ಕೋಟೇಶ್ವರ ಶ್ರೀ ಕೋಟಿಲಿಂಗೇಶ್ವರ ದೇವಳದ ಮನ್ಮಹಾರಥೋತ್ಸವ ಸಂಪನ್ನ

Call us

Call us

ಕುಂದಾಪ್ರ ಡಾಟ್ ಕಾಂ ಸುದ್ದಿ.
ಕುಂದಾಪುರ:
ಕರಾವಳಿಯ ಸಪ್ತ ಪುಣ್ಯ ಕ್ಷೇತ್ರಗಳಲ್ಲಿ ಒಂದಾದ ಕೋಟೇಶ್ವರ ಶ್ರೀ ಕೋಟಿಲಿಂಗೇಶ್ವರ ದೇವಸ್ಥಾನದ ಧ್ವಜ ಪ್ರತಿಷ್ಠಾಪನೆ, ಬ್ರಹ್ಮಕಲಶೋತ್ಸವದ ಅಂಗವಾಗಿ ಬುಧವಾರ ಮನ್ಮಹಾರಥೋತ್ಸವ ಸಂಭ್ರಮದಿಂದ ಜರುಗಿತು.

Call us

Call us

ಬೆಳಿಗ್ಗೆ ಶ್ರೀದೇವರ ರಥಾರೋಹಣ ಪೂರ್ವ ವಿಧಿಗಳು ಆರಂಭಗೊಂಡವು. ತಂತ್ರಿಗಳು ಧಾರ್ಮಿಕ ವಿಧಿ ನೆರವೇರಿಸಿ ರಥೋತ್ಸವಕ್ಕೆ ಚಾಲನೆ ನೀಡಿದರು.

Call us

Call us

ಶ್ರೀದೇವರಿಗೆ ಶತರುದ್ರಾಭಿಷೇಕ ಇನ್ನಿತರ ಧಾರ್ಮಿಕ ವಿಧಿ ನಡೆದ ಬಳಿಕ ಸಹಸ್ರಾರು ಭಕ್ತರ ಜಯಘೋಷದೊಂದಿಗೆ ಭವ್ಯ ರಥೋತ್ಸವ ನಡೆಯಿತು. ಬ್ರಹ್ಮಕಲಶೋತ್ಸವ ಸಮಿತಿ, ವ್ಯವಸ್ಥಾಪನಾ ಸಮಿತಿಯ ಅಧ್ಯಕ್ಷರು, ಸದಸ್ಯರುಗಳು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.

ಹಬ್ಬದ ಅಂಗವಾಗಿ ಕುಂದಾಪುರ ಡಿವೈಎಸ್‌ಪಿ ನೇತೃತ್ವದಲ್ಲಿ ಬಿಗಿ ಪೊಲೀಸ್ ಬಂದೋವಸ್ತ್ ಮಾಡಲಾಗಿತ್ತು.

Leave a Reply

Your email address will not be published. Required fields are marked *

one × four =