ಅ.21ಕ್ಕೆ ಪುಂಡಲೀಕ ನಾಯಕ್ ಅವರ ಕಿರು ಗೆಜ್ಜೆ ಕವನ ಸಂಕಲನ ಬಿಡುಗಡೆ

ಕುಂದಾಪ್ರ ಡಾಟ್ ಕಾಂ ಸುದ್ದಿ.
ಕುಂದಾಪುರ: ಕವಿ ಹೃದಯ, ಸಾಹಿತಿ ಕೆ. ಪುಂಡಲೀಕ ನಾಯಕ್ ಅವರ ಚೊಚ್ಚಲ ಕೃತಿ ‘ಕಿರುಗೆಜ್ಜೆ’ ಕವನ ಸಂಕಲನ ಅನಾವರಣ ಹಾಗೂ ಕವಿಗೋಷ್ಠಿ ಕಾರ್ಯಕ್ರಮ ಅಕ್ಟೋಬರ್ 21ರ ರವಿವಾರ ಬೆಳಿಗ್ಗೆ 9:30ಕ್ಕೆ ಉಪ್ಪುಂದ ‘ರೈತಸಿರಿ’ ಸಭಾಭವನದಲ್ಲಿ ಜರುಗಲಿದೆ.

ಹಿರಿಯ ಕವಿ ಎಂ.ಜೆ. ದೇಶಪಾಂಡೆ ಕಾರ್ಯಕ್ರಮ ಉದ್ಘಾಟಿಸಲಿದ್ದು, ಹಿರಿಯ ಸಾಹಿತಿ ಯು.ಚಂದ್ರಶೇಖರ್ ಹೊಳ್ಳ ಅಧ್ಯಕ್ಷತೆ ವಹಿಸಲಿದ್ದಾರೆ. ಖಂಬದಕೋಣೆ ರೈತರ ಸೇವಾ ಸಹಕಾರಿ ಸಂಘದ ಅಧ್ಯಕ್ಷ ಎಸ್.ಪ್ರಕಾಶ್ಚಂದ್ರ ಶೆಟ್ಟಿ ಕೃತಿ ಅನಾವರಣ ಮಾಡಲಿದ್ದಾರೆ. ವಾಗ್ಮಿ ಎಂ.ಗೋವಿಂದ ನಾಯ್ಕನಕಟ್ಟೆ ಪುಸ್ತಕ ಪರಿಚಯ ಮಾಡಲಿದ್ದಾರೆ. ಹಲವು ಅತಿಥಿ ಗಣ್ಯರು ಸಭೆಯಲ್ಲಿ ಭಾಗವಹಿಸಲಿದ್ದಾರೆ.

ಮಧ್ಯಾಹ್ನ 1:30ರಿಂದ ರಾಜ್ಯಮಟ್ಟದ ಕವಿಗೋಷ್ಠಿ ನಡೆಯಲಿದ್ದು ಸುಮಾರು 24 ಕವಿಗಳು ಭಾಗವಹಿಸಲಿದ್ದಾರೆ. ಕ.ಸಾ.ಪ ಜಿಲ್ಲಾಧ್ಯಕ್ಷ ನೀಲಾವರ ಸುರೇಂದ್ರ ಅಡಿಗರು ಅಧ್ಯಕ್ಷತೆ ವಹಿಸಲಿದ್ದಾರೆ. ಕಸಾಪ ಗೌರವ ಕಾರ್ಯದರ್ಶಿ ಸುಬ್ರಹ್ಮಣ್ಯ ಭಟ್, ಉಪನ್ಯಾಸಕಕ ರಮೇಶ್ ಕಡಮೆ ಸೇರಿದಂತೆ ಹಲವು ಅತಿಥಿ ಗಣ್ಯರು ಸಭೆಯಲ್ಲಿ ಭಾಗವಹಿಸಲಿದ್ದಾರೆ.
 

Leave a Reply

Your email address will not be published. Required fields are marked *

nineteen − seventeen =