ್ಲಾಡಳಿತ, ಸ್ಥಳೀಯಾಡಳಿತ ಹೊರಡಿಸುವ ಸೂಚನೆಯನ್ನು ಕಟ್ಟುನಿಟ್ಟಾಗಿ ಪಾಲಿಸುವುದು.

ಹಬ್ಬ ಆಚರಣೆಯ ಸಂದರ್ಭ ಸ್ಥಳೀಯಾಡಳಿತ/ಪೊಲೀಸ್ ಇಲಾಖೆ ಸೇರಿದಂತೆ ಸರಕಾರ ನೀಡುವ ಮಾರ್ಗಸೂಚಿಗಳನ್ನು ಕಡ್ಡಾಯವಾಗಿ ಅನುಸರಿಸಿ ಶಾಂತಿಯುತವಾಗಿ ಹಬ್ಬ ಆಚರಿಸುವಂತೆ ಮಾರ್ಗಸೂಚಿಯಲ್ಲಿ ತಿಳಿಸಲಾಗಿದೆ/ಕುಂದಾಪ್ರ ಡಾಟ್ ಕಾಂ ಸುದ್ದಿ/

Leave a Reply

Your email address will not be published. Required fields are marked *

16 − six =